Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಂದಿಕೆರೆ ಶಾಲೆಯಲ್ಲಿ ಸ್ಪೋಟ ಪ್ರಕರಣ : ಗಾಯಗೊಂಡ ಅಡುಗೆ ಸಿಬ್ಬಂದಿಯನ್ನು ಭೇಟಿ ಮಾಡಿದ ಜಿ.ಪಂ. ಸಿಇಒ

ತುಮಕೂರು: ಚಿಕ್ಕನಾಯಕನಹಳ್ಳಿ ತಾಲ್ಲೂಕು ಕಂದಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಅಡುಗೆ ಕೊಠಡಿಯಲ್ಲಿ ಸೆಪ್ಟೆಂಬರ್ 24ರಂದು ಸಂಭವಿಸಿದ ಅಡುಗೆ ಅನಿಲ ಸೋರಿಕೆ ಘಟನೆಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ಇಂದು ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಅಡುಗೆ ಸಿಬ್ಬಂದಿ ಲತಾಮಣಿ ಅವರ ಆರೋಗ್ಯ ವಿಚಾರಿಸಿದರು.

ಸೆಪ್ಟೆಂಬರ್ 24ರಂದು ಸಂಜೆ ಸುಮಾರು 4 ಗಂಟೆಯ ಸಮಯದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ನೀಡುವ ಪೌಷ್ಟಿಕ ಆಹಾರ ತಯಾರಿಸುವ ಸಂದರ್ಭದಲ್ಲಿ ಅಡುಗೆ ಕೊಠಡಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಘಟನೆ ಸಂಭವಿಸಿತ್ತು. ಘಟನೆ ವೇಳೆ ಅಡುಗೆ ಸಿಬ್ಬಂದಿಯೊಬ್ಬರಿಗೆ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಜಿಲ್ಲಾ ಪಂಚಾಯಿತಿ ಸಿಇಒ ಅವರು ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರೊಂದಿಗೆ ಚರ್ಚೆ ನಡೆಸಿ ಗಾಯಾಳುವಿನ ಆರೋಗ್ಯ ಸ್ಥಿತಿ ಹಾಗೂ ನೀಡಲಾಗುತ್ತಿರುವ ಚಿಕಿತ್ಸೆಯ ಕುರಿತು ಮಾಹಿತಿ ಪಡೆದರು. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಗಾಯಾಳುವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.

ಘಟನೆ ಕುರಿತು ಜಿಲ್ಲಾ ಪಂಚಾಯಿತಿ ಸಿಇಒ ಅವರು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು, ಗಾಯಾಳುವಿಗೆ ಅಗತ್ಯವಿರುವ ವೈದ್ಯಕೀಯ ನೆರವು ಹಾಗೂ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸೂಚಿಸಿದರು.

ಘಟನೆಯ ಹಿನ್ನೆಲೆಯಲ್ಲಿ ಶಾಲೆಯ ಸುರಕ್ಷತೆ ಹಾಗೂ ಅಡುಗೆ ಕೊಠಡಿಯ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಾಲಾ ಕಟ್ಟಡ ಹಾಗೂ ಅಡುಗೆ ಕೊಠಡಿಯ ಸುರಕ್ಷತೆಯ ಕುರಿತು ಸಂಬಂಧಪಟ್ಟ ತಾಂತ್ರಿಕ ಅಧಿಕಾರಿಗಳಿಂದ ಪರಿಶೀಲನೆ ನಡೆಸಿ, ಅಗತ್ಯವಿರುವ ದುರಸ್ತಿ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.

ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಅಡುಗೆ ಸಿಬ್ಬಂದಿಯ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿರುವ ಸಿಇಒ ಅವರು, ಇಂತಹ ಘಟನೆಗಳು ಮರುಕಳಿಸದಂತೆ ಅಡುಗೆ ಅನಿಲ ಸಂಪರ್ಕ, ಸಿಲಿಂಡರ್, ರೆಗ್ಯುಲೇಟರ್ ಹಾಗೂ ಅಡುಗೆ ಕೊಠಡಿಯ ಸುರಕ್ಷತಾ ವ್ಯವಸ್ಥೆಗಳನ್ನು ನಿಯಮಿತವಾಗಿ ಪರಿಶೀಲಿಸುವಂತೆ ನಿರ್ದೇಶನ ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST