ಕಾಗವಾಡ ಪಟ್ಟಣದ ಚೆನ್ನಮ್ಮ ವೃತ್ತದಲ್ಲಿ ತಾಲೂಕಾಡಳಿತÀ ಮತ್ತು ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಶುಕ್ರವಾರ ದಿನಾಂಕ 23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸಲಾಯಿತು. ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ ರಾಣಿ ಚೆನ್ನಮ್ಮ ಅವರ ಧೈರ್ಯ, ಶೌರ್ಯ ಹಾಗೂ ದೇಶಪ್ರೇಮವನ್ನು ಸ್ಮರಿಸಲಾಯಿತು. ಕಿತ್ತೂರು ರಾಣಿ ಚೆನ್ನಮ್ಮ ಅವರ ಜೀವನ ಮತ್ತು ಹೋರಾಟ ಇಂದಿನ ಯುವ ಜನತೆಗೆ ಪ್ರೇರಣೆಯಾಗಿದ್ದು, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂಬ ಸಂದೇಶವನ್ನು ಈ ಜಯಂತಿ ಕಾರ್ಯಕ್ರಮ ಸಾರಿತು. ಈ ಸಂದರ್ಭದಲ್ಲಿ ಗ್ರೇಡಟೂ ತಹಸೀಲ್ದಾರ್ ರಶ್ಮಿ ಜಕಾತಿ, ರವೀಂದ್ರ ಗೋರ್ಪಡೆ, ಎಂಆರ್ ಪಾಟೀಲ್, ಪಟ್ಟಣ ಪಂಚಾಯಿತಿ ಮುಖ್ಯಧಿಕಾರಿ ಪ್ರಸನ್ನ ಕಲ್ಯಾಣಶೆಟ್ಟಿ, ಸಚೀನ್ ಜಾಧವ್, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಸಿದ್ದು ಒಡಿಯರ್, ಗಣೇಶ್ ಕೊಳೆಕರ್, ಫಾರೂಕ್ ಅಲಾಸ್ಕರ, ಜಯ ಕರ್ನಾಟಕ ವೇದಿಕೆಯ ಅಧ್ಯಕ್ಷ ಬಸವರಾಜ ಮಗದುಮ್ಮ, ವಿನೋದ್ ಕಾಂಬಳೆ, ಕಿತ್ತೂರು ಕರ್ನಾಟಕ ವೇದಿಕೆಯ ಶಿವಾನಂದ ನವಿನಾಳೆ, ರವಿ ಪಾಟೀಲ ಸೇರಿದಂತೆ ಮುಖಂಡರು, ಪದಾಧಿಕಾರಿಗಳು ಹಾಗೂ ತಾಲೂಕು ಆಡಳಿತದ ಪ್ರತಿನಿಧಿಗಳು ಉಪಸ್ಥಿತರಿದ್ದರು.