Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬಂಡಾಯ ಅಭ್ಯರ್ಥಿ ಮನವೊಲಿಸುವ ಪ್ರಯತ್ನ ನಡೆಯಲಿದೆ: ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ

 

ಬೆಳಗಾವಿ :
"ಟಿಕೆಟ್‌ ನೀರಿಕ್ಷೆಯಲ್ಲಿದ್ದ ಅಭ್ಯರ್ಥಿಗಳು ಕೈ ತಪ್ಪಿದರಿಂದ ನಿರಾಸೆಯಾಗುವುದು ಸಹಜ, ಅವರನ್ನು ಮನವೊಲಿಸುವ ಪ್ರಯತ್ನಗಳು ನಡೆಯಲಿದೆ " ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಕಾಂಗ್ರೆಸ್‌ ನಿಂದ ಗೋಕಾಕ ಕ್ಷೇತ್ರದಿಂದ ಸ್ಪರ್ಧಿಸಲು ಮಹಾಂತೇಶ ಕಡಾಡಿ ಅವರನ್ನು ಕಣಕ್ಕೆ ಇಳಿಸಲಾಗಿದೆ. ಹೈಕಮಾಂಡ್ ತೀರ್ಮಾನ ಅಂತಿಮ ತೀರ್ಮಾನ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.

ಯಾವ ಕ್ಷೇತ್ರದಕ್ಕೆ ಯಾವ ಅಭ್ಯರ್ಥಿ ಸೂಕ್ತ ಎಂದು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಾವು ಕೇಳಿದ ವ್ಯಕ್ತಿಗೆ ಟಿಕೆಟ್ ಸಿಗಬೇಕೆಂಬವುದು ನಿರ್ಧಾರ ಇಲ್ಲ ಎಂದ ಅವರು, ಬಂಡಾಯದ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುಖಂಡರನ್ನು ಮನವೊಲಿಸುವ ಪ್ರಯತ್ನಗಳು ನಡೆದಿವೆ. ಟಿಕೆಟ್‌ ನೀಡಿದ ಅಭ್ಯರ್ಥಿಯ ಗೆಲುವಿಗೆ ಸಹಕರಿಸಬೇಕೆಂದು ಸೂಚನೆ ನೀಡಲಾಗಿದೆ. ಆಕಾಂಕ್ಷಿಗಳಪಟ್ಟಿ ಬಳಹ ಇದೆ ಆತ್ಮೀಯರಿಗೆ ಸಿಗಬೇಕೆಂಬುವ ನಿರ್ಧಾರ ನಮ್ಮ ಕೈಯಲಿಲ್ಲ ಅದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಹೇಳಿದರು.

ಜಿಲ್ಲಾಧ್ಯಂತ ಬಂಡಾಯ ಇಲ್ಲ, ಕೆಲವೊಂದು ಕ್ಷೇತ್ರದಲ್ಲಿ ಇದೆ. ಎಲ್ಲವನ್ನು ಸರಿ ಮಾಡಲಾಗುವುದು. ಎರಡನೇಯ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶೀಘ್ರವೇ ಮೂರನೇಯ ಪಟ್ಟಿ ಪ್ರಕಟ ಮಾಡಲಾಗುವುದು.
ನಾಲ್ಕನೆಯ ಪಟ್ಟಿ ಆದರೂ ಆಗಬಹುದು. ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲ ಇಲ್ಲ.. ಅಳೆದು ತೂಗಿ ಪ್ರಭಾವಿ ಅಭ್ಯರ್ಥಿಯನ್ನು ಅಖಾಡಕ್ಕೆ ಇಳಿಸುತ್ತಾರೆ ಎಂದ ಅವರು, ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಸ್ಟಾರ್‌ ನೇ ಎಂದರು.

ಮೋದಿ ಮೇಲಿಂದ ಮೇಲೆ ರಾಜ್ಯಕ್ಕೆ ಬರುತ್ತಿದ್ದಾರೆ ಇದರಿಂದ ನಿಮ್ಮ ಪಕ್ಷಕ್ಕೆ ಹಿನ್ನಡೆಯಾಗಬಹುದಾ ಎಂದ ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಬಂದರೆ ಬರಲ್ಲಿ, ಅವರ ಪಕ್ಷದ ಪ್ರಚಾರಕ್ಕೆ ಬರುತ್ತಾರೆ. ಕಾಂಗ್ರೆಸ್‌ ನಾಯಕರು ತಮ್ಮ ಕ್ಷೇತ್ರದಲ್ಲಿ ಕೆಲಸಗಳ ಆಧಾರದ ಮೇಲೆ ಗೆಲುವು ಸಾಧಿಸುತ್ತಾರೆ. ಮೋದಿ ಆಗಮನದಿಂದ ರಾಜ್ಯದಲ್ಲಿ ಯಾವುದೇ ರೀತಿ ಬದಲಾವಣೆ ಆಗಲು ಸಾಧ್ಯವಿಲ್ಲ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ