LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆಗಸ್ಟ್ 11ರಿಂದ ಕರ್ನಾಟಕ ಮುಂಗಾರು ಅಧಿವೇಶನ ಆರಂಭ

ಬೆಂಗಳೂರು : ಸಂಸತ್ತಿನ ಮುಂಗಾರು ಅಧಿವೇಶನ ಇದೇ ಜುಲೈ 21ರಿಂದ ಆರಂಭವಾಗಲಿದೆ. ಇದೀಗ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 11ರಿಂದ ಆರಂಭವಾಗಲಿದೆ ಎಂದು ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದಾರೆ.

ಆಗಸ್ಟ್ 11ರಿಂದ ಆ. 22ರ ವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ. ಇನ್ನು ಆಗಸ್ಟ್ 11ರಂದು ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದು, ಒಟ್ಟು 12 ದಿನಗಳ ಪೈಕಿ 8 ದಿನ ಮಾತ್ರ ಅಧಿವೇಶನ ನಡೆಯಲಿದೆ ಎಂದು ಅಧಿಸೂಚನೆ ಹೊರಡಿಸಲಾಗಿದೆ.

ಭಾರತ ಸಂವಿಧಾನದ 174ನೇ ಅನುಚ್ಛೇದದ (1)ನೇ ಖಂಡದ ಮೂಲಕ ನನಗೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಥಾವರ್ ಚಂದ್ ಗೆಹ್ಲೋಟ್, ಕರ್ನಾಟಕ ರಾಜ್ಯಪಾಲರು ಆದ ನಾನು 2025ರ ಆಗಸ್ಟ್ 11ರಂದು ಸೋಮವಾರ ಬೆಳಗ್ಗೆ 11ಕ್ಕೆ ಬೆಂಗಳೂರಿನಲ್ಲಿ ಕರ್ನಾಟಕ ವಿಧಾನಮಂಡಲದ ಅಧಿವೇಶನ ಸಮಾವೇಶಗೊಳಿಸಬೇಕೆಂದು ಈ ಮೂಲಕ ಕರೆಯುತ್ತಿದ್ದೇನೆ ಎಂದು ಜಿ.ಶ್ರೀಧರ್ ತಿಳಿಸಿದ್ದಾರೆ.

ಕರ್ನಾಟಕ ವಿಧಾನಮಂಡಲದ ಅಧಿವೇಶನದ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಆಗಸ್ಟ್ 11 ಸೋಮವಾರದಿಂದ ಆ. 22ರವರೆಗೆ ವಿಧಾನಮಂಡಲದ ಕಲಾಪಗಳು ನಡೆಯಲಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026