LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಡಲೆ ಕಾಳು ಬೆಳದ ರೈತರಿಗೆ ಖಷಿ ಸುದ್ದಿ.! ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿ, ರೇಟ್ ಇಷ್ಟು.!

ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿ, ರೇಟ್ ಇಷ್ಟು.!

ದಾವಣಗೆರೆ :ಹಿಂಗಾರು ಹಂಗಾಮಿನಲ್ಲಿ ಬೆಳೆದ ಕಡಲೆಕಾಳು ಉತ್ಪನ್ನವನ್ನು ರೈತರಿಂದ ನೇರವಾಗಿ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಸರ್ಕಾರ ಆದೇಶಿಸಿದ್ದು  ಖರೀದಿಗೆ ನೊಂದಣಿಯನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.

ಅವರು ಇತ್ತೀಚೆಗೆ ನಡೆದ ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉತ್ತಮ ಗುಣಮಟ್ಟದ ಕಡಲೆಕಾಳಿಗೆ ಸರ್ಕಾರ ಪ್ರತಿ ಕ್ವಿಂಟಾಲ್‍ಗೆ 5650 ರೂ. ನಿಗದಿಪಡಿಸಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಕಡಲೆಕಾಳಿನ ಬೆಲೆ ಕುಸಿದಿದ್ದು, ರೈತರು ನಷ್ಟಕ್ಕೆ ಒಳಗಾಗುತ್ತಿದ್ದಾರೆ.  ಹೀಗಾಗಿ ರೈತರ ಹಿತಕಾಯಲು ಸರ್ಕಾರದ ವತಿಯಿಂದ ಜಿಲ್ಲೆಯಲ್ಲಿ ಕೂಡಲೆ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿಗೆ ಜಗಳೂರು ಮತ್ತು ಚನ್ನಗಿರಿ ಎಪಿಎಂಸಿ ಆವರಣದಲ್ಲಿ ರೈತರ ನೊಂದಣಿ ಕಾರ್ಯ ಪ್ರಾರಂಭಿಸಬೇಕು.  ನೊಂದಣಿಗೂ ಮುನ್ನ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಣಿ ಮಾಡಿರಬೇಕು.  ಖರೀದಿ ಕೇಂದ್ರಕ್ಕೆ ಅವಶ್ಯಕವಿರುವ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಬೇಕು ಹಾಗೂ ಖರೀದಿಗೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಪೂರ್ವ ಸಿದ್ಧತೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಫ್‍ಎಕ್ಯೂ ಗುಣಮಟ್ಟದ ಕಡಲೆಕಾಳಿಗೆ ಪ್ರತಿ ಕ್ವಿಂಟಾಲ್ ರೂ. 5650 ರೂ. ಬೆಂಬಲ ಬೆಲೆ ನಿಗದಿಪಡಿಸಿದ್ದು, ನಾಫೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಏಜೆನ್ಸಿಯಾಗಿ ಹಾಗೂ ಕರ್ನಾಟಕ ಸಹಕಾರ ಮಾರಾಟ ಮಹಾ ಮಂಡಳಿ ರಾಜ್ಯದ ವತಿಯಿಂದ ಖರೀದಿ ಏಜೆನ್ಸಿಯಾಗಿದೆ.  ಜ.27 ರಿಂದ 80 ದಿನಗಳ ಕಾಲ ರೈತರಿಂದ ನೊಂದಣಿ ಕಾರ್ಯ ನಡೆಯಲಿದ್ದು, ಖರೀದಿಯೂ ಕೂಡ 90 ದಿನಗಳ ಕಾಲ ನಡೆಯಲಿದೆ.  ಪ್ರತಿ ಎಕರೆಗೆ 4 ಕ್ವಿಂಟಾಲ್,  ಪ್ರತಿ ರೈತರಿಂದ ಗರಿಷ್ಠ 20 ಕ್ವಿಂ. ಕಡಲೆಕಾಳು ಖರೀದಿಗೆ ಮಿತಿ ನಿಗದಿಪಡಿಸಲಾಗಿದೆ. ರೈತರು ಇದರ ಸದುಪಯೋಗ ಮಾಡಿಕೊಳ್ಳಲು ಅವರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST