ಹೊಸಪೇಟೆ. ಅ.೧೨ ಚುನಾವಣಾ ಆಯುಕ್ತ ರಾದ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಹಾಗೂ ಎಸ್.ಐ.ಆರ್ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.
ಸ್ಥಳೀಯ ಡಾ.ಬಿ,ಅರ್.ಅಂಬೇಡ್ಕರ್ ವೃತ್ತದಿಂದ ತಹಶಿಲ್ದಾರರ ಕಛೇರಿ ವರೆಗೆ ಹೊಸಪೇಟೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ತಹಶಿಲ್ದಾರರ ಕಛೇರಿ ಎದುರು ಪ್ರತಿಭಟನೆ ನಡೆಸಿ, ನಂತರ ತಹಶಿಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಡಿ.ವೆಂಕಟರಮಣ, ಸ್ವತಂತ್ರ ಹಾಗೂ ಪಾರದರ್ಶಕ ವಾಗಿ ಕಾರ್ಯನಿರ್ವಹಿಸ ಗಮನಿಸಿದರೆ ಚುನಾವಣಾ ಅಯೋಗದ ಮೇಲಿನ ವಿಶ್ವಾಸ ಕುಸಿಯುವಂತೆ ಮಾಡಿದೆ. ಸಾರ್ವಜನಿಕರ ಹಿತಾಸಕ್ತಿಯನ್ನು ಕಾಯುವಲ್ಲಿ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿಫಲರಾಗಿದ್ದಾರೆ. ಈ ಹಿನ್ನಲೆಯಲ್ಲಿ ಚುನಾವಣಾ ಆಯುಕ್ತರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು. ಹಾಗೂ ಎಸ್.ಐ.ಆರ್ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಕುಮಾರ್, ವಕೀಲ ಹೆಚ್.ಮಹೇಶ್ ಮಾತನಾಡಿ, ಚುನಾವಣಾ ಅಕ್ರಮಗಳಲ್ಲಿ ಭಾಗಿಯಾಗಿರುವ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು. ಹಾಗೂ ಎಸ್.ಅರ್.ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಹುಡಾ ಅಧ್ಯಕ್ಷ ಹೆಚ್.ಎನ್.ಮಹಮದ್ ಇಮಾಮ್ ನಿಯಾಜಿ, ನಗರಸಭೆ ಸದಸ್ಯ ಕಾರಪುಡಿ ಮಹೇಶ್, ಮಾಜಿ ಸದಸ್ಯ ಪಲ್ಲೆದ ಸಿದ್ದೇಶ್, ಮುಖಂಡ ರಾದ ಎಲ್.ಸಿದ್ದನಗೌಡ, ಕೆ.ಬಡಾವಲಿ, ಯೋಗಲಕ್ಷ್ಮಿ, ಸೋಮಶೇಖರ್ ಬಣ್ಣದಮನೆ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.