Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮೈಸೂರು ದಸರಾದಲ್ಲಿ ಕನ್ನಡ ಪುಸ್ತಕ ಮಾರಾಟ ಮೇಳ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಗತ್ತಿನ ಪ್ರಸಿದ್ದ ಮೈಸೂರು ದಸರಾ ಉತ್ಸವ-2024ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 03 ರಿಂದ 11 ರವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2024”ನ್ನು ಮೈಸೂರಿನ ಹಳೆ ಡಿ.ಸಿ. ಕಚೇರಿ ಎದುರು, ಸೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಏರ್ಪಡಿಸಲಾಗುವುದು.

ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು / ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ 1000 ರೂ.ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು - ಅವರ ಹೆಸರಿನಲ್ಲಿ ಡಿಡಿಗಳನ್ನು ಸಲ್ಲಿಸುವುದು.

ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ https://kpp.karnataka.gov.in  ಪಡೆದುಕೊಳ್ಳಬಹುದಾಗಿದೆ.

ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಸೆಪ್ಟೆಂಬರ್ 30 ಸಂಜೆ 5.00 ಗಂಟೆಗೆ ಒಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು- ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ -ಮೇಲ್ [email protected]   ಮೂಲಕ ಸಲ್ಲಿಸುವುದು. ನಿರ್ಮಿಸಲಾಗುವ 60 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ಹಾಗೂ ದೂರವಾಣಿ ಸಂ.080-22484516 / 22107704 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.



Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ