Press ID & Credential Portal
Apply / Verify  ➔
LIVE TV LocalKarnatakaCrimeIndiaWorldFilmNationalLife StyleInternationalBusinessPoliticsSportsBusinessEducationTechnology
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Karnataka

ಖಾರಿಫ್ ಬರ ಪರಿಸ್ಥಿತಿ ಅಧ್ಯಯನ: ರಾಜ್ಯಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಭೇಟಿ  

​ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ಖಾರಿಫ್ ಬರದ ಪರಿಸ್ಥಿತಿಯನ್ನು ಪ್ರತ್ಯಕ್ಷವಾಗಿ ಪರಿಶೀಲಿಸಲು ಮತ್ತು ಅಧ್ಯಯನ ನಡೆಸಲು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಉನ್ನತ ಮಟ್ಟದ ಅಧಿಕಾರಿಗಳ ತಂಡವು (ಐಎಂಸಿಟಿ) ಅಕ್ಟೋಬರ್ 3 ರಿಂದ ಅಕ್ಟೋಬರ್ 6 ರವರೆಗೆ ನಾಲ್ಕು ದಿನಗಳ ಕಾಲ ಕರ್ನಾಟಕಕ್ಕೆ ಭೇಟಿ ನೀಡಲಿದೆ.  

​ಅಧಿಕಾರಿಗಳ ಈ ತಂಡವನ್ನು ಒಟ್ಟು ಮೂರು ವಿಭಾಗಗಳಾಗಿ, ತಂಡ 1, ತಂಡ 2 ಮತ್ತು ತಂಡ 3 ಎಂದು ವಿಂಗಡಿಸಲಾಗಿದ್ದು,  ಈ ತಂಡಗಳು ಬರ ಪೀಡಿತ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪರಿಸ್ಥಿತಿಯನ್ನು ಅವಲೋಕಿಸಲಿವೆ.  

​ತಂಡ 1 (ಟೀಮ್ 1):

ಜಂಟಿ ಕಾರ್ಯದರ್ಶಿ ಅಜೀತ್ ಕುಮಾರ್ ಸಾಹು ಅವರ ನೇತೃತ್ವದ ಈ ತಂಡದಲ್ಲಿ ಉಪ ನಿರ್ದೇಶಕ ಚೇತ್ ರಾಮ್ ಮೀನಾ (ತಂಡದ ಸಂಯೋಜಕರು), ವಿಶೇಷ ಅಧಿಕಾರಿ (ಐ ಎಸ್ ಡಿ )  ಕರ್ನಲ್ ಅಮರೀಂದರ್ ಸಿಂಗ್ ಮತ್ತು ನಿರ್ದೇಶಕ ಡಾ. ಜೆ. ಹರ್ಷ ಸದಸ್ಯರಾಗಿದ್ದಾರೆ. ಈ ತಂಡವು ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪರಿಶೀಲನೆ ನಡೆಸಲಿದೆ.  

ತಂಡ 2 (ಟೀಮ್ 2):

ಸಹಾಯಕ ಆಯುಕ್ತರಾದ ಡಾ. ಸುದಮ್ ಬಾಗ್ ಅವರ ನೇತೃತ್ವದ ತಂಡದಲ್ಲಿ ಸಹಾಯಕ ಸಲಹೆಗಾರರಾದ ಆಶಿಶ್ ಪಾಂಡೆ, ಅಧೀನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಮತ್ತು ಉಪ ನಿರ್ದೇಶಕ ಕರಣ್ ಚೌಧರಿ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ತಂಡವು ಹಾಸನ, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಿದೆ.  

​ತಂಡ 3 (ಟೀಮ್ 3):

ನಿರ್ದೇಶಕ ಡಾ. ಮನ್ ಸಿಂಗ್ ಅವರ ನೇತೃತ್ವದ ಮೂರನೇ ತಂಡದಲ್ಲಿ ಅಧೀನ ಕಾರ್ಯದರ್ಶಿ ಪಾರ್ಥ ಪಾಲ್ ಹಾಗೂ ಅಧೀನ ಕಾರ್ಯದರ್ಶಿ ರಾಕೇಶ್ ಕುಮಾರ್ ಸದಸ್ಯರಾಗಿದ್ದಾರೆ. ಈ ತಂಡವು ಯಾದಗಿರಿ, ರಾಯಚೂರು, ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಖಾರಿಫ್ ಬರದ ತೀವ್ರತೆ ಮತ್ತು ಹಾನಿಯ ಕುರಿತು ಪರಿಶೀಲಿಸಲಿದೆ.  

​ಈ ಭೇಟಿಯ ನಂತರ ಕೇಂದ್ರ ತಂಡವು ರಾಜ್ಯದ ಬೆಳೆ ಹಾನಿ ಮತ್ತು ರೈತರ ಸಂಕಷ್ಟದ ಕುರಿತು ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯೇಂದ್ರ ಸಾರಥ್ಯದಲ್ಲೇ ಮುಂದಿನ ವಿಧಾನಸಭಾ ಚುನಾವಣೆ: ಬಿಜೆಪಿ ಹೈಕಮಾಂಡ್ ಮೆಗಾ ಪ್ಲಾನ್ಮದ್ದೂರಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ; ಗ್ರಾಮಸ್ಥರು ನಿಟ್ಟುಸಿರುಸಾಗರ ತಾಲ್ಲೂಕು ಅಂತಿಮ ಮತದಾರರ ಪಟ್ಟಿ ಪ್ರಕಟ: 1.94 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆಮಲ್ಲಿಕಾರ್ಜುನ ಖರ್ಗೆ ವಿರುದ್ಧದ ವೈಯಕ್ತಿಕ ದಾಳಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ MLC ರಮೇಶ್ ಬಾಬು ಆಕ್ಷೇಪಮಹರ್ಷಿ ವಾಲ್ಮೀಕಿ ಆದರ್ಶಗಳು ಇಂದಿನ ಯಾಂತ್ರಿಕ ಜಗತ್ತಿಗೆ ಪ್ರಸ್ತುತ: ಮದ್ದೂರು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್10 ಎಕರೆಯಲ್ಲಿ ಕೆಎಆರ್ ಫ್ಯೂಚರ್ ಅಕಾಡೆಮಿ ಕ್ಯಾಂಪಸ್: ನೇಗಿಲಯೋಗಿ ರೈತ ಮಾರಾಟ ಕೇಂದ್ರದ ಸ್ಥಾಪಕ ಯೋಗೇಶ್ ಅಪ್ಪಾಜಿಸ್ವ-ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನBREAKING : ಕಲ್ಬುರ್ಗಿಯಲ್ಲಿ ತಡರಾತ್ರಿ ದರೋಡೆಗೆ ಬಂದಿದ್ದ ಗ್ಯಾಂಗ್ ನಿಂದ ಫೈರಿಂಗ್ : ಇಬ್ಬರು ಅರೆಸ್ಟ್!ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಗಣಿ ಗುತ್ತಿಗೆ ಪ್ರಕರಣದ PIL ವಜಾಗೊಳಿಸಿದ ಹೈಕೋರ್ಟ್SHOCKING : ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!