Press ID & Credential Portal
Apply / Verify  ➔
LIVE TV LocalKarnatakaCrimeIndiaWorldFilmNationalLife StyleInternationalBusinessPoliticsSportsBusinessEducationTechnology
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Karnataka

BREAKING: ಕೆಪಿಎಸ್‌ಸಿ ನೇಮಕಾತಿ ಅಕ್ರಮ: ಕಿಂಗ್‌ಪಿನ್ ಬಸವರಾಜ ಕನ್ನಾಳೆಗೆ ಷರತ್ತುಬದ್ಧ ಮಧ್ಯಂತರ ಜಾಮೀನು

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಕನ್ನಾಳೆಗೆ ಹೈಕೋರ್ಟ್ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನವಜಾತ ಪುತ್ರಿಯ 12ನೇ ದಿನದ ನಾಮಕರಣ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕನ್ನಾಳೆಗೆ ಅಕ್ಟೋಬರ್ 15 ರಿಂದ 20 ರವರೆಗೆ ಈ ವಿನಾಯಿತಿ ನೀಡಲಾಗಿದೆ.

ಮಾನವೀಯತೆಯ ಆಧಾರದಲ್ಲಿ ಅರ್ಜಿ:

ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದ ಬಸವರಾಜ ಕನ್ನಾಳೆ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು. ವಿಚಾರಣೆ ವೇಳೆ ಕನ್ನಾಳೆ ಪರ ವಾದ ಮಂಡಿಸಿದ ಹಿರಿಯ ವಕೀಲ ಅರುಣ್ ಶ್ಯಾಮ್, "ಆರೋಪಿಯ ಪತ್ನಿಗೆ ಇತ್ತೀಚೆಗಷ್ಟೇ ಹೆಣ್ಣು ಮಗು ಜನಿಸಿದೆ. ಮಗುವಿನ 12ನೇ ದಿನದ ನಾಮಕರಣ ಶಾಸ್ತ್ರ ನಡೆಯಬೇಕಿದ್ದು, ತಂದೆಯಾಗಿ ಕನ್ನಾಳೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಅಗತ್ಯವಾಗಿದೆ. ಹೀಗಾಗಿ ಮಾನವೀಯತೆಯ ಆಧಾರದಲ್ಲಿ ಕೆಲ ದಿನಗಳ ಕಾಲ ಮಧ್ಯಂತರ ಜಾಮೀನು ನೀಡಬೇಕು" ಎಂದು ಕೋರಿದರು.

ಸರ್ಕಾರದ ಪರ ಪ್ರಬಲ ಆಕ್ಷೇಪ:

ಇದಕ್ಕೆ ಸರ್ಕಾರದ ಪರವಾಗಿ ಹಾಜರಿದ್ದ ವಿಶೇಷ ಸರ್ಕಾರಿ ಅಭಿಯೋಜಕ (SPP) ಬಿ.ಎನ್. ಜಗದೀಶ್ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದರು. "ಆರೋಪಿ ಕನ್ನಾಳೆ ಕೆಪಿಎಸ್‌ಸಿ ನೇಮಕಾತಿಯಲ್ಲಿ ಹಲವು ಅಭ್ಯರ್ಥಿಗಳಿಂದ ಕೋಟ್ಯಂತರ ರೂಪಾಯಿ ಹಣ ಸಂಗ್ರಹಿಸಿರುವ ಗಂಭೀರ ಆರೋಪ ಎದುರಿಸುತ್ತಿದ್ದಾನೆ. ಒಂದು ವೇಳೆ ಜಾಮೀನು ನೀಡುವುದಾದರೆ, ಆತನನ್ನು ಸಿಐಡಿ (CID) ಕಸ್ಟಡಿಯಲ್ಲಿಯೇ ಆತನ ತವರು ಜಿಲ್ಲೆಯಾದ ಬೀದರ್‌ಗೆ ಕರೆದೊಯ್ಯಲು ಕಠಿಣ ಷರತ್ತು ವಿಧಿಸಬೇಕು" ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಪೊಲೀಸ್ ಭದ್ರತೆಯಲ್ಲಿ ತೆರಳಲು ಆದೇಶ:

ಉಭಯ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ, ಮಾನವೀಯ ನೆಲೆಗಟ್ಟಿನಲ್ಲಿ ಅಕ್ಟೋಬರ್ 15 ರಿಂದ 20 ರವರೆಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿತು. ಆರೋಪಿಯನ್ನು ಪೊಲೀಸರೇ ಸೂಕ್ತ ಎಸ್ಕೋರ್ಟ್ (ಪೊಲೀಸ್ ಕಾವಲು) ವ್ಯವಸ್ಥೆಯೊಂದಿಗೆ ಬೆಂಗಳೂರಿನಿಂದ ಬೀದರ್‌ಗೆ ಕರೆದೊಯ್ದು, ನಿಗದಿತ ಅವಧಿ ಮುಗಿದ ಬಳಿಕ ಸುರಕ್ಷಿತವಾಗಿ ವಾಪಸ್ ಕರೆತರಬೇಕು ಎಂದು ಆದೇಶದಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯೇಂದ್ರ ಸಾರಥ್ಯದಲ್ಲೇ ಮುಂದಿನ ವಿಧಾನಸಭಾ ಚುನಾವಣೆ: ಬಿಜೆಪಿ ಹೈಕಮಾಂಡ್ ಮೆಗಾ ಪ್ಲಾನ್ಮದ್ದೂರಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ; ಗ್ರಾಮಸ್ಥರು ನಿಟ್ಟುಸಿರುಸಾಗರ ತಾಲ್ಲೂಕು ಅಂತಿಮ ಮತದಾರರ ಪಟ್ಟಿ ಪ್ರಕಟ: 1.94 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆಮಲ್ಲಿಕಾರ್ಜುನ ಖರ್ಗೆ ವಿರುದ್ಧದ ವೈಯಕ್ತಿಕ ದಾಳಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ MLC ರಮೇಶ್ ಬಾಬು ಆಕ್ಷೇಪಮಹರ್ಷಿ ವಾಲ್ಮೀಕಿ ಆದರ್ಶಗಳು ಇಂದಿನ ಯಾಂತ್ರಿಕ ಜಗತ್ತಿಗೆ ಪ್ರಸ್ತುತ: ಮದ್ದೂರು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್10 ಎಕರೆಯಲ್ಲಿ ಕೆಎಆರ್ ಫ್ಯೂಚರ್ ಅಕಾಡೆಮಿ ಕ್ಯಾಂಪಸ್: ನೇಗಿಲಯೋಗಿ ರೈತ ಮಾರಾಟ ಕೇಂದ್ರದ ಸ್ಥಾಪಕ ಯೋಗೇಶ್ ಅಪ್ಪಾಜಿಸ್ವ-ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನBREAKING : ಕಲ್ಬುರ್ಗಿಯಲ್ಲಿ ತಡರಾತ್ರಿ ದರೋಡೆಗೆ ಬಂದಿದ್ದ ಗ್ಯಾಂಗ್ ನಿಂದ ಫೈರಿಂಗ್ : ಇಬ್ಬರು ಅರೆಸ್ಟ್!ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಗಣಿ ಗುತ್ತಿಗೆ ಪ್ರಕರಣದ PIL ವಜಾಗೊಳಿಸಿದ ಹೈಕೋರ್ಟ್SHOCKING : ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!