LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂ.ಗ್ರಾಂ.ಜಿಲ್ಲೆ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿಗೆ ಸಾಮಾನ್ಯ ವರ್ಗದ ಆರ್ಯ ವೈಶ್ಯ ಸಮುದಾಯದವರಿಗೆ ಸಾಲ ಸೌಲಭ್ಯ ಒದಗಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ/ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ.

ಸಂಬಂಧಪಟ್ಟ ಯೋಜನೆ ಸೌಲಭ್ಯ ಪಡೆಯಲು ಅರ್ಹ ಅರ್ಜಿದಾರರು ಸಾಮಾನ್ಯ ವರ್ಗದಲ್ಲಿ ಆರ್ಯ, ವೈಶ್ಯ ಸಮುದಾಯಕ್ಕೆ ಸೇರಿರಬೇಕು,  "ನಮೂನೆ - ಜೆ" ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪಡೆದಿರಬೇಕು (ಪ್ರಮಾಣ ಪತ್ರ ಚಾಲ್ತಿಯಲ್ಲಿರಬೇಕು). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು. ಹಾಗೇ ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಈ ಯೋಜನೆಯಲ್ಲಿ ಮಹಿಳೆಯರಿಗೆ ಶೇ.33%, ವಿಶೇಷಚೇತನರಿಗೆ ಶೇ.5% ಹಾಗೂ ತೃತೀಯ ಲಿಂಗಿಗಳಿಗೆ ಶೇ.5% ಮೀಸಲಾತಿಯನ್ನು ನೀಡಲಾಗಿದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹಗಿರುತ್ತಾರೆ, ಆದರೆ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಸಾಲ ಸೌಲಭ್ಯ ಪಡೆಯಲು ಅವಕಾವಿರುತ್ತದೆ.

ಅರ್ಜಿಯನ್ನು ಅನ್ ಲೈನ್ ಮೂಲಕ   kacdc.karnataka.gov.in ಅಧಿಕೃತ ಜಾಲತಾಣದಲ್ಲಿ ಜುಲೈ 31 ರೊಳಗೆ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 080-29605761 ಗೆ ಕಚೇರಿ ಸಮಯದಲ್ಲಿ ಸಂಪರ್ಕಿಬಹುದಾಗಿದೆ ಎಂದು ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026