LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾಶಿಯಲ್ಲಿ ಭಿಕ್ಷೆ ಬೇಡಿದ ಕನ್ನಡದ ನಟಿ ಕಾವ್ಯಾ ಶಾಸ್ತ್ರಿ‌

ಭಾರತದ ಅತ್ಯಂತ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರೋ ಕಾಶಿ ವಿಶ್ವನಾಥನ ಸನ್ನಿಧಿಗೆ ನಟಿ ಕಾವ್ಯಾ ಶಾಸ್ತ್ರಿ ಅವರು ಭೇಟಿ ಕೊಟ್ಟಿದ್ದಾರೆ. ನಿನ್ನ ಸನ್ನಿಧಾನದಲ್ಲಿ ಭಿಕ್ಷೆ ಬೇಡಿ ಊಟ ಮಾಡುತ್ತೇನೆ ಅಂತ ಹರಕೆ ಹೊತ್ತಿಕೊಂಡಿದ್ದರು. ಇದೀಗ ಆ ಹರಕೆಯನ್ನು ನಟಿ ತಿರಿಸಿದ್ದಾರೆ.

‘ಕೊರೋನಾದಿಂದಾಗಿ ನನ್ನ ತಂದೆ ಕಳೆದೇ ಹೋಗುತ್ತಾರೆ ಎನ್ನುವ ಭಯದಲ್ಲಿ ಸಿಕ್ಕಸಿಕ್ಕ ದೇವರಿಗೆ, ಸಿಕ್ಕಸಿಕ್ಕ ಹರಕೆ ಹೊತ್ತುಕೊಂಡಿದ್ದೆ. ಅದರಲ್ಲಿ ಒಂದು ಹರಕೆ ಇದು. ಕಾಶಿ ವಿಶ್ವನಾಥನ ಸನ್ನಿಧಿ. ಕಾಶಿ ವಿಶ್ವನಾಥನಲ್ಲಿ, ನನ್ನ ತಂದೆಯ ಜೀವದ ಭಿಕ್ಷೆ ಕೊಡು. ನಿನ್ನ ಸನ್ನಿಧಾನದಲ್ಲಿ ಭಿಕ್ಷೆ ಬೇಡಿ, ಅದರಿಂದ ಬಂದ ಹಣದಲ್ಲಿ ಒಂದಿಡೀ ದಿನದ ಊಟ ಮಾಡ್ತೇನೆ ಅಂತ ಕೇಳಿಕೊಂಡಿದ್ದೆ.

ಈ ಹರಕೆ ತೀರಿಸುವ ಸೌಭಾಗ್ಯ ನಾನು ಮೊನ್ನೆ ಕಾಶಿಗೆ ಹೋದಾಗ ಸಿಕ್ಕಿತು. ಇದೇನು ಅಂಧ ವಿಶ್ವಾಸ ಅಂತ ನೀವು ಕೇಳಬಹುದು. ಒಂದು ಹೇಳ್ತೀನಿ ಕೇಳಿ. ಕಷ್ಟದಲ್ಲಿದ್ದಾಗ ಅದನ್ನು ನಿವಾರಿಸಿಕೊಳ್ಳಲು ಏನನ್ನಾದರೂ ಮಾಡುವ ಪರಿಸ್ಥಿತಿಗೆ ಬಂದು ಬಿಡ್ತೀವಿ…’ ಎಂದು ಹೇಳಿ ಭಿಕ್ಷೆ ಬೇಡಿ ಅದರಿಂದ ಬಂದ ಹಣದಲ್ಲಿ ಊಟ ಮಾಡಿದ್ದಾರೆ

. ಹಿಂದೂ ಧರ್ಮದಲ್ಲಿ ಭಿಕ್ಷಾಟನೆಗೆ ಒಂದು ಪವಿತ್ರವಾದ ಸ್ಥಾನವಿದೆ. ಅದು ನಾನು, ನನ್ನದು ಅನ್ನೋ ಅಹಂಕಾರ ಮತ್ತು ಮೋಹ ಎಲ್ಲದನ್ನೂ ಕಲಿಸಿಬಿಡುತ್ತದೆ ಎಂದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಈ ಊರಿನಲ್ಲಿ ಹೆಸರಿಗಿಂತ ಶಿಳ್ಳೆಗಳದ್ದೇ ಸೌಂಡ್‌ - 'ದಿ ವಿಸ್ಲಿಂಗ್ ವಿಲೇಜ್‌'ನ ವಿಶೇಷ ಕಥನ!'ಡಿಜಿಟಲ್ ಆಫ್' ಪ್ರಯೋಗ - ದೇಶಕ್ಕೆ ಮಾದರಿಯಾದ ಗ್ರಾಮ!ಫಾಸ್ಟ್ಯಾಗ್‌ ರಹಿತ ಸಂಚಾರಕ್ಕೆ ದಂಡ ಸಂಗ್ರಹ - ಕರ್ನಾಟಕಕ್ಕೆ ಪ್ರಥಮ ಸ್ಥಾನ!ಕಾರ್ಪೊರೇಟ್ ಉದ್ಯೋಗ ತೊರೆದು ಐಎಎಸ್ ಆದ ಆದಿತ್ಯ ವಿಕ್ರಮ್ ಅಗರ್ವಾಲ್ ಯಶೋಗಾಥೆದಿನದ ಮಂಡಕ್ಕಿ ಒಗ್ಗರಣರ ಮಿರ್ಚಿ 23-12-2025 ..!ವೆಂಕಟೇಶ್ವರ ಸ್ವಾಮಿಗೆ ಮುಡುಪು ಈ ರೀತಿ ಕಟ್ಟಿದರೆ ಸಂಕಷ್ಟಗಳು ಕಳೆದು ದೈವಬಲ ಹಣಬಲ ಖಚಿತನಿತ್ಯ ಶರಣರ ವಚನಗಳು: ಇಂದಿನ ವಚನ :- --ವೀರಸಂಗಯ್ಯ ಅವರದು.!ಸಾಧನೆಯನ್ನು ಒಂದು ಜಾತಿಗೆ ಸೀಮಿತ ಮಾಡುವುದು ಸರಿಯಲ್ಲ : ಲಂಬಾಣಿ ಗುರುಪೀಠದ ಶ್ರೀನಮ್ಮ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿಯೇ ಇದ್ದೇವೆ: ದಿನೇಶ ಗುಂಡೂರಾವ್.!ಭದ್ರಾ ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆ:  ಶಾಸಕ ಟಿ. ರಘುಮೂರ್ತಿ