ಜೋಡು ಕೆರೆಗೆ ಕಾಯಕಲ್ಪ: ಕಾಮಗಾರಿ ಪರಿಶೀಲಿಸಿದ ಸಚಿವ ಲಕ್ಷ್ಮಣ ಸವದಿ
ಕೆರೆಯಲ್ಲಿ ನೀರು ತುಂಬಿಸುವಿಕೆ, ಅಂತರ್ಜಲ ಹೆಚ್ಚಳಕ್ಕೆ ಕ್ರಮ: ಅಧಿಕಾರಿಗಳಿಗೆ ಸೂಕ್ತ ಸಲಹೆ
ಅಥಣಿ: ಪಟ್ಟಣದ ಪ್ರಮುಖ ಜಲಮೂಲವಾಗಿರುವ ಜೋಡು ಕೆರೆ ೨೫ ಕೋಟಿ ರೂಗಳ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಸೋಮವಾರ ಸಹಕಾರ ಸಚಿವ ಹಾಗೂ ಅಥಣಿ ಶಾಸಕ ಲಕ್ಷö್ಮಣ ಸವದಿ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಹಾಗೂ ಕೆರೆಗೆ ನೀರು ತುಂಬಿಸುವ ಕಾರ್ಯವನ್ನು ಪರಿಶೀಲಿಸಿದರು. ಜೋಡು ಕೆರೆಯ ಅಭಿವೃದ್ಧಿಯಿಂದ ಪಟ್ಟಣದ ಸೌಂದರ್ಯ ಹೆಚ್ಚುವುದರ ಜತೆಗೆ ಅಂತರ್ಜಲ ಮಟ್ಟ ಸುಧಾರಿಸಲು ಸಹಕಾರಿಯಾಗುವ ಹಿನ್ನೆಲೆಯಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಕಾಮಗಾರಿಗಳ ಕುರಿತು ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ವೇಳೆ ಮಾತನಾಡಿದ ಸಹಕಾರಿ ಸಚಿವ ಲಕ್ಷö್ಮಣ ಸವದಿ ಅಥಣಿ ಪಟ್ಟಣದ ಭವಿಷ್ಯದ ನೀರಿನ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಜಲಮೂಲಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಜೋಡು ಕೆರೆಯ ಅಭಿವೃದ್ಧಿ ಕಾಮಗಾರಿಗಳು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು ಜೋಡು ಕೆರೆ ಅಭಿವೃದ್ಧಿ ಕೇವಲ ಸೌಂದರ್ಯೀಕರಣಕ್ಕೆ ಸೀಮಿತವಾಗದೆ, ಪಟ್ಟಣದ ಜಲಸಂಪನ್ಮೂಲ ಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಗೆ ಪೂರಕವಾಗುವಂತಿರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

One attachment • Scanned by Gmail