Press ID & Credential Portal
Apply / Verify  ➔
LIVE TV LocalKarnatakaCrimeIndiaWorldFilmNationalLife StyleInternationalBusinessPoliticsSportsBusinessEducationTechnology
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Karnataka

ಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?

ಸಾಗರ: ಮುಂಬರುವ ತಾಲ್ಲೂಕು ಪಂಚಾಯಿತಿ ಚುನಾವಣೆಯ ಕಣ ರಂಗೇರುತ್ತಿದ್ದು, ಕಲ್ಮನೆ ಹಾಗೂ ಎಡಜಿಗಳಮನೆ ವ್ಯಾಪ್ತಿಯನ್ನು ಒಳಗೊಂಡ ತಾಲ್ಲೂಕು ಪಂಚಾಯಿತಿ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವತಿಯಿಂದ ಕಲ್ಮನೆ ಗ್ರಾಮ ಪಂಚಾಯ್ತಿಯ ಮಾಜಿ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಹೊಸೂರು ಅವರು ಪ್ರಬಲ ಟಿಕೆಟ್ ಆಕಾಂಕ್ಷಿ ಎಂಬುದಾಗಿ ಹೇಳಲಾಗುತ್ತಿದೆ.

ಕಲ್ಮನೆ ಗ್ರಾಮ ಪಂಚಾಯ್ತಿಯ ಹೊಸೂರು ವಾರ್ಡ್‌ನಿಂದ ಸದಸ್ಯರಾಗಿ ಆಯ್ಕೆಯಾಗಿ, ಆ ಬಳಿಕ ಅಧ್ಯಕ್ಷರಾಗಿ ಐದು ವರ್ಷಗಳ ಕಾಲ ಯಶಸ್ವಿಯಾಗಿ ಆಡಳಿತ ನಡೆಸಿದ ಅನುಭವ ಹೊಂದಿರುವ ಸುರೇಶ್ ಶೆಟ್ಟಿ ಅವರು, ತಮ್ಮ ಅವಧಿಯಲ್ಲಿ ಕೈಗೊಂಡ ಜನಪರ ಕಾಮಗಾರಿಗಳ ಮೂಲಕ ಗ್ರಾಮೀಣ ಭಾಗದಲ್ಲಿ ಅಪಾರ ಮೆಚ್ಚುಗೆ ಗಳಿಸಿದ್ದಾರೆ.

ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ: ಮತದಾರರ ಮೆಚ್ಚುಗೆ

ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ‘ಜಲ್ ಜೀವನ್ ಮಿಷನ್’ (ಜೆಜೆಎಂ) ಕಾಮಗಾರಿಗಳನ್ನು ಸಮರ್ಪಕವಾಗಿ ನಿಭಾಯಿಸಿ, ಶೇ.80 ರಿಂದ 90ರಷ್ಟು ಕಾರ್ಯವನ್ನು ಪೂರ್ಣಗೊಳಿಸಿ ಪ್ರತಿಯೊಬ್ಬರಿಗೂ ನೀರಿನ ಸೌಲಭ್ಯ ದೊರಕುವಂತೆ ಶ್ರಮಿಸಿದ್ದಾರೆ.

ಇದರೊಂದಿಗೆ ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿಗಳ ನಿರ್ಮಾಣ, ಪಂಚಾಯಿತಿ ವ್ಯಾಪ್ತಿಯ ಬಸ್ ತಂಗುದಾಣಗಳಿಗೆ ಸುಣ್ಣ-ಬಣ್ಣ ಬಳಿದು ನವೀಕರಣ ಹಾಗೂ ಅನುದಾನವನ್ನು ಸಮರ್ಥವಾಗಿ ಬಳಸಿಕೊಂಡು ಗ್ರಾಮೀಣ ರಸ್ತೆಗಳ ಸುಧಾರಣೆಗೆ ಆದ್ಯತೆ ನೀಡುವ ಮೂಲಕ ಮಾದರಿ ಆಡಳಿತ ನೀಡಿದ್ದರು.

ಪಕ್ಷದ ಮುಖಂಡರೊಂದಿಗೆ ನಿಕಟ ಸಂಪರ್ಕ

ಕಳೆದ ಹಲವು ವರ್ಷಗಳಿಂದ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿ ಗುರುತಿಸಿಕೊಂಡಿರುವ ಸುರೇಶ್ ಶೆಟ್ಟಿ ಅವರು, ಮಾಜಿ ಸಚಿವ ಹರತಾಳು ಹಾಲಪ್ಪ ಅವರಂತಹ ಹಿರಿಯ ನಾಯಕರೊಂದಿಗೆ ಸದಾ ಸಂಪರ್ಕದಲ್ಲಿದ್ದಾರೆ. ಪಕ್ಷ ನೀಡುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಾ ಬಂದಿರುವ ಅವರು, ಈ ಬಾರಿ ಪಕ್ಷದಿಂದ ತಮಗೆ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸುವಂತೆ ನಾಯಕರ ಮುಂದೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. 

ತಾಲ್ಲೂಕು ಪಂಚಾಯಿತಿಗೆ ಸ್ಪರ್ಧಿಸಲು ಜನರ ಒತ್ತಾಯ

ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸುರೇಶ್ ಶೆಟ್ಟಿ ಮಾಡಿದ ಅಭಿವೃದ್ಧಿ ಕಾರ್ಯಗಳು ಹಾಗೂ ಜನರೊಂದಿಗೆ ಇಟ್ಟುಕೊಂಡಿರುವ ಉತ್ತಮ ಬಾಂಧವ್ಯವೇ ತಾಲೂಕು ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸುವಂತೆ ಪ್ರೀತಿಯಿಂದ ಅಭಿಮಾನಿಗಳು ಒತ್ತಡ ಹೇರುತ್ತಿದ್ದಾರೆ. ಪಕ್ಷದ ನಾಯಕರು ಆಶೀರ್ವದಿಸಿ ಅವಕಾಶ ನೀಡಬೇಕು. ಆ ಮೂಲಕ ಕಲ್ಮನೆ ಮತ್ತು ಎಡಜಿಗಳಮನೆ ವ್ಯಾಪ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಸುರೇಶ್ ಶೆಟ್ಟಿ ಶ್ರಮಿಸಲು ಅವಕಾಶ ನೀಡಬೇಕು ಎಂಬುದು ಅಭಿಮಾನಿಗಳ ಮಾತು.

ಒಟ್ಟಾರೆ ಕಲ್ಮನೆ ಮತ್ತು ಎಡಜಿಗಳಮನೆ ವ್ಯಾಪ್ತಿಯ ಜನರ ನಾಡಿಮಿಡಿತ ಅರಿತಿರುವ, ಜನಸಾಮಾನ್ಯರ ಕಷ್ಟ-ಸುಖಗಳಿಗೆ ಸದಾ ಸ್ಪಂದಿಸುವ ಸುರೇಶ್ ಶೆಟ್ಟಿ ಅವರಿಗೆ ಈ ಬಾರಿಯ ತಾಲ್ಲೂಕು ಪಂಚಾಯ್ತಿ ಚುನಾವಣೆಗೆ ಕಲ್ಮನೆ-ಎಡಜಿಗಳಮನೆ ಕ್ಷೇತ್ರದಿಂದ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದೇ ಹೇಳಲಾಗುತ್ತಿದೆ.

ಸುರೇಶ್ ಶೆಟ್ಟಿ ಅವರ ಅಭಿಮಾನಿಗಳ ಕೂಗಿಗೆ ಬಿಜೆಪಿಯ ನಾಯಕರು ಮಣೆ ಹಾಗುತ್ತಾರಾ? ಈ ಬಾರಿಯ ಕಲ್ಮನೆ-ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು...

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯೇಂದ್ರ ಸಾರಥ್ಯದಲ್ಲೇ ಮುಂದಿನ ವಿಧಾನಸಭಾ ಚುನಾವಣೆ: ಬಿಜೆಪಿ ಹೈಕಮಾಂಡ್ ಮೆಗಾ ಪ್ಲಾನ್ಮದ್ದೂರಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ; ಗ್ರಾಮಸ್ಥರು ನಿಟ್ಟುಸಿರುಸಾಗರ ತಾಲ್ಲೂಕು ಅಂತಿಮ ಮತದಾರರ ಪಟ್ಟಿ ಪ್ರಕಟ: 1.94 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆಮಲ್ಲಿಕಾರ್ಜುನ ಖರ್ಗೆ ವಿರುದ್ಧದ ವೈಯಕ್ತಿಕ ದಾಳಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ MLC ರಮೇಶ್ ಬಾಬು ಆಕ್ಷೇಪಮಹರ್ಷಿ ವಾಲ್ಮೀಕಿ ಆದರ್ಶಗಳು ಇಂದಿನ ಯಾಂತ್ರಿಕ ಜಗತ್ತಿಗೆ ಪ್ರಸ್ತುತ: ಮದ್ದೂರು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್10 ಎಕರೆಯಲ್ಲಿ ಕೆಎಆರ್ ಫ್ಯೂಚರ್ ಅಕಾಡೆಮಿ ಕ್ಯಾಂಪಸ್: ನೇಗಿಲಯೋಗಿ ರೈತ ಮಾರಾಟ ಕೇಂದ್ರದ ಸ್ಥಾಪಕ ಯೋಗೇಶ್ ಅಪ್ಪಾಜಿಸ್ವ-ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನBREAKING : ಕಲ್ಬುರ್ಗಿಯಲ್ಲಿ ತಡರಾತ್ರಿ ದರೋಡೆಗೆ ಬಂದಿದ್ದ ಗ್ಯಾಂಗ್ ನಿಂದ ಫೈರಿಂಗ್ : ಇಬ್ಬರು ಅರೆಸ್ಟ್!ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಗಣಿ ಗುತ್ತಿಗೆ ಪ್ರಕರಣದ PIL ವಜಾಗೊಳಿಸಿದ ಹೈಕೋರ್ಟ್SHOCKING : ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!