LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಬಜೆಟ್ 2026-27 : ಉನ್ನತ ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಒತ್ತು

ಬೆಂಗಳೂರು: “ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ” ಎಂಬ ಘೋಷಣೆಯೊಂದಿಗೆ ಮಂಡನೆಯಾದ ಕರ್ನಾಟಕ ಬಜೆಟ್ 2026-27 ನಲ್ಲಿ ಉನ್ನತ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿದೆ.
ರೂ.2,500 ಕೋಟಿ ವೆಚ್ಚದಲ್ಲಿ ‘ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ’ ಅನುಷ್ಠಾನಗೊಳ್ಳಲಿದ್ದು, ಇದರಡಿ ರಾಜ್ಯದ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಹಾಗೂ 11 ಪಾಲಿಟೆಕ್ನಿಕ್ ಸಂಸ್ಥೆಗಳನ್ನು ಮಾದರಿ ಶಿಕ್ಷಣ ಸಂಸ್ಥೆಗಳಾಗಿ ಅಭಿವೃದ್ಧಿಪಡಿಸಲಾಗುತ್ತದೆ. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಹಾಗೂ ಸ್ಟಾರ್ಟ್‌ಅಪ್ ಸಂಸ್ಕೃತಿಗೆ ಉತ್ತೇಜನ ನೀಡಲು 9 ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸುವ ಯೋಜನೆಯೂ ಇದೆ.
ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಹಂತ ಹಂತವಾಗಿ ಭರ್ತಿ ಮಾಡುವುದಾಗಿ ಸರ್ಕಾರ ಘೋಷಿಸಿದೆ.
ಇದೇ ವೇಳೆ ರಾಜ್ಯದ 25 ಸರ್ಕಾರಿ ಪದವಿ ಕಾಲೇಜುಗಳು, ಮೂರು ಪಾಲಿಟೆಕ್ನಿಕ್ ಹಾಗೂ ಮೂರು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಟ್ಟು ರೂ.31 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿನಿಯರಿಗೆ ಅಗತ್ಯವಾದ ಮೂಲ ಸೌಲಭ್ಯಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ.
ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ, ಮೈಸೂರು ನಗರದ ನರಸಿಂಹರಾಜ ಕ್ಷೇತ್ರ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಹೊಸ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು