ಕಾರವಾರ: ಅರಬ್ಬಿ ಸಮುದ್ರದಲ್ಲಿ (Arabian Sea) ಮೀನುಗಾರಿಕೆಗೆ ತೆರಳಿದ್ದ ಕಾರವಾರ ಮೂಲದ ಪರ್ಷಿಯನ್ ಮಾದರಿಯ ಮೀನುಗಾರಿಕಾ ಬೋಟ್ (Fishing Boat) ಗೋವಾ ಸಮುದ್ರ ವ್ಯಾಪ್ತಿಯಲ್ಲಿ ಮುಳುಗಡೆಯಾಗಿದೆ. ಗೋವಾದ ಬೇತುಲ್ ಸಮುದ್ರ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದ್ದು, ಬೋಟ್‌ನಲ್ಲಿದ್ದ 22 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಸಮೀಪದಲ್ಲೇ ಮೀನುಗಾರಿಕೆ ನಡೆಸುತ್ತಿದ್ದ ಇತರೆ ಬೋಟ್‌ಗಳ ಮೀನುಗಾರರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮುುದಗಾದ ದಿನೇಶ್ ಕಾಂಚನ್ ಅವರಿಗೆ ಸೇರಿದ ‘ಶ್ರೀ ಅಮ್ಮ’ ಹೆಸರಿನ ಪರ್ಷಿಯನ್ ಬೋಟ್ ಕಾರವಾರದ ಮುದಗಾ ಬಂದರಿನಿಂದ ವಾರದ ಹಿಂದೆ ಆಳ ಸಮುದ್ರ ಮೀನುಗಾರಿಕೆಗೆ ತೆರಳಿತ್ತು. ಬೋಟ್ ಮುಳುಗಡೆಯಿಂದ ಬೋಟ್, ಬಲೆ ಸೇರಿದಂತೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟವಾಗಿದೆ.