ಎಂಇಎಸ್ ಸಭೆಗೆ ನುಗ್ಗಲು ಯತ್ನಿಸಿದ ಕನ್ನಡಿಗರು
ಬೆಳಗಾವಿ : ಪೊಲೀಸರಿಂದ ಕರಾಳ ದಿನಾಚರಣೆಗೆ ಅನುಮತಿ ಇಲ್ಲದೆ ಇದ್ದರೂ ಎಂಇಎಸ್ ಬೆಳಗಾವಿಯಲ್ಲಿ ಪ್ರತಿ ವರ್ಷ ಕರಾಳ ದಿನಾಚರಣೆ ಆಚರಿಸುತ್ತ ಬರುತ್ತಿದೆ. ಕರಾಳ ದಿನಾಚರಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಯವರು ಶನಿವಾರ ಮಧ್ಯಾಹ್ನ ಸಭೆ ನಡೆಸಲಿರುವ ಮರಾಠಾ ಮಂಗಲ ಕಾರ್ಯಾಲಯಕ್ಕೆ ನುಗ್ಗಲು ಯತ್ನಿಸಿದ ಕನ್ನಡ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಮುಖಂಡರಾದ ಮಹಾದೇವ ತಳವಾರ, ವಾಜೀದ ಹಿರೇಕೋಡಿ ನೇತೃತ್ವದಲ್ಲಿ ಕನ್ನಡ ಹೋರಾಟಗಾರರು ಗೋಗಟೆ ವೃತ್ತದ ಮೂಲಕ ಮರಾಠಾ ಮಂಗಲ ಕಾರ್ಯಾಲಯಕ್ಕೆ ತೆರಳಲು ಮುಂದಾದರು.
ಆಗ ಪೊಲೀಸರು 20 ಕ್ಕೂ ಅಧಿಕ ಕಾರ್ಯಕರ್ತರನ್ನು ತಡೆದರು. ಪರಸ್ಪರರ ಮಧ್ಯೆ ತಳ್ಳಾಟ, ನೂಕಾಟ ನಡೆಯಿತು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.