Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

 ಕಂಚವೀರ ನಗರ ನಿವಾಸಿಗಳ ಗ್ರಾಮ ಪಂ ವಿರುದ್ದ ಆಕ್ರೋಶ

ಬೆಳಗಾವಿ: ತಾಲೂಕಿನ ಮುತಗಾ ಗ್ರಾಮದ ಕಂಚವೀರ ನಗರದಲ್ಲಿ ಕಳೆದ 30 ವರ್ಷಗಳಿಂದ ಸೂಕ್ತ ಮತ್ತು ಶಾಶ್ವತ ಒಳಚರಂಡಿ ವ್ಯವಸ್ಥೆ ಇಲ್ಲದೆ ನೂರಾರು ಕುಟುಂಬಗಳು ತೀವ್ರ ಸಂಕಷ್ಟ ಅನುಭವಿಸುತ್ತಿವೆ ಎಂದು ಆರೋಪಿಸಿ ಕಂಚವೀರ ನಗರ ರಹವಾಸಿಗಳ ಸಂಘವು ಹಲವು ಭಾರಿ ಗ್ರಾಮ ಪಂಗೆ ಹಾಗೂ ಸಂಭದಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಸಿದರು ಯಾವುದೇ ಪ್ರಯೋಜನೆ ಆಗಿಲ್ಲ  ಎಂದು ಅಧಿಕಾರಿಗಳ ವಿರದ್ದ ಆಕ್ರೋಶ ವ್ಯಕ್ತಪಡಿಸಿದರು. 
ಕಂಚವೀರ ಬಡಾವಣೆಯಲ್ಲಿ ವ್ಯವಸ್ಥಿತ ಭೂಗತ ಒಳಚರಂಡಿ ಪೈಪ್ಲೈನ್ ವ್ಯವಸ್ಥೆ ಇಲ್ಲದ ಪರಿಣಾಮ ಮನೆಗಳಿಂದ ಹೊರಬರುವ ಕೊಳಚೆ ನೀರು ಸಾರ್ವಜನಿಕ ರಸ್ತೆಗಳಲ್ಲಿ ಹರಿದು ನಿಂತುಕೊಳ್ಳುತ್ತಿದೆ. ಇದರಿಂದ ಪ್ರದೇಶದಲ್ಲಿ ತೀವ್ರ ದುರ್ವಾಸನೆ ಹರಡುವುದರ ಜೊತೆಗೆ ಸೊಳ್ಳೆ, ನೊಣ ಹಾಗೂ ಇತರ ಕೀಟಗಳ ಉತ್ಪತ್ತಿಗೆ ಕಾರಣವಾಗುತ್ತಿದೆ. ಡೆಂಗ್ಯೂ, ಮಲೇರಿಯಾ, ಟೈಫಾಯಿಡ್ ಹಾಗೂ ಕಾಲರಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಆತಂಕವೂ ನಿವಾಸಿಗಳಲ್ಲಿ ಮನೆಮಾಡಿದೆ ಎಂದು ಆರೋಪಿಸಿದರು. 
ಕಳೆದ ಮೂರು ದಶಕಗಳಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಇದುವರೆಗೆ ಶಾಶ್ವತ ಪರಿಹಾರ ದೊರೆತಿಲ್ಲ. ಮೂಲಸೌಕರ್ಯದ ಕೊರತೆಯಿಂದಾಗಿ ಮಕ್ಕಳು, ಹಿರಿಯ ನಾಗರಿಕರು ಸೇರಿದಂತೆ ಬಡಾವಣೆಯ ನಿವಾಸಿಗಳ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದರು. 
ತುರ್ತು ಕ್ರಮಕ್ಕೆ ಆಗ್ರಹ: ಸಮಸ್ಯೆಯ ಗಂಭೀರತೆಯನ್ನು ಪರಿಗಣಿಸಿ ಜಿಲ್ಲಾಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಿ, ಸಂಬಂಧಪಟ್ಟ ನಾಗರಿಕ ಮತ್ತು ಎಂಜಿನಿಯರಿಂಗ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಕಂಚವೀರ ನಗರದಲ್ಲಿ ಹೊಸ ಹಾಗೂ ಸಮರ್ಪಕ ಒಳಚರಂಡಿ ಪೈಪ್ಲೈನ್ ವ್ಯವಸ್ಥೆ ತುರ್ತಾಗಿ ನಿರ್ಮಿಸಿ, ನಿವಾಸಿಗಳ ಬಹುದಿನಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ