E-PAPER
17 Nov 2026, 05:23:39 PM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ 2025-26ನೇ ಸಾಲಿನ 24ನೇ ಸರ್ವ ಸಾಮಾನ್ಯ ಸಭೆ

ಮೂಡಲಗಿ-13: ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘವು 2025-26ನೇ ಸಾಲಿನ ಆರ್ಥಿಕ ವರ್ಷದ ಕೊನೆಯಲ್ಲಿ ರೂ. 2.81 ಕೋಟಿ ಲಾಭ ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಸಹಕಾರಿಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ರಾಜ್ಯಸಭಾ ಮಾಜಿ ಸಂಸದ ಈರಣ್ಣ ಕಡಾಡಿ ಹೇಳಿದರು.

ಶನಿವಾರದಂದು ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ 2025-26ನೇ ಸಾಲಿನ 24ನೇ ಸರ್ವ ಸಾಮಾನ್ಯ ಸಭೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಸಹಕಾರಿಯು ಗ್ರಾಹಕರ ಸಹಕಾರದಿಂದ ಪ್ರಗತಿ ಹೊಂದಿದ್ದು, ಸಂಘದಲ್ಲಿ 17,750 ಸದಸ್ಯರಿದ್ದು, ರೂ 25.58 ಲಕ್ಷ ಶೇರು ಬಂಡವಾಳ ಹಾಗೂ ರೂ 12.71 ಕೋಟಿ ಕಾಯ್ದಿಟ್ಟ ನಿಧಿಯಿದೆ. ಹಣಕಾಸು ವರ್ಷದಲ್ಲಿ ರೂ 107.91 ಕೋಟಿ ಠೇವಣಿ ಸಂಗ್ರಹವಾಗಿದೆ. ಸಹಕಾರಿಯಿಂದ ಇದುವರೆಗೆ ರೂ 99.72 ಕೋಟಿ ಸಾಲ ವಿತರಿಸಲಾಗಿದೆ. 18.69 ಕೋಟಿ ರೂಗಳನ್ನು ಬ್ಯಾಂಕ್ ಮತ್ತು ಇನ್ನಿತರ ಸಂಘಗಳಲ್ಲಿ ಗುಂತಾವಣೆ ಮಾಡಲಾಗಿದ್ದು, ರೂ 120.88 ಕೋಟಿ ದುಡಿಯುವ ಬಂಡವಾಳ ಹೊಂದಿದೆ. ಸಹಕಾರಿಯ ಸದಸ್ಯರಿಗೆ ಶೇ.20 ರಷ್ಟು ಲಾಭಾಂಶ ವಿತರಿಸಲಾಗಿದೆ ಎಂದರು.

ಸಹಕಾರಿಯ ಈ ಸಾಧನೆಗೆ ಕಾರಣಿಕರ್ತರಾದ ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ ವರ್ಗ ಹಾಗೂ ಸಂಸ್ಥೆಯ ಮೇಲೆ ನಿರಂತರ ವಿಶ್ವಾಸವಿಟ್ಟ ಎಲ್ಲಾ ಶೇರುದಾರರು ಮತ್ತು ಸದಸ್ಯರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಯಿತು. ಮುಂಬರುವ ದಿನಗಳಲ್ಲಿ ಸಹಕಾರಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಸೂಕ್ತ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸಹಕಾರಿಯ ಉಪಾಧ್ಯಕ್ಷ ಶ್ರೀಶೈಲ ತುಪ್ಪದ. ನಿರ್ದೇಶಕರಾದ ಪರಪ್ಪ ಮಳವಾಡ, ಸಹದೇವ ಹೆಬ್ಬಾಳ, ಬಿಡಿಸಿಸಿ ಬ್ಯಾಂಕ ಮಾಜಿ ನಿರ್ದೆಶಕ ಸತೀಶ ಕಡಾಡಿ, ಶಿವಪ್ಪ ಗೊಸಬಾಳ, ಗುರುನಾಥ ವ್ಯಾಪಾರಿ, ಹಣಮಂತ ಸಂಗಟಿ, ಸಿದ್ದಪ್ಪ ಹೆಬ್ಬಾಳ, ಮಲ್ಲಿಕಾರ್ಜುನ ಹುಲೆನ್ನವರ, ಸೋಮಲಿಂಗ ಹಡಿಗನಾಳ, ಪುಂಡಲಿಕ ಅರಭಾಂವಿ, ನಿಂಗಪ್ಪ ಮಿಡಕನಟ್ಟಿ, ಸಲಹಾ ಸಮಿತಿ ಅಧ್ಯಕ್ಷರಾದ ಈರಪ್ಪ ದೇಯನ್ನವರ, ಬಸವರಾಜ ಕತ್ತಿ, ಆನಂದ ರೂಗಿ, ವಿಶೇಷ ಆಹ್ವಾನಿತರಾಗಿ ರಾಜು ಜೋಶಿ ಹಾಗೂ ಪ್ರವೀಣ ಜಕಾತಿ ಸೇರಿದಂತೆ ಶಾಖೆಗಳ ಸಲಹಾ ಸಮಿತಿ ಸದಸ್ಯರು, ಸಹಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರಶಾಂತ ಪಟ್ಟಣಶೆಟ್ಟಿ ಸ್ವಾಗತಿಸಿದರು, ಪ್ರಧಾನ ವ್ಯವಸ್ಥಾಪಕ (ಪ್ರಭಾರ) ಪರಪ್ಪ ಗಿರೆಣ್ಣವರ ನಿರೂಪಿಸಿದರು, ರಾಜಶೇಖರ ಕುರಬೇಟ ವಾರ್ಷಿಕ ವರದಿ ಓದಿದರು. ಶಿವಾನಂದ ಕುಂಬಾರ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ಪ್ರವೇಶ ಮತ್ತು ಅಭಿಮುಖೀಕರಣ ಕಾರ್ಯಕ್ರಮವೀರ ವನಿತೆ ಒನಕೆ ಓಬವ್ವ ಜಯಂತ್ಯೋತ್ಸವ ಕಾರ್ಯಕ್ರಮ - 2026ಮಂಡೋಳ್ಳಿಯಲ್ಲಿ ₹1.70 ಕೋಟಿ ವೆಚ್ಚದಲ್ಲಿ ಶ್ರೀ ಮಾರುತಿ ದೇವಸ್ಥಾನ ನಿರ್ಮಾಣ