ರೈತರಿಗೆ ಮುಖ್ಯ ಮಾಹಿತಿ ಫೆ.17 ರಿಂದ ಸಮಗ್ರ ಕೃಷಿ ಪದ್ಧತಿ ಕುರಿತು ತರಬೇತಿ
ಚಿತ್ರದುರ್ಗ:ಹಿರಿಯೂರಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಫೆ.17 ರಿಂದ 19 ರವರೆಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಮಗ್ರ ಕೃಷಿ ಪದ್ಧತಿ ಕುರಿತು ಪರಿಶಿಷ್ಟ ಜಾತಿ (ಎಸ್.ಸಿ) ರೈತರಿಗೆ ಮೂರು ದಿನಗಳ ಉಚಿತ ವಸತಿ ಸಹಿತ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ತರಬೇತಿ ಕಾರ್ಯಗಾರದಲ್ಲಿ ರೈತರಿಗೆ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳು ಹಾಗೂ ಸಮಗ್ರ ಪೀಡೆ ನಿರ್ವಹಣೆ, ಜೇನು ಕೃಷಿ, ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಲಾಭದಾಯಕ ಸುಸ್ಥಿರ ಸಮಗ್ರ ಕೃಷಿ ಪದ್ಧತಿ ಕುರಿತು ಮಾಹಿತಿ ನೀಡಲಾಗುವುದು.
ಆದ ಪ್ರಯುಕ್ತ ಆಸಕ್ತ ಪರಿಶಿಷ್ಟ ಜಾತಿ ರೈತ ಬಾಂಧವರು ಮೊಬೈಲ್ ಸಂಖ್ಯೆ 8277931058 ಗೆ ಕರೆ ಮಾಡಿ ನೋಂದಾಯಿಸಿಕೊಂಡು ತಮ್ಮ ಆಧಾರ್ ಅಥವಾ ಎಫ್‍ಐಡಿಯೊಂದಿಗೆ ಈ ತರಬೇತಿಯಲ್ಲಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರಾದ ಆರ್.ರಜನಿಕಾಂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.