Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಸ್ವಚ್ಛತಾ ಸಿಬ್ಬಂದಿಗಳಿಗೆ ಸನ್ಮಾನ ಮಾಡಿ ಕಾರ್ಮಿಕ ದಿನಾಚರಣೆ ಮಾಡಿದ ಕೆ ಆರ್ ಎಸ್ ಪಕ್ಷ 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ತಾಲೂಕಿನ ಸಾರ್ವಜನಿಕ ಆಸ್ಪತ್ರೆ
  ಸ್ವಚ್ಛತಾ ಸಿಬ್ಬಂದಿಗಳಿಗೆ  ಸನ್ಮಾನಿಸಿ ಗೌರವಿಸುವ ಮೂಲಕ  ಕಾರ್ಮಿಕ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಕೆಆರ್‌ಎಸ್ ಪಕ್ಷ  ಆಚರಿಸಿತು.

 ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ  ಬಿ ಶಿವಶಂಕರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು ಯಾವುದೇ ಸಂಸ್ಥೆಯಾಗಲಿ ತಳಮಟ್ಟದಲ್ಲಿ ಕಾರ್ಮಿಕರು ಶ್ರಮಿಸದೆಯಿದ್ದಲ್ಲಿ  ಅಭಿವೃದ್ಧಿ ಸಾಧ್ಯವಿಲ್ಲ, ಕಾರ್ಮಿಕರ ಹಿತಾಸಕ್ತಿ ಕಾಯುವ ಹಾಗೂ ಅವರ ಪ್ರಾಮುಖ್ಯತೆ ತಿಳಿಸುವ ನಿಟ್ಟಿನಲ್ಲಿ ಮೇ 1ರಂದು ಕಾರ್ಮಿಕರ ದಿನವನ್ನಾಗಿ ಆಚರಿಸುತ್ತಿದ್ದೇವೆ, ಅಂತೆಯೇ ಇಂದು  ಪ್ರತಿನಿತ್ಯ ಸಾರ್ವಜನಿಕ ಆಸ್ಪತ್ರೆಯನ್ನು ಸ್ವಚ್ಛಗೊಳಿಸಿ ಶ್ರಮಿಸುವ  ಸಿಬ್ಬಂದಿ ವರ್ಗಕ್ಕೆ ಗೌರವ ಸಮರ್ಪಣೆ ಮಾಡುವ ಮೂಲಕ  ನಮ್ಮ ಕೆಆರ್‌ಎಸ್ ಪಕ್ಷವು  ಕಾರ್ಮಿಕ ದಿನವನ್ನು ಆಚರಣೆ ಮಾಡಿದೆ ಎಂದರು.

 ಈ ವಿಶೇಷ ರೀತಿ ಆಚರಣೆಗೆ  ಬೆಂಗಳೂರು ಗ್ರಾಮಾಂತರ ಕಾರ್ಮಿಕ ಘಟಕದ ಅಧ್ಯಕ್ಷ ಮಾರುತಿ  ಹಾಗೂ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಲೀಲಾರಾಮ್ ಸೇರಿದಂತೆ ಪಕ್ಷದ  ಸೇನಾನಿಗಳು  ಮುಂದಾಳತ್ವ ವಹಿಸಿದ್ದು  ಸಂತಸ ತಂದಿದೆ, ಇಂದು ಶ್ರಮಿಕರ ದಿನ ಈ ದಿನವನ್ನು ಸಂಭ್ರಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಸ್ವಚ್ಛತಾ ಸಿಬ್ಬಂದಿಗಳಿಗೆ ಶುಭವಾಗಲಿ  ಎಂದರು.

  ಕಾರ್ಯಕ್ರಮದಲ್ಲಿ  ಜಿಲ್ಲಾಧ್ಯಕ್ಷ ಬಿ ಶಿವಶಂಕರ್ , ಜಿಲ್ಲಾ ಸಮಿತಿಯ ಕಾರ್ಮಿಕ ಘಟಕದ ಅಧ್ಯಕ್ಷರಾದ ಮಾರುತಿ, ತಾಲೂಕು ಪ್ರಧಾನ ಕಾರ್ಯದರ್ಶಿ ಮುರಾರಿ ದೊಡ್ಡಬಳ್ಳಾಪುರ , ಜಿಲ್ಲಾ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಬಿ ಎಲ್ ರಾಮ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ರಂಜಿತಾ,ತಾಲ್ಲೂಕು ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಅಲೀಮ್,ಶ್ರೀನಿವಾಸ್, ದೊಡ್ಡಬಳ್ಳಾಪುರ ತಾಲೂಕು ಉಪಾಧ್ಯಕ್ಷರು, ಹೆಚ್ ಏನ್ ವೇಣು ದೊಡ್ಡಬಳ್ಳಾಪುರ ತಾಲೂಕು ಉಸ್ತುವಾರಿಗಳು, ಸಮೀರ್ ದೊಡ್ಡಬಳ್ಳಾಪುರ ತಾಲೂಕು ಅಲ್ಪಸಂಖ್ಯಾತರ ಘಟಕ,ಸುಬ್ರಮಣಿ, ಭಾಷಾ, ಲಲಿತಮ್ಮ, ಕುಮಾರ್ ನೆಲಮಂಗಲ, ಶಶಿ ಹೊಸಕೋಟೆ, ನಾರಾಯಣಸ್ವಾಮಿ ಹೊಸಕೋಟೆ, ರಮೇಶ್ ನೆಲಮಂಗಲ ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ