Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಇನ್ಫೋಸಿಸ್ ಸಂಸ್ಥೆಯವರು ಬೃಹಸ್ಪತಿಗಳೇ?-ಸಿಎಂ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇನ್ಫೋಸಿಸ್‌ಸಂಸ್ಥೆಯ ಮುಖ್ಯಸ್ಥರಾದ ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ ಅವರು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಿಲ್ಲ, ನಾವು ಹಿಂದುಳಿದ ಜಾತಿಯವರಲ್ಲ ಎಂದು ದೃಢೀಕರಣ ಪತ್ರ ನೀಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.

ಸಮೀಕ್ಷೆ ಕೇವಲ ಹಿಂದುಳಿದವರಿಗಲ್ಲಾ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ಇನ್ಫೋಸಿಸ್ ಸಂಸ್ಥೆಯವರು ಅಂದರೆ ಅವರು ಬೃಹಸ್ಪತಿಗಳೇ? ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ.


ಸರ್ಕಾರ ಮಾಡುತ್ತಿರುವುದು ಹಿಂದುಳಿದವರ ಸಮೀಕ್ಷೆಯಲ್ಲ ಎಂದು ಈಗಾಗಲೇ ಹೇಳಿದೆ. ಇದು ಎಲ್ಲಾ ಜನರನ್ನು ಒಳಗೊಂಡಂತೆ ಮಾಡುತ್ತಿರುವ ಸಮೀಕ್ಷೆ. ಶಕ್ತಿ ಯೋಜನೆಯಡಿ ಬಡವರು, ಮೇಲ್ಜಾತಿಯವರು ಎಲ್ಲರೂ ಬಳಸಿಕೊಳ್ಳುತ್ತಾರೆ.

ಈ ಬಗ್ಗೆ ತಪ್ಪು ಮಾಹಿತಿ ಹೋಗಿದೆ. ಸರ್ಕಾರ ಈ ಬಗ್ಗೆ ಜಾಹೀರಾತು ನೀಡಿದೆ, ಸಚಿವರು ಹಾಗೂ ಮುಖ್ಯಮಂತ್ರಿಗಳ ಸಂದೇಶಗಳನ್ನು ಜನರಿಗೆ ತಲುಪಿಸಲಾಗಿದೆ ಎಂದು ಸಿಎಂ ತಿಳಿಸಿದರು.


ಸಮೀಕ್ಷೆಯನ್ನು ಹಿಂದುಳಿದವರ ಸಮೀಕ್ಷೆಯೆಂದು ಭಾವಿಸುವುದು ತಪ್ಪು. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರವೂ ಜಾತಿಗಣತಿಯನ್ನು ಮಾಡುತ್ತದೆ, ಆಗಲೂ ಇವರು ಸಹಕರಿಸುವುದಿಲ್ಲವೇ? ಅವರಿಗಿರುವ ತಪ್ಪು ಮಾಹಿತಿಯಿಂದಾಗಿ ಈ ರೀತಿ ಅಸಹಕಾರ ತೋರುತ್ತಿರಬಹುದು.

ರಾಜ್ಯದಲ್ಲಿ ಸುಮಾರು 7 ಕೋಟಿ ಜನಸಂಖ್ಯೆಯಿದ್ದು, ಈ ಜನರ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ