LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿಯಿಂದ ಖುಷಿ: ಕೋಡಬಾಳ ಚನ್ನಬಸಪ್ಪ

ಹೂವಿನಹಡಗಲಿ:
ಕೃಷಿಯಲ್ಲಿ ಖುಷಿಯಿದೆ. ಮಾನವನ ಮೂಲ ಕಸುಬು ಕೃಷಿ. ಅನ್ನ ದೇವರ ಮುಂದೆ ಇನ್ನು ದೇವರು ಉಂಟೆ, ಅನ್ನವಿರುವ ತನಕ ಪ್ರಾಣವು, ಜಗದೊಳಗನ್ನವೇ ದೈವ ಎನ್ನುವ ಸರ್ವಜ್ಞನ ವಚನದಂತೆ ಜೀವಿಗಳ ಬದುಕಿಗೆ ಆಧಾರವಾದ, ಅನ್ನವನ್ನು ಉತ್ಪಾದಿಸುವ ಕೃಷಿ ವೃತ್ತಿಯಲ್ಲಿ ಸಾರ್ಥಕತೆ ಇದೆ ಎಂದು ಪ್ರಗತಿಪರ ಕೃಷಿಕ,ಚಿಂತಕ ಕೋಡಬಾಳ ಚನ್ನಬಸಪ್ಪ ಅಭಿಪ್ರಾಯ ಪಟ್ಟರು.ಅವರು ಹೊಳಲು ಗ್ರಾಮದ ಡಿವೈನ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ, ಹಿರೇಹಡಗಲಿ ಹೋಬಳಿ ಘಟಕ ಆಯೋಜಿಸಿದ್ದ ಬೂದನೂರು ಚಂದ್ರೇಗೌಡ ಸ್ಮಾರಕದತ್ತಿ, ಪೂಜಾರ ಬಸವರಾಜಪ್ಪ ದೇವೇಂದ್ರಪ್ಪ ದತ್ತಿ,ಗಡ್ಡಿ ಸಾವಿತ್ರಮ್ಮ ಗಡ್ಡಿ ಬಸಪ್ಪ ಸ್ಮರಣಾರ್ಥ ದತ್ತಿ, ಭ್ರಮರಿಬಾಯಿ ಪಾರಸ್ ಮಲ್ ಮೆಹತಾ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೃಷಿ ವಿಜ್ಞಾನಿ, ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯೇ ಮೇಲು ವಿಷಯ ಕುರಿತು ಮಾತನಾಡಿದರು. ಭಾರತವು ಹೆಚ್ಚು ಕೃಷಿ ಭೂಮಿ ಹೊಂದಿದ ವಿಶ್ವದ ಎರಡನೇ ದೇಶವಾಗಿದೆ. ದೇಶದ ಶೇ. 50ಕ್ಕಿಂತ ಹೆಚ್ಚು ಜನ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಕೃಷಿಯು ದೇಶದ ಜಿಡಿಪಿಗೆ ಶೇ.17 ರಿಂದ 18 ಕೊಡುಗೆ ನೀಡುತ್ತಿದೆ. ಮೆಕ್ಕೆಜೋಳ ದಿಂದ ಇಥೇನಾಲ್ ತಯಾರಿಕೆಗೆ ಮುಂದಾಗಿರುವುದು ಬೆಳೆಗಾರರಿಗೆ ಆಸರೆಯಾಗಿದೆ. ಕೃಷಿ ತಜ್ಞರು,ವಿಜ್ಞಾನಿಗಳು ತಮ್ಮ ಸಂಶೋಧನೆಯಿಂದ ರೈತರ ಬದುಕು ಹಸನಾಗಲು ಶ್ರಮಿಸುತ್ತಿದ್ದಾರೆ ಎಂದರು. ಪ್ರಾರಂಭದಲ್ಲಿ ದತ್ತಿದಾನಿ, ನಿವೃತ್ತ ಕೃಷಿ ಅಧಿಕಾರಿಗಳಾದ ಟಿ.ಕೆ. ಬ್ಯಾಡಗಿಯವರು ಕಾರ್ಯಕ್ರಮ ಉದ್ಘಾಟಿಸಿ ಹವಾಮಾನ ವೈಪರಿತ್ಯ ದಿಂದ ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ ಎಂದರು. ಕಸಾಪ ತಾಲೂಕು ಘಟಕದ ಅಧ್ಯಕ್ಷ ಟಿ.ವೀರೇಂದ್ರ ಪಾಟೀಲ್ ದತ್ತಿ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲೆಯ ಆಡಳಿತಾಧಿಕಾರಿಗಳಾದ ಎಸ್ .ಪ್ರವೀಣ್ ಮಾತೃಭಾಷೆಯ ಮಹತ್ವದ ಕುರಿತು ತಿಳಿಸಿ ಮುಂದಿನ ದಿನಗಳಲ್ಲಿ ವಿಜೃಂಭಣೆಯಿಂದ ಕನ್ನಡ ಕಾರ್ಯಕ್ರಮ ಸಂಘಟಿಸುವುದಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಕವನ ವಾಚನ ಸ್ಪರ್ಧೆಯಲ್ಲಿ ವಿಜೇತರಾದ ದಿವ್ಯಾ ಪುರಾಣಿಕ ಮಠ,ಮಮತಾ ನಗಾವತ್,ಜಿ.ಬಿಂದು ಇವರಿಗೆ ಪುಸ್ತಕ ಬಹುಮಾನ ನೀಡಲಾಯಿತು. ಉಪನ್ಯಾಸ ನೀಡಿದ ಚನ್ನಬಸಪ್ಪ ಕೋಡಬಾಳ ಇವರನ್ನು ಕಸಾಪ ವತಿಯಿಂದ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರೇಹಡಗಲಿ ಹೋಬಳಿ ಘಟಕದ ಅಧ್ಯಕ್ಷ ಜಿ.ಎಸ್. ಸತೀಶ ವಹಿಸಿದ್ದರು. ಪ್ರಾರಂಭದಲ್ಲಿ ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಮುಖ್ಯ ಗುರುಗಳಾದ ಬಸಯ್ಯ ಹಿರೇಮಠ ಸ್ವಾಗತಿಸಿದರು. ಶಿಕ್ಷಕಿ ಪಿ‌.ಸಲೀಮಾ ವಂದಿಸಿದರು. ವಿದ್ಯಾರ್ಥಿ ಎಲ್.ಯಶವಂತ್ ಕಾರ್ಯಕ್ರಮ ನಿರ್ವಹಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು