ರಾಯಚೂರು: ಜಿಲ್ಲೆಯ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಗೆ ಕಲಬುರಗಿ ಹೈಕೋರ್ಟ್ ತಡೆ ನೀಡಿದೆ. ಸರ್ಕಾರ ಮಂಜೂರು ಮಾಡಿದ್ದ 24 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. 2026ರ ಏಪ್ರಿಲ್ 16ರಂದು ರಾಜ್ಯ ಸರ್ಕಾರ ಈ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿತ್ತು. ಆದರೆ ಸರ್ಕಾರದ ಕೆಲವು ಮಾರ್ಗಸೂಚಿಗಳು ಯುಜಿಸಿ ನಿಯಮಾವಳಿಗಳಿಗೆ ವಿರುದ್ಧವಾಗಿವೆ ಎಂದು ಆರೋಪಿಸಿ ಸ್ಪರ್ಧಾಕಾಂಕ್ಷಿ ಶ್ರೀಧರ್ ಅವರು ಹೈಕೋರ್ಟ್ ಮೊರೆಹೋಗಿದ್ದರು. ಪ್ರಕರಣವನ್ನು ವಿಚಾರಣೆ ಮಾಡಿದ ಪೀಠ ಮುಂದಿನ ಆದೇಶದವರೆಗೆ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದೆ. ಮೇ 7ರಿಂದ ಆರಂಭವಾಗಬೇಕಿದ್ದ ನೇರ ನೇಮಕಾತಿ ಪ್ರಕ್ರಿಯೆ ಇದೀಗ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.