LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ದಿ ಕೇರಳ ಸ್ಟೋರಿ' ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ: ಕೇರಳ ಸಿಎಂ ಪಿಣರಾಯಿ ವಿಜಯನ್ ಖಂಡನೆ

ತಿರುವನಂತಪುರ : 2023ನೇ ಸಾಲಿನ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿವೆ. ಇಡೀ ದೇಶಾದ್ಯಂತ ಸಂಚಲನ ಮೂಡಿಸಿದ್ದ 'ದಿ ಕೇರಳ ಸ್ಟೋರಿ' ಸಿನಿಮಾದ ಸುದಿತ್ತೋ ಸೇನ್ ಅವರಿಗೆ 'ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ' ಹಾಗೂ 'ಅತ್ಯುತ್ತಮ ಛಾಯಾಗ್ರಹಣ' ಪ್ರಶಸ್ತಿ ನೀಡಿರುವುದನ್ನು ಕೇರಳದ ಸಿಎಂ ಪಿಣರಾಯಿ ವಿಜಯನ್ ಖಂಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, 'ಕೋಮುವಾದ ಪ್ರಚೋದಿಸಲು ಹಾಗೂ ಕೇರಳಕ್ಕೆ ಅವಹೇಳನ ಮಾಡಲು ಯತ್ನಿಸಿದ್ದ ಸಿನಿಮಾವನ್ನ ಪ್ರಶಸ್ತಿಗೆ ಆಯ್ಕೆ ಮಾಡುವ ಮೂಲಕ, ರಾಷ್ಟ್ರೀಯ ಸಮಗ್ರತೆ ಮತ್ತು ಕೋಮು ಸಾಮರಸ್ಯಕ್ಕೆ ಹೆಸರಾದ ಭಾರತೀಯ ಸಿನಿಮಾ ರಂಗವನ್ನ ತೀರ್ಪುಗಾರರು ಅವಮಾನಿಸಿದ್ದಾರೆ' ಎಂದು ಅಸಮಾಧಾನ ಹೊರಹಾಕಿದ್ದಾರೆ.

2023ರಲ್ಲಿ 'ದಿ ಕೇರಳ ಸ್ಟೋರಿ' ಚಿತ್ರ ತೆರೆಕಂಡಿತ್ತು. ರಾಜ್ಯದ ಸುಮಾರು 32,000 ಮಹಿಳೆಯರನ್ನು ಮತಾಂತರಗೊಳಿಸಿ, ಭಯೋತ್ಪಾದನಾ ಸಂಘಟನೆಗೆ ಸೇರಿಸಲಾಗಿದೆ ಎಂದು ಚಿತ್ರದ ಟೀಸರ್‌ನಲ್ಲಿ ಉಲ್ಲೇಖಿಸಲಾಗಿತ್ತು. ಈ ಚಿತ್ರದ ಬೆನ್ನಲ್ಲೇ ಕೇರಳದಲ್ಲಿ ಭಾರೀ ಪ್ರತಿಭಟನೆ ನಡೆದಿದ್ದು, ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026