ಬೆಳಗಾವಿ: ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಬಲವರ್ಧನೆಯೊಂದಿಗೆ ಸಾಮಾಜಿಕ ಅರಿವು ಮೂಡಿಸುವಲ್ಲಿ ಜ್ಞಾನವಿಕಾಸದಡಿ ಆಯೋಜಿಸುವ ಕಾರ್ಯಾಗಾರಗಳು ಹಾಗೂ ವಿಚಾರಗೋಷ್ಠಿಗಳು ಸಹಕಾರಿಯಾಗಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ದಯಾಶೀಲ ಹೇಳಿದರು.
ಪಿರನವಾಡಿಯ ಲಕ್ಷ್ಮೀ ಮಂಗಳ ಕಾರ್ಯಾಲಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಿ.ಸಿ. ಟ್ರಸ್ಟ್, ಬೆಳಗಾವಿ ಹಾಗೂ ತಾಲೂಕು ಜ್ಞಾನವಿಕಾಸ ಕೇಂದ್ರಗಳ ಸಹಯೋಗದಲ್ಲಿ ಆಯೋಜಿಸಿದ್ದ ಮಹಿಳಾ ಸಮಾವೇಶ ಮತ್ತು ವಿಚಾರಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರಿಗೆ ಶೈಕ್ಷಣಿಕ ಜ್ಞಾನದ ಜತೆಗೆ ಸಾಮಾಜಿಕ ಅರಿವು ಮೂಡಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ. ಮಹಿಳೆಯರು ಸಾಮಾಜಿಕ ಹಾಗೂ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸಿಕೊಂಡು ಸಂಘ-ಸಂಸ್ಥೆಗಳ ಪ್ರಗತಿಗೆ ಸಹಕಾರ ನೀಡಬೇಕು ಎಂದರು.
ಬೆಳಗಾವಿ ನಗರದ ಅಕ್ಕಪಡೆ ಪೊಲೀಸ್ ಅಧಿಕಾರಿ ರೇಣುಕಾ ಮಾತನಾಡಿ, ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಮಕ್ಕಳ ಮೇಲಿನ ಲೈಂಗಿಕ ಕಿರುಕುಳದಂತಹ ಘಟನೆಗಳು ಸಂಭವಿಸಿದ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಿಂದ ದೊರೆಯುವ ನೆರವು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಮಹಿಳಾ ಕಲ್ಯಾಣ ಸಂಸ್ಥೆಯ ಯೋಜನಾ ನಿರ್ದೇಶಕಿ ಸುರೇಖಾ ಡಿ. ಪಾಟೀಲ, ಮಾತಾಜಿ ಬಿ.ಕೆ. ಅಕ್ಕಮ್ಮ ಉಪಸ್ಥಿತರಿದ್ದರು. ಜಯಶ್ರೀ ರಾಜೇಂದ್ರ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ನಾಯ್ಕ್, ಪ್ರಾದೇಶಿಕ ಕಚೇರಿ ಜ್ಞಾನವಿಕಾಸ ಯೋಜನಾಧಿಕಾರಿ ಸುಧಾ ಭಾಸ್ಕರ್, ತಾಲೂಕು ಯೋಜನಾಧಿಕಾರಿ ಪಾರ್ವತಿ ಸೇರಿದಂತೆ ರಾಜು ಮಿರ್ಜನ್, ರಾಜು ಬಾಬು ಬೆಲ್ಲದ್, ದೀಪಿಕಾ ಪೂಜಾರಿ, ಶೈನಾಜ್, ವಿಶಾಲಾಕ್ಷಿ, ಕಮಲವ್ವ, ಸಂಜು ಕಳ್ಳಿಮನೆ, ಮಹಾಂತೇಶ, ಫಕ್ಕಿರೇಶ, ವಿನೋದಕುಮಾರ್ ಹಾಗೂ ಜ್ಞಾನವಿಕಾಸ ಕೇಂದ್ರಗಳ ಸೇವಾ ಪ್ರತಿನಿಧಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಮಾರುತಿ ಪಾಟೀಲ ನಿರೂಪಿಸಿದರು. ಸಹದೇವ ಭಜಂತ್ರಿ ವಂದಿಸಿದರು.