LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಪಹಲ್ಗಾಮ್ ದಾಳಿಗೂ ಮುನ್ನವೇ ಪಾಕ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೆ'- ಜ್ಯೋತಿ ಮಲ್ಹೋತ್ರಾ

ನವದೆಹಲಿ : ಪಾಕ್ ಪರ ಬೇಹುಗಾರಿಕೆ ಆರೋಪದ ಮೇಲೆ ಬಂಧಿಸಲಾಗಿದ್ದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ, ಪಹಲ್ಗಾಮ್ ದಾಳಿ ನಡೆಯುವ ಮುನ್ನವೇ ಪಾಕ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದಾಳೆ ಎಂದು ವರದಿಯಾಗಿದೆ.

ಮೇ 17ರಂದು ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡಿದ ಆರೋಪದ ಮೇಲೆ ಹರಿಯಾಣ ಮೂಲದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಈ ಬಗ್ಗೆ ತನಿಖೆ ಆರಂಭಿಸಿದ್ದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಪಾಕಿಸ್ತಾನಿ ಗುಪ್ತಚರ ಏಜೆಂಟ್‌ಗಳೊಂದಿಗೆ ಸಂಪರ್ಕ ಹೊಂದಿರುವುದಾಗಿ ಹಾಗೂ ಪಾಕಿಸ್ತಾನಿ ಹೈಕಮಿಷನ್ ಅಧಿಕಾರಿ ಡ್ಯಾನಿಶ್ ಅವರೊಂದಿಗೆ ನಿಯಮಿತ ಸಂಪರ್ಕದಲ್ಲಿದ್ದೆ ಎಂದು ಜ್ಯೋತಿ ಮಲ್ಹೋತ್ರಾ ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ.

ವರದಿಗಳ ಪ್ರಕಾರ, ವಿಚಾರಣೆ ವೇಳೆ ಜ್ಯೋತಿ, 2023ರಲ್ಲಿ ಪಾಕಿಸ್ತಾಕ್ಕೆ ತೆರಳಲು ವೀಸಾಕ್ಕಾಗಿ ದೆಹಲಿಯ ಪಾಕ್ ಹೈಕಮಿಷನ್‌ಗೆ ಭೇಟಿ ನೀಡಿದಾಗ ಮೊದಲು ಡ್ಯಾನಿಶ್ ಅಲಿಯಾಸ್ ಎಹ್ಸರ್ ದಾರ್ ಅವರನ್ನು ಸಂರ್ಪಕಿಸಿದ್ದೆ. ಬಳಿಕ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾಗ ಡ್ಯಾನಿಶ್ ಪರಿಚಯಸ್ಥ ಅಲಿ ಹಸನ್ ಅವರ ಪರಿಚಯವಾಗಿತ್ತು. ಅದಲ್ಲದೇ ಅಲಿ ಹಸನ್ ಅವರು ಪಾಕಿಸ್ತಾನದ ಗುಪ್ತಚರ ಅಧಿಕಾರಿಗಳನ್ನು ಪರಿಚಯಿಸಿದ್ದರು. ಅದಾದ ನಂತರ 2023ರ ನವೆಂಬರ್‌ನಿಂದ 2025ರ ಮಾರ್ಚ್ರವರೆಗೆ ಡ್ಯಾನಿಶ್ ಜೊತೆ ಸಂಪರ್ಕದಲ್ಲಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದಾಳೆ.

ಟ್ರಾವೆಲ್ ವಿತ್ ಜೋ ಯೂಟ್ಯೂಬ್ ನಡೆಸುತ್ತಿದ್ದ ಜ್ಯೋತಿ ತನ್ನ ಯೂಟ್ಯೂಬ್ ಚಾನಲ್‌ನಲ್ಲಿ ಪಾಕಿಸ್ತಾನ ಪರ ಇರುವ ವಿಷಯಗಳನ್ನು ಅಪ್ಲೋಡ್ ಮಾಡುತ್ತಿದ್ದಳು. ಅಲ್ಲದೇ ವಾಟ್ಸಾಪ್, ಟೆಲಿಗ್ರಾಮ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ಪ್ಲಾಟ್‌ಫಾರ್ಮ್ಗಳಲ್ಲಿ ಶಕೀರ್ ಅಲಿಯಾಸ್ ರಾಣಾ ಶಹಬಾಜ್ ಸೇರಿದಂತೆ ಕಾರ್ಯಕರ್ತರೊಂದಿಗೆ ಸಂಪರ್ಕದಲ್ಲಿದ್ದಳು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026