LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

KPTCL, Escom ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ 

ಬೆಂಗಳೂರು: ಇಂಧನ ಇಲಾಖೆಯಲ್ಲಿ ಪ್ರಾಣ ಒತ್ತೆಯಿಟ್ಟು ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಸೇವಾ ಭದ್ರತೆಗೆ ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲು ರಾಜ್ಯದಲ್ಲಿರುವ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸ್ಥಗಿತಗೊಳಿಸಿ ಹೊರ ಗುತ್ತಿಗೆ ನೌಕರರು ತಮ್ಮ ಕುಟುಂಬದೊಂದಿಗೆ ಜನವರಿ 28ರಂದು ಬೃಹತ್ ಪ್ರತಿಭಟನೆ ಮಾಡುವುದಾಗಿ ಕರ್ನಾಟಕ ರಾಜ್ಯ KPTCL ಮತ್ತು ಎಸ್ಕಮ್ ಹೊರ ಗುತ್ತಿಗೆ ನೌಕರರ ಹಿತರಕ್ಷಣಾ ವೇದಿಕೆ ಗೌರವ ಅಧ್ಯಕ್ಷ ಮೇಲುಕೋಟೆ ಬೆಟ್ಟಸ್ವಾಮಿ ಗೌಡ್ರು ತಿಳಿಸಿದರು.

ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ KPTCL ಮತ್ತು ಎಸ್ಕಮ್ ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ನೌಕರರೂ ಕೆಲವೊಂದು ಸರ್ಕಾರಕ್ಕೆ ಬೇಡಿಕೆಗಳನ್ನು ಇಟ್ಟಿದ್ದಾರೆ ಅದರಲ್ಲಿ

1). ಹೊರಗುತ್ತಿಗೆ ನೌಕರರನ್ನು ಒಳಗುತ್ತಿಗೆ ಮಾಡಬೇಕು


2) ಕೆಲಸದಿಂದ ತೆಗೆದು ಹಾಕಿರುವ ನೌಕರರನ್ನು ಮರು ನೇಮಕ ಮಾಡಬೇಕು


ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ 2023 ಆಗಸ್ಟ್ ನಲ್ಲಿ ಸತತ 5 ದಿನಗಳ ಕಾಲ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಮಾಡಿ ಸರ್ಕಾರದ ಗಮನಸೆಳೆದು, ಇಂಧನ ಸಚಿವರಾದ ಕೆಜೆ ಜಾರ್ಜ್ ಗೆ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ನೀಡಿದ್ದೆವು. ನಮ್ಮ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಹಂತ ಹಂತವಾಗಿ ನಿಮ್ಮ ಬೇಡಿಕೆಗಳನ್ನು ಈಡೇರಿಸುತ್ತೇವೆಂದು ಹೇಳಿ ನಮ್ಮ ಹೋರಾಟವನ್ನು ಹಿಂಪಡೆಯಲು ಮನವೊಲಿಸಿದ್ದರು.

ಅದರಂತೆ ನಾವು ಒಂದು ವರ್ಷ ನಾಲ್ಕು ತಿಂಗಳು ಕಾಲ ಕಾಯ್ದರೂ ನಮ್ಮ ಯಾವುದೇ ಬೇಡಿಕೆಗಳನ್ನು ಈಡೇರಿಸದ ಸರ್ಕಾರ ಮತ್ತು ಇಂಧನ ಇಲಾಖೆಯ ವಿರುದ್ಧ ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿರುವ ಸ್ಟೇಷನ್ ಆಪರೇಟರ್ಸ್, ಸ್ಟೇಷನ್ ಹೆಲ್ಸರ್ಸ್, ಗ್ಯಾಂಗ್ ಮ್ಯಾನ್, ಮೀಟರ್ ರೀಡರ್ಸ್ ಮತ್ತು ಚಾಲಕರು ಹಾಗು ಮತ್ತಿತರರ ಹೊರ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡಿ ಎಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜನವರಿ 28 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಕರ್ನಾಟಕ ರಾಜ್ಯ ಕೆಪಿಟಿಸಿಎಲ್ ಮತ್ತು ಎಸ್ಕಾಂ ಗುತ್ತಿಗೆ ನೌಕರ ಹಿತರಕ್ಷಣಾ ವೇದಿಕೆ ಹಾಗು ಕೆಪಿಟಿಸಿಎಲ್ ಮತ್ತು ಎಸ್ಕಾಂ ಹೊರಗುತ್ತಿಗೆ ಚಾಲಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಪದಾಧಿಕಾರಿಗಳು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ಪ್ರತಿಭಟನೆಗೆ ಅವಕಾಶ ಮಾಡಿಕೊಡದೆ ಸರ್ಕಾರ ಮತ್ತು ಇಂದನ ಇಲಾಖೆ ನೌಕರರನ್ನು ಹೊರಗೆ ಹಾಕಿರುವರನ್ನು ಜನವರಿ 27ರ ಒಳಗಾಗಿ ಮರು ನೇಮಕ ಮಾಡಬೇಕು ಎಂದು ಸರ್ಕಾರಕ್ಕೆ ವಿನಂತಿ ಮಾಡಿಕೊಂಡರು.

ವೇದಿಕೆಯ ರಾಜ್ಯಾಧ್ಯಕ್ಷರಾದ ಲೀಲಾ ಸಾಗರ್ ಎಂ ಎಸ್ ಮಾತನಾಡಿ, ಹೊರಗುತ್ತಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈಗಾಗಲೇ ಉಗ್ರ ಪ್ರತಿಭಟನೆ ನಡೆಸಿದರು ಪ್ರಯೋಜನವಾಗಿಲ್ಲ, ಎಲ್ಲಾ ಜಿಲ್ಲೆಗಳಲ್ಲಿ ಹೊರಗುತ್ತಿಗೆ ನೌಕರರು ಧರಣಿಗೆ ಸಹಕಾರ ನೀಡಿದ್ದಾರೆ. ಎಲ್ಲರೂ ಸಹಾ ಫ್ರೀಡಂ ಪಾರ್ಕಿನಲ್ಲಿ ಸೇರಿ ಬೃಹತ್ ಧರಣಿ ನಡೆಸೊಡಗಿ ತೀರ್ಮಾನಿಸಲಾಗಿದೆ.

ಒಂದು ವೇಳೆ ಗಡುವು ನೀಡಿರುವ ಗುತ್ತಿಗೆ ನೌಕರರನ್ನು ಮರು ನೇಮಕ ಮಾಡಬೇಕು ಎಂದು ನೀಡಿರುವ ದಿನಾಂಕದ ಒಳಗೆ ಸರ್ಕಾರ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳದಿದ್ದರೆ ಪ್ರತಿಭಟನೆಗೆ ನಿಗದಿ ಮಾಡಿರುವ ದಿನಾಂಕದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ನೌಕರರು ರಾಜ್ಯದ ಎಲ್ಲಾ ವಿಧ್ಯುತ್ ಉಪ ಕೇಂದ್ರಗಳನ್ನು ಸ್ಥಗಿತಗೊಳಿಸಿ ತಮ್ಮ ಕುಟುಂಬ ಸಮೇತವಾಗಿ ಪ್ರತಿಭಟನೆಗೆ ಮುಂದಾಗುತ್ತೇವೆಂದು ಎಂದರು. ನಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸದೆ ಹೋದರೆ ರಾಜ್ಯದ ಜನತೆ ಕತ್ತಲಿನಲ್ಲಿ ಕೂರಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪತ್ರಿಕಾ ಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕೆಪಿಟಿಸಿಎಲ್ ಮತ್ತು ಎಸ್ಕಾಂ ಗುತ್ತಿಗೆ ನೌಕರರ ಹಿತರಕ್ಷಣಾ ವೇದಿಕೆ ರಾಜ್ಯ ಗೌರವಾಧ್ಯಕ್ಷರಾದ ಮೇಲುಕೋಟೆ ಬೆಟ್ಟಸ್ವಾಮಿ ಗೌಡ, ರಾಜ್ಯಾಧ್ಯಕ್ಷರಾದ ಲೀಲಾಸಾಗರ್ ಎಂ ಎಸ್, ರಾಜ್ಯ ಉಪಾಧ್ಯಕ್ಷರಾದ ಪರಶುರಾಮ್ ರಾಥೋಡ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಾಗಪ್ಪ ಭಾವಿಕಟ್ಟಿ, ರಾಘವೇಂದ್ರ ಉರಣಕ‌ರ್, ಮಂಜುನಾಥ್ ಹಾದಿಮುನಿ, ಜಿನೇಂದ್ರ ಕುಮಾರ್ ಬಿ ಪಿ, ಅರ್ಜುನ್ ಗಾಣಿಗೇರ, ಮನೋಹರ್ ಸಿ ಹೆಚ್, ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾದ ಮಲ್ಲೇಶ್ ಬಿ ಜಿ ಹಾಗು ರಾಜ್ಯ ಕಮಿಟಿ ಮತ್ತು ಜಿಲ್ಲಾ ಕಮಿಟಿ ಪದಾದಿಕಾರಿಗಳು ಉಪಸ್ಥಿತರಿದ್ದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಹಕಾರಿ ಧುರೀಣ ಕೆ.ಹೆಚ್ ಪಾಟೀಲರು ಅಪರೂಪದ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯಜನ್ಮಧಾತೆ ಕನ್ನಡ ಸಿನೆಮಾ ಮಾ.20 ರಂದು ಪ್ರದರ್ಶನಕನ್ನಡಿಗರ ಉದ್ಯೋಗಿಗಳನ್ನು ಕೇಂದ್ರ ಸರ್ಕಾರ ಅತಂತ್ರ ಸ್ಥಿತಿಗೆ ತಳ್ಳಿದೆ: ಸಿಎಂಹಲಸೂರು ಕೆರೆ ಹೂಳೆತ್ತುವುದರಿಂದ ನೀರು ಸಂಗ್ರಹ ಅಂತರ್ಜಲ ವೃದ್ಧಿ :ಚೋಳನ್ಏಕ ಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಒಟ್ಟು 78 ಲಕ್ಷ ರೂ ದಂಡಎಲ್ ಪಿಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-CM ಸಿದ್ದರಾಮಯ್ಯಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯ