LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಡಿಗೆ ಮತ್ತೆ 3 ರಾಷ್ಟ ಮಟ್ಟದ ಪ್ರಶಸ್ತಿಗಳು

ಬೆಂಗಳೂರು: ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ( ASRTU) 2023-24ನೇ ಸಾಲಿನ ಒಟ್ಟು 3 ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳು ( National Transport Excellence Award) ಲಭಿಸಿರುತ್ತವೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ( ASRTU)ದ ವ್ಯಾಪ್ತಿಯಲ್ಲಿ ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸದಸ್ಯತ್ವವನ್ನು ಹೊಂದಿವೆ.

ಸದರಿ ಒಕ್ಕೂಟವು 13ನೇ ಆಗಸ್ಟ್ 1965 ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು ,ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುತ್ತದೆ.ಈ ಸಂಸ್ಥೆಯು 59 ವರ್ಷಗಳ ಅನುಭವವನ್ನು ಹೊಂದಿದ್ದು, ದೇಶದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ.

ಕೆ ಎಸ್ ಆರ್ ಟಿ‌‌ ಸಿ‌ ಗೆ ಅಶ್ವಮೇಧ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಯೋಜನೆಗಳು ಹಾಗೂ ಗಣಕೀಕರಣ ಉಪಕ್ರಮಗಳಿಗಾಗಿ ಮೂರು ಪ್ರಶಸ್ತಿಗಳು ಲಭಿಸಿರುತ್ತದೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ( ASRTU)ದ ವತಿಯಿಂದ ನವದೆಹಲಿಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಡಾ.. ಕಿರಣ್ ಬೇಡಿ IPS(ನಿವೃತ್ತ ) ರವರು ಪ್ರಶಸ್ತಿ ಪ್ರಧಾನ ಮಾಡಿದ್ದು, ಈ ಸಂದರ್ಭದಲ್ಲಿ  ಪ್ರಿಯಾಂಗ ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು , ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಸೂರ್ಯಕಿರಣ್ , ನಿರ್ವಾಹಕ ನಿರ್ದೇಶಕರು , ASRTU ರವರು ಉಪಸ್ಥಿತರಿದ್ದು

ಗುರುರಾಜ ಹೆಚ್, ಉಪಮುಖ್ಯ ಸಂಚಾರ ವ್ಯವಸ್ಥಾಪಕರು ಹಾಗೂ ಶ್ರೀಮತಿ ರಾಧ, ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ರವರು ನಿಗಮದ ಪರವಾಗಿ ಪ್ರಶಸ್ತಿಗಳನ್ನು ಸ್ವೀಕರಿಸಿರುತ್ತಾರೆ.

ಇದೆ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ  ಸುಲೋಚನಾ ದೇವಿ ಚಾಲಕ ಕಂ ನಿರ್ವಹಕಿ, ಆನೇಕಲ್ ಘಟಕರವರು ಸಾರಿಗೆ ಸಂಸ್ಥೆಯಲ್ಲಿ ಸಲ್ಲಿಸಿರುವ 26 ವರ್ಷಗಳ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಗಿರುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ