LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ–2026 ದೂರು ಸ್ವೀಕರಿಸಲು ಹಾಗೂ ಮತದಾರರಿಗೆ ಮಾಹಿತಿ ನೀಡಲು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸಲಹಾ ಕೇಂದ್ರ ಸ್ಥಾಪನೆ

 

ಬಳ್ಳಾರಿ,ಅ.06
ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಸದಸ್ಯರ ಪದಾವಧಿಯು 2026ನೇ ನ.11 ಕ್ಕೆ ಮುಕ್ತಾಯಗೊಳ್ಳಲಿದ್ದು, ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ–2026 ರ ಚುನಾವಣೆಗೆ ಸಂಬಂಧಿಸಿದ ದೂರು ಸ್ವೀಕರಿಸಲು ಹಾಗೂ ಮತದಾರರಿಗೆ ಮಾಹಿತಿ ನೀಡಲು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಕೋಣೆ ಸಂಖ್ಯೆ 17 ರಲ್ಲಿ ದೂರು ಮೇಲ್ವಿಚಾರಣೆ ತಂಡ ಹಾಗೂ ಮತದಾರರ ಮಾಹಿತಿ ಮತ್ತು ಸಲಹಾ ಕೇಂದ್ರ (ಕಂಪ್ಲೆöಟ್ಸ್ ಮಾನಿಟರಿಂಗ್ ಸೆಲ್ ಮತ್ತು ವೋರ‍್ಸ್ ಹೆಲ್ಪ್ಡೆಸ್ಕ್) ಸ್ಥಾಪಿಸಿಲಾಗಿದೆ.
ಈ ಸಲಹಾ ಕೇಂದ್ರದ ದೂ.08472-200255 ಆಗಿದ್ದು, ಸಾರ್ವಜನಿಕರು ಈ ಸಲಹಾ ಕೇಂದ್ರ ತಂಡಕ್ಕೆ ಸಂಪರ್ಕಿಸಿ ಮತದಾರರ ನೋಂದಣಿ ಮತ್ತು ಚುನಾವಣೆಗೆ ಕುರಿತಾದ ಮಾಹಿತಿ ಪಡೆಯಬಹುದಾಗಿದೆ. ಯಾವುದೇ ದೂರುಗಳಿದ್ದಲ್ಲಿ ದಾಖಲಿಸಬಹುದಾಗಿದೆ ಎಂದು ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ ಅವರು ತಿಳಿಸಿದ್ದಾರೆ.
ಅರ್ಹತಾ ದಿನಾಂಕ 01.11.2025ಕ್ಕೆ ಅನ್ವಯಸುವಂತೆ ಮತದಾರರ ಪಟ್ಟಿ ಸಿದ್ಧಪಡಿಸಲು ವೇಳಾಪಟ್ಟಿ ಹೊರಡಿಸಲಾಗಿದ್ದು, ದಿನಾಂಕ:25.11.2025 ರಂದು ಕರಡು ಮತದಾರಪ್ರಾರಂಭದಿಂದಕಟಿಸಿ ದಿನಾಂಕ:25.11.2025 ರಿಂದ 10.12.2025ರ ವರೆಗೆ ಆಕ್ಷೇಪಣೆಗಳನ್ನು ಅಹ್ವಾನಿಸಿ ದಿನಾಂಕ:30.12.2025 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ಹೊಸದಾಗಿ ಮತದಾರರ ಪಟ್ಟಿಯನ್ನು ಸಿದ್ದಪಡಿಸಬೇಕಾಗಿರುವುದರಿಂದ ಈ ಕಾರ್ಯಕ್ಕಾಗಿ ಅರ್ಹ ಮತದಾರರು ನೋಂದಣಿಗಾಗಿ ಸೂಕ್ತ ಮಾಹಿತಿಯನ್ನು ನೀಡಿ, ಅವರ ಹೆಸರನ್ನು ನೋಂದಾಯಿಸಲು ಅಲ್ಲದೇ ಈಗಾಗಲೇ ನೋಂದಣಿಯಾಗಿದ್ದಲ್ಲಿ ಅವರ ಮತದಾರರ ಪಟ್ಟಿಯ ಭಾಗ ಸಂಖ್ಯೆ ಹಾಗೂ ಕ್ರಮ ಸಂಖ್ಯೆಯ ಮಾಹಿತಿ ನೀಡುವುದು ಇದನ್ನು ಹೊರತುಪಡಿಸಿಯು ಸಹ ಮತದಾರರ ನೋಂದಣಿ ಪ್ರಕ್ರೀಯೆ ಪ್ರಾರಂಭದಿದ ಈ ಚುನಾವಣೆಯ ಫಲಿತಾಂಶ ಘೋಷಣೆಯಾಗುವವರೆಗೂ ಲಿಖಿತವಾಗಿ, ಮೌಖಿಕವಾಗಿ ಹಾಗೂ ದೂರವಾಣಿ ಮುಖಾಂತರ ಸ್ವೀಕೃತವಾಗುವಂತಹ ದೂರುಗಳ ಮೇಲೆ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳ ನಿರ್ದೇಶನದ ಮೇರೆಗೆ ಕ್ರಮಕೈಗೊಳ್ಳಲು ದೂರು ಮೇಲ್ವಿಚಾರಣೆ ತಂಡ ಹಾಗೂ ಮತದಾರರ ಮಾಹಿತಿ ಮತ್ತು ಸಲಹಾ ಕೇಂದ್ರವನ್ನು ಸ್ಥಾಪಿಸಿ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನೇಮಿಸಲಾಗಿದೆ.
*ಅಧಿಕಾರಿ ಹಾಗೂ ಸಿಬ್ಬಂದಿಯ ಪದನಾಮ, ಮೊಬೈಲ್ ಸಂಖ್ಯೆ:*
ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯ ಬಜೇಟ್ ಆಫೀಸರ್ ಪ್ರಸನ್ನಕುಮಾರ(ಮೊ.9448712912), ಶಿರಸ್ತೇದಾರ ಅಶೋಕ(ಮೊ.9731720711), ಶಿರಸ್ತೇದಾರ ರವಿಕುಮಾರ ಗಾಜರೆ(ಮೊ.9480149223) ಹಾಗೂ ದ್ವಿತೀಯ ದರ್ಜೆ ಸಹಾಯಕ ಶರಣಪ್ಪ ಶ್ರೀಗಿರಿ(ಮೊ.7406111177) ಮತ್ತು ದ್ವಿತೀಯ ದರ್ಜೆ ಸಹಾಯಕ ಪ್ರವೀಣ ಕುಲಕರ್ಣಿ (ಮೊ.7829766596) ಇವರನ್ನು ನೇಮಿಸಲಾಗಿದೆ.
ದೂರು ಮೇಲ್ವಿಚಾರಣೆ ತಂಡ ಮತ್ತು ಮತದಾರರ ಮಾಹಿತಿ ಮತ್ತು ಸಲಹಾ ಕೇಂದ್ರಕ್ಕೆ ನೇಮಕ ಮಾಡಲಾದ ಅಧಿಕಾರಿ ಹಾಗೂ ಸಿಬ್ಬಂದಿಗಳು ತಕ್ಷಣದಿಂದಲೇ ಕಾರ್ಯನಿರ್ವಹಿಸಿ ಲಿಖಿತವಾಗಿ / ಮೌಖಿಕವಾಗಿ / ದೂರವಾಣಿ ಮುಖಾಂತರ ಸ್ವೀಕೃತವಾದ ಎಲ್ಲಾ ರೀತಿಯ ಸಲಹೆ ಹಾಗೂ ದೂರುಗಳಿಗೆ ದಾಖಲಾಧಾರಿತವಾದ ವಹಿಯನ್ನು ನಿರ್ವಹಿಸಿ ನಿಯಮಾನುಸಾರ ವಿಲೇಗೊಳಿಸಿ ಕಾಲೋಚಿತಗೊಳಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು