Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕರ್ನಾಟಕ ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು

ಬಾಗಲಕೋಟೆ/ ದಾವಣಗೆರೆ : ಕರ್ನಾಟಕದಲ್ಲಿ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಜಯಗಳಿಸಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ ಮೇಟಿ ಗೆಲುವಿನ ನಗೆ ಬೀರಿದರೆ ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ ಶಾಮನೂರು ಅವರು ಜಯಗಳಿಸಿದ್ದಾರೆ.
ಎಚ್​​.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ (Bagalakot) ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್​​ ಎಚ್‌.ವೈ.ಮೇಟಿ ಅವರ ಮಗ ಉಮೇಶ ಮೇಟಿ ಅವರಿಗೆ ಟಿಕೆಟ್‌ ನೀಡಿತ್ತು. ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದ ಉಮೇಶ ಮೇಟಿ ಗೆಲ್ಲುವ ಮೂಲಕ ಕ್ಷೇತ್ರವನ್ನು ಮರಳಿ ಕಾಂಗ್ರೆಸ್​ ತನ್ನ ತೆಕ್ಕೆಗೆ ಪಡೆದುಕೊಂಡಿದೆ.

ಕಾಂಗ್ರೆಸ್​​ ಅಭ್ಯರ್ಥಿ ಉಮೇಶ ಮೇಟಿ ಅವರಿಗೆ 97,941 ಮತಗಳು ಬಿದ್ದರೆ ಬಿಜೆಪಿ ಅಭ್ಯರ್ಥಿಯಾಗಿದ್ದ ವೀರಣ್ಣ ಚರಂತಿಮಠ ಅವರಿಗೆ 76,075 ಮತಗಳು ಬಿದ್ದವು. ಉಮೇಶ ಮೇಟಿ ಅವರು ೨೧೮೮೬ ಮತಗಳಾಂತರದಿಂದ ಜಯಗಳಿಸಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸಮರ್ಥ ಶಾಮನೂರು ಅವರು 5,708 ಮತಗಳ ಅಂತರಿಂದ ಜಯಗಳಿಸಿದ್ದಾರೆ. ಶಾಮನೂರು ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಈ ಕ್ಷೇತ್ರ ತೆರವಾಗಿತ್ತು. ಕಾಂಗ್ರೆಸ್‌ ಪಕ್ಷವು ಶಾಮನೂರು ಅವರ ಮೊಮ್ಮಗ ಸಮರ್ಥ ಶಾಮನೂರು ಅವರಿಗೆ ಟಿಕೆಟ್‌ ನೀಡಿತ್ತು. ಆರಂಭದಲ್ಲಿ ಹಿನ್ನಡೆ ಅನುಭವಿಸಿದ್ದ ಸಮರ್ಥ ನಂತರ ಮುನ್ನಡೆ ಪಡೆದು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಅವರನ್ನು ಸೋಲಿಸಿದ್ದಾರೆ. ಸಮರ್ಥ ಶಾಮನೂರು ಅವರಿಗೆ 69,578 ಮತಗಳು ಬಿದ್ದರೆ, ಬಿಜೆಪಿಯ ಶ್ರೀನಿವಾಸ ಟಿ.ದಾಸ ಕರಿಯಪ್ಪ 63,870 ಮತಗಳನ್ನು ಪಡೆದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ