Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕೊನೆಯುಸಿರಲ್ಲಿ ಕರ್ನಾಟಕದ ಪ್ರಜಾಪ್ರಭುತ್ವ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನವಾಗಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಅವರ ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಅತ್ಯಂತ ಖಂಡನೀಯ ಎಂದು ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಗೌರವಾನ್ವಿತ ಸಚಿವೆ ಬಗ್ಗೆ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು. ಎಲ್ಲದ್ದಕ್ಕೂ ಡಾ.ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸಭಾಪತಿಗಳೂ ರೂಲಿಂಗ್ ನೀಡಿದ್ದಾರೆ.

ಆ ನಂತರವೂ ನಡೆಯುತ್ತಿರುವ ಘಟನಾವಳಿಗಳು, ಸಭಾಪತಿಗಳನ್ನೇ ನಿಂದಿಸುವ ಕೆಟ್ಟ ನಡವಳಿಕೆಗಳು ಆಘಾತಕಾರಿ. ಸರ್ಕಾರದಲ್ಲಿರುವ ಕೆಲವರು ಈ ಘಟನೆಗೆ ಜ್ವಾಲೆ ಸ್ವರೂಪ ನೀಡಿ ಪ್ರಚೋದಿಸುತ್ತಿರುವುದು ಕಳವಳಕಾರಿ ಎಂದು ಕುಮಾರಸ್ವಾಮಿ ಆತಂಕ ವ್ಯಕ್ತ ಪಡಿಸಿದ್ದಾರೆ.

ಮೀಸಲಾತಿಗಾಗಿ ಪಂಚಮಸಾಲಿ ಮುಖಂಡರು ಸುವರ್ಣಸೌಧದ ಮುಂದೆ ಪ್ರತಿಭಟಿಸಿದ್ದಕ್ಕೆ ಪೊಲೀಸರಿಂದ ಲಾಠಿಚಾರ್ಜ್ ಮಾಡಿಸಿ ಪೌರುಷ ಮೆರೆದಿತ್ತು ಕರ್ನಾಟಕ ಕಾಂಗ್ರೆಸ್ ಸರಕಾರ. ಅಂದು ಪೊಲೀಸರ ಪ್ರತಾಪ ಹೇಳತೀರದು. ಗೇಟಿನಲ್ಲಿಯೇ ತಡೆದು ಆ ಪಂಚಮಸಾಲಿ ಜನರಿಗೆ ರಕ್ತ ಬರುವಂತೆ ಲಾಠಿ ಬೀಸಿದ ಪೊಲೀಸರೇ..,

ಈ ಗೂಂಡಾಗಳು ಸುವರ್ಣಸೌಧದೊಳಕ್ಕೆ ಹೇಗೆ ಬಂದರು? ಅಥವಾ... ಅವರೇ ನಿಮ್ಮ ಕಣ್ತಪ್ಪಿಸಿ ಒಳ ನುಸಳಿದರೋ ಅಥವಾ ಸರ್ಕಾರವೇ ಷಡ್ಯಂತ್ರ ಮಾಡಿ ಒಳ ನುಗ್ಗಿಸಿತೋ? ಇಲ್ಲವೇ ಯಾವುದಾದರೂ ಕಲ್ಲು ಬಂಡೆಯ ಕರಾಮತ್ತು, ಕುಮ್ಮಕ್ಕು ಇದೆಯಾ? ಎಂದು ಕೇಂದ್ರ ಸಚಿವರು ವಾಗ್ದಾಳಿ ಮಾಡಿದ್ದಾರೆ.

ಸದನದ ಕಾರಿಡಾರಿನಲ್ಲಿಯೇ ಆ ಗೂಂಡಾಗಳು ಶಾಸಕರನ್ನು ಅಟ್ಟಾಡಿಸುತ್ತಾರೆ, ಕೊಲೆಗೆತ್ನಿಸುತ್ತಾರೆ, ಮಾರ್ಷಲ್'ಗಳನ್ನು ಕೆಳಕ್ಕೆ ಕೆಡವಿ ಕ್ರಿಮಿನಲ್ ಪ್ರವೃತ್ತಿ ಮೆರೆಯುತ್ತಾರೆಂದರೆ ಬಂಡೆ ಬೆಂಬಲವಿದೆ ಎಂದೇ ಅರ್ಥ. ಆ ಗೌರವಾನ್ವಿತ ಸಚಿವೆಯ ಆಪ್ತ ಸಹಾಯಕ ಶಾಸಕರ ಮೇಲೇರಿ ಹೋಗುವ, ಕಾರಿಡಾರಿನ ಕಬ್ಬಿಣದ ಬಾಗಿಲನ್ನೇ ಮುರಿಯಲೆತ್ನಿಸಿ ಹಲ್ಲೆಗೆ ಯತ್ನಿಸುವ ದೃಶ್ಯಗಳು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ.

ರಾಜ್ಯದಲ್ಲಿ ಆಡಳಿತ ಸುರಕ್ಷಿತ ಕೈಗಳಲ್ಲಿ ಇಲ್ಲ ಎನ್ನುವುದಕ್ಕೆ ಆ ದೃಶ್ಯಗಳೇ ಸಾಕ್ಷಿ ಎಂದು ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಸುವರ್ಣಸೌಧಕ್ಕೆ ನುಗ್ಗಿದ ಗೂಂಡಾಗಳನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ರೌಡಿಪಟ್ಟಿ ತೆರೆಯಬೇಕು. ಸಮಾಜದ ಶಾಂತಿಗೆ ಬೆದರಿಕೆಯಾಗಿರುವ ಆ ಕಿಡಿಗೇಡಿಗಳನ್ನು ಸುವರ್ಣಸೌಧ, ವಿಧಾನಸೌಧದಿಂದ ಶಾಶ್ವತವಾಗಿ ನಿರ್ಬಂಧಿಸಬೇಕು ಎಂದು ಅವರು ತಾಕೀತು ಮಾಡಿದ್ದಾರೆ.

ಪೊಲೀಸರೇ.., ಇಡೀ ಪ್ರಕರಣದ ಬಗ್ಗೆ ನೀವು ಉತ್ತರಿಸಬೇಕಾಗುತ್ತದೆ. ಇಡೀ ರಾತ್ರಿ ಸಿ.ಟಿ.ರವಿ ಅವರನ್ನು ಪೊಲೀಸ್ ಜೀಪಿನಲ್ಲಿ ಸುತ್ತಿಸುತ್ತೀರಿ ಎಂದರೆ, ಇದಕ್ಕೆ ಯಾರ ಫರ್ಮಾನು ಕಾರಣ? ಈ ಗೂಂಡಾಗಳ ಗ್ಯಾಂಗ್ ಲೀಡರ್ ಯಾರು? ನಿಮಗೆ ಎಲ್ಲಾ ಮಾಹಿತಿ ಇರುತ್ತದೆ, ನೀವೂ ಸತ್ಯ ಹೇಳಬೇಕಾಗುತ್ತದೆ ಎಂದು ಕುಮಾರಸ್ವಾಮಿ ತಾಕೀತು ಮಾಡಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ