Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

*ಕಡೋಲಿ ಜಿ.ಪಂ. ವ್ಯಾಪ್ತಿಯ ಶಾಲೆ, ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ; ಮಲಗೌಡ ಪಾಟೀಲ್ ಅವರಿಂದ ಪರಿಶೀಲನೆ*

 

ಬೆಳಗಾವಿ : ಕರ್ನಾಟಕ ರಾಜ್ಯದ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಲಾಯಿತು.

ಕೆಪಿಸಿಸಿ ಸದಸ್ಯರು ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತರಾದ ಮಲಗೌಡ ಪಾಟೀಲ್ ಅವರು ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕೆದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಶಾಲೆಯ ಎರಡು ಕೊಠಡಿಗಳ ನಿರ್ಮಾಣ ಕಾಮಗಾರಿ, ಹಂದಿನೂರು ಗ್ರಾಮದ ಎರಡು ತರಗತಿ ಕೊಠಡಿಗಳ ಕಾಮಗಾರಿಯನ್ನು ಪರಿಶೀಲಿಸಲಾಯಿತು. ಇದರ ಜೊತೆಗೆ ಹಂದಿನೂರಿನ ಸಿಸಿ ರಸ್ತೆ ಹಾಗೂ ಬೋಡಕೆನಟ್ಟಿ ಪ್ರದೇಶದಲ್ಲಿರುವ ಶಾಲೆಯ ಎರಡು ತರಗತಿ ಕೊಠಡಿಗಳ ನಿರ್ಮಾಣ ಕಾಮಗಾರಿಯನ್ನೂ ವೀಕ್ಷಿಸಲಾಯಿತು.

ಶಾಲಾ ಕಟ್ಟಡಗಳು, ತರಗತಿ ಕೊಠಡಿಗಳು ಹಾಗೂ ಇತರ ಶೈಕ್ಷಣಿಕ ಮೂಲಸೌಕರ್ಯಗಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಲಾಯಿತು. ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಸೌಲಭ್ಯಗಳು ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿಗಳ ಗುಣಮಟ್ಟ ಕಾಪಾಡುವುದರ ಜೊತೆಗೆ ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚಿಸಲಾಯಿತು.

ಪರಿಶೀಲನೆ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು, ಸ್ಥಳೀಯ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಸ್ಥಳೀಯ ಮಟ್ಟದಲ್ಲಿ ಶಿಕ್ಷಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳನ್ನು ಸ್ಥಳದಲ್ಲೇ ಪರಿಶೀಲಿಸಿ ಪ್ರಗತಿಯ ಮಾಹಿತಿ ಪಡೆಯಲಾಗಿದ್ದಕ್ಕೆ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
*ಬೆಳಗಾವಿ ಜಿಲ್ಲೆಯ ಹಸಿಮೆಣಸಿನಕಾಯಿ ಬೆಳೆಗಾರರಿಗೆ ಗುಡ್ ನ್ಯೂಸ್; ಹೆಕ್ಟೇರ್‌ಗೆ ₹3,550 ವಿಮಾ ಕಂತು!**ಹೂಡಿಕೆದಾರರಿಗೆ ₹2,459 ಕೋಟಿ ವಂಚನೆ ಆರೋಪ; ಶಿವಂ ಅಸೋಸಿಯೇಟ್ಸ್‌ನ ₹427 ಕೋಟಿ ಮೌಲ್ಯದ ಆಸ್ತಿ ED ವಶಕ್ಕೆ!**ಕನ್ನಡ ರಾಜ್ಯೋತ್ಸವಕ್ಕೆ ಬೆಳಗಾವಿ ಸಜ್ಜು; ಸಿದ್ಧತೆ ಪರಿಶೀಲಿಸಿದ ಮೇಯರ್, ಉಪಮೇಯರ್ ಮತ್ತು ಆಯುಕ್ತರು**ಬೆಳಗಾವಿಯ ಮರಾಠಾ ಲೈಟ್ ಇನ್‌ಫೆಂಟ್ರಿಯಲ್ಲಿ 108ನೇ ಶರಕತ್ ದಿನಾಚರಣೆ; ಸೇನಾಪತಿ ಹಂಬೀರರಾವ್ ಮೊಹಿತೆ ಅವರ ಅರ್ಧಪ್ರತಿಮೆ ಅನಾವರಣ**ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಅವಧಿ ಮೀರಿದ ಲಸಿಕೆಗಳು ಪತ್ತೆ; ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ತೀವ್ರ ಅಸಮಾಧಾನ**ಮಾಂಜಾ ದಾರದಿಂದ ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ! ಉಪಲೋಕಾಯುಕ್ತ ಬಿ. ವೀರಪ್ಪ ಸೂಚನೆ**ವಿದ್ಯಾರ್ಥಿಗಳ ಆರೋಗ್ಯಕ್ಕೆ ಆದ್ಯತೆ! ಸಂಗೊಳ್ಳಿ ರಾಯಣ್ಣ ಕಾಲೇಜಿಗೆ ರಾಗಿ ಅಂಬಳಿ ವಿತರಣೆಗಾಗಿ ಸ್ಟೀಲ್ ಲೋಟ, ಪಾತ್ರೆಗಳ ಕೊಡುಗೆ**ಬೆಳಗಾವಿಯಲ್ಲಿ ಎಸ್‌ಸಿ-ಎಸ್‌ಟಿ ಕುಂದುಕೊರತೆ ಸಭೆ; ಸಮಸ್ಯೆಗಳ ಪರಿಹಾರಕ್ಕೆ ಪೊಲೀಸ್ ಆಯುಕ್ತರ ಸೂಚನೆ!**ಬೆಳಗಾವಿ ಎಪಿಎಂಸಿ ಸಂಡೇ ಮಾರ್ಕೆಟ್‌ನಲ್ಲಿ ಅಕ್ರಮದ ಆರೋಪ! ಬಾಡಿಗೆ, ಸೆಸ್ ವಸೂಲಿಯಲ್ಲಿ ವ್ಯತ್ಯಾಸದ ಶಂಕೆ; ಲೋಕಾಯುಕ್ತ ತನಿಖೆಗೆ ಮನವಿ**ಬೆಳಗಾವಿಯಲ್ಲಿ ರ‍್ಯಾಪಿಡೋ, ಓಲಾ, ಉಬರ್ ವಿರುದ್ಧ ಆಟೋ ಚಾಲಕರ ಆಕ್ರೋಶ; ನಿಯಮ ಉಲ್ಲಂಘನೆ ಪರಿಶೀಲನೆಗೆ ಆಗ್ರಹ!*