ಬೆಂಗಳೂರು :
ಕನ್ನಡದ ಖ್ಯಾತನಾಮ ಚಲನಚಿತ್ರ ನಟ ಕಿಚ್ಚ ಸುದೀಪ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿಯ ಕೆಲ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ನಡೆಸುವುದಾಗಿ ಪ್ರಕಟಿಸಿದ್ದರು. ಇದರ ಬೆನ್ನಿಗೆ ಅವರು ಇದೀಗ ಬಿಜೆಪಿ ಪರ ಕೆಲ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ಆರಂಭಿಸಲಿದ್ದಾರೆ. ಏಪ್ರಿಲ್ 14 ರಿಂದ ಅವರ ಚುನಾವಣಾ ಪ್ರಚಾರ ಆರಂಭವಾಗಲಿದೆ. ಅಂದು ಸೌರಮಾನ ಯುಗಾದಿ ಹಾಗೂ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸ್ವಕ್ಷೇತ್ರವಾಗಿರುವ ಶಿಗ್ಗಾಂವ, ಹಾವೇರಿ ಸೇರಿದಂತೆ ಕೆಲ ಕ್ಷೇತ್ರಗಳಲ್ಲಿ ಕಿಚ್ಚ ಸುದೀಪ್ ಪ್ರಚಾರ ಕೈಗೊಂಡು ಚುನಾವಣೆ ಕಾವೇರಿಸಲಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.