Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕನಕ ದಾಸರ ಸಂದೇಶ ನಿತ್ಯ ಬದುಕಿಗೆ ಪೂರಕ-ಜಿ.ಎಂ.ನಾಗರಾಜು

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕನಕದಾಸರು ತಮ್ಮ ಕೀರ್ತನೆಗಳು ಮತ್ತು ಕಾವ್ಯಗಳ ಮೂಲಕ ಜೀವನ ಪರ ಸಂದೇಶ, ನಿತ್ಯ ಬದುಕಿನಲ್ಲಿ  ಅಳವಡಿಸಿಕೊಳ್ಳುವ ಉಪದೇಶಗಳನ್ನು ನೀಡಿದ್ದಾರೆ  ಎಂದು ಕನ್ನಡ ಸಾಹಿತ್ಯ ಪರಿಷತ್ತು  ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ 537ನೇ  ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.  ಕನಕದಾಸರು ಮೂಲತಃ ಬಾಡ ಪ್ರಾಂತ್ಯದ  ದಂಡನಾಯಕರಾಗಿದ್ದರು.

ಯುದ್ಧವೊಂದರಲ್ಲಿ ಸೋತ ಅವರಿಗೆ ವೈರಾಗ್ಯ ಉಂಟಾಗಿ ಜೀವನದ ಆಸೆಗಳನ್ನು ತ್ಯಜಿಸಿ ತಾಳ ತಂಬೂರಿ ಹಿಡಿದು ಜನರಿಗೆ ತಮ್ಮ ಕೀರ್ತನಗಳ ಮೂಲಕ ದೇವರ ನಾಮವನ್ನು ಅಡುವುದರ ಮೂಲಕ ಹರಿಭಕ್ತರಾಗಿದರು.  ಹರಿದಾಸ ಸಾಹಿತ್ಯಕ್ಕೆ  ಕೀರ್ತನೆಮುಂಡಿಗೆ, ಉಗಾಭೋಗ, ಸುಳಾದಿ, ದಂಡಕಗಳು ಮಾತ್ರವಲ್ಲದೇ, ಮೋಹನತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ  ಉತ್ತಮ‌ಕಾವ್ಯ ಕೃತಿಗಳನ್ನು  ಕನಕದಾಸರು ನೀಡಿದ್ದಾರೆ ಎಂದರು.

  ಕನಕದಾಸರು ಸರಳ ಭಾಷೆಯಲ್ಲಿ ಕೀರ್ತನೆಗಳನ್ನು ಮತ್ತು ಕಾವ್ಯಗಳನ್ನು ರಚಿಸುವ ಮೂಲಕ ಕನ್ನಡತನ ಎತ್ತಿ ಹಿಡಿದರು.  ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರವಾಗಿದೆ. 

ಕನಕದಾಸರು  ತಮ್ಮ ಕೀರ್ತನೆಗಳ  ಮೂಲಕ    ಜನರಲ್ಲಿ ಸಾಮಾಜಿಕ ಪ್ರಜ್ಞೆ  ಮೂಡಿಸಿದರು ಕುಲ ಕುಲವೆಂದು ಹೊಡೆದಾಡದಿರಿ  ಮುಂತಾದ  ಕೀರ್ತನೆಗಳ ಮೂಲಕ ಸಮಾಜದಲ್ಲಿನ  ಜಾತಿ ವ್ಯವಸ್ಥೆಯ ನ್ಯೂನತೆಯನ್ನು  ಹೋಗಲಾಡಿಸಬೇಕೆಂದರು   ಕನಕದಾಸರು ಸಾಹಿತ್ಯಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ.   ಸಮಾಜದ ಪರಿವರ್ತನೆ ಕನಕದಾಸರ ಸಾಹಿತ್ಯದ ಪ್ರಮುಖ ಆಶಯವಾಗಿದೆ ಎಂದರು.

   ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಅಧ್ಯಕ್ಷ ಜಿ.ಸುರೇಶ್ ಮಾತನಾಡಿ, ಸಾಮಾಜಿಕ ಪ್ರಜ್ಞೆಯ ವಿಕಸನಕ್ಕೆ ಬೇಕಾದ ಮಾರ್ಗಗಳು ಕನಕದಾಸರ   ಸಾಹಿತ್ಯದಲ್ಲಿ  ಇವೆ.  ಆದ್ದರಿಂದ  ಅವರ ಸಾಹಿತ್ಯ ವೈಚಾರಿಕ ಪ್ರಬುದ್ಧತೆಯಿಂದ ಕೂಡಿದೆ.  ಪ್ರತಿಯೊಂದು ಕೃತಿಯಲ್ಲಿಯೂ  ಕನಕದಾಸರು ಕವಿತ್ವ-ಕಲ್ಪನೆಗಳ ಜೊತೆಗೆ ವಾಸ್ತವ ನಿಲುವುಗಳನ್ನು   ಪ್ರತಿಪಾದಿಸಿದ್ದಾರೆ. 

ಕನಕದಾಸರು ತಮ್ಮ ವೈಚಾರಿಕ ಮತ್ತು ಪ್ರತಿಭಟನಾ ನೆಲೆಗಟ್ಟಿನಿಂದ ದಾಸಸಾಹಿತ್ಯಕ್ಕೆ, ತನ್ಮೂಲಕ ಕನ್ನಡ ಸಾಹಿತ್ಯಕ್ಕೆ ವೈಚಾರಿಕ ಪ್ರಭೆಯನ್ನು ನೀಡಿದ್ದಾರೆ ಎಂದರು.

 ಈ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹದೇವ್, ಕನ್ನಡಪರ ಹಿರಿಯ ಹೋರಾಟಗಾರ ಗುರುರಾಜಪ್ಪ ದೊಡ್ಡಬಳ್ಳಾಪುರ ತಾಲ್ಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಗಂಗರಾಜು ಶಿರವಾರ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜುಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್  ಕನ್ನಡ ಸಾಹಿತ್ಯ ಪರಿಷತ್ತು ಪ್ರತಿನಿಧಿಗಳಾದ ನಾಗರತ್ನಮ್ಮ, ಸಫೀರ್, ಶ್ರೀನಿವಾಸ್ ಮುಂತಾದವರು ಭಾಗ ವಹಿಸಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ