ಬೆಂಗಳೂರು:
ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸ್ಪೀಕರ್ ಯು.ಟಿ.ಖಾದರ್ ಅವರು ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಸಭಾಧ್ಯಕ್ಷರಾಗಿ ಕಾರ್ಯಸಲ್ಲಿಸುವಷ್ಟು ದಿನ ಸದನದ ಘನತೆ, ಗೌರವ ಎತ್ತಿಹಿಡಿದು ಶಾಸಕರ ಹಾಗೂ ರಾಜ್ಯದ ಜನರ ಮನಗೆಲ್ಲಿ ಎಂದು ಸಲಹೆ ನೀಡಿದರು. ಈ ಚಿಕ್ಕ ವಯಸ್ಸಿನಲ್ಲೇ ಸಭಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದು ಸುದೈವ. ಕರ್ನಾಟಕ ರಾಜ್ಯದ ಜನರ ಸಂಸ್ಕೃತಿ, ಆಚಾರ ವಿಚಾರದ ಬಗ್ಗೆ ನನಗೆ ಅಪಾರ ಗೌರವವಿದ್ದು ಶಾಸನ ಸಭೆಯ ನಡವಳಿಕೆಯ ಯಾವುದೇ ಮಾರ್ಗದರ್ಶನಕ್ಕಾಗಿ ನಾನು ನಿಮ್ಮೊಂದಿಗೆ ಇದ್ದೇನೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ರವರನ್ನು ಕೂಡ ಸ್ಪೀಕರ್ ಯು.ಟಿ.ಖಾದರ್ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.