LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಎಸ್ ಡಿಎಲ್: ಮಾರ್ಜಕಗಳ ಮಾರಾಟದಲ್ಲಿ 40 ವರ್ಷಗಳಲ್ಲೇ ದಾಖಲೆ ವಹಿವಾಟು!

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ ಡಿಎಲ್) 2023ರ ಡಿಸೆಂಬರ್ ತಿಂಗಳೊಂದರಲ್ಲೇ 123.42 ಕೋಟಿ ರೂ. ಮೊತ್ತದ ಮಾರ್ಜಕಗಳನ್ನು (ಡಿಟರ್ಜೆಂಟ್ಸ್) ಮಾರಾಟ ಮಾಡಿದ್ದು, ಕಳೆದ 40 ವರ್ಷಗಳ ವಹಿವಾಟಿನ ಇತಿಹಾಸದಲ್ಲಿ ಇದೊಂದು ದಾಖಲೆಯಾಗಿದೆ ಎಂದು ಸಂಸ್ಥೆ ಅಧ್ಯಕ್ಷರೂ ಆದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು,`ಕಳೆದ ತಿಂಗಳು ಕೆಎಸ್ಡಿಎಲ್ 852 ಟನ್ ಮಾರ್ಜಕಗಳನ್ನು ತಯಾರಿಸಿ, ಮಾರುಕಟ್ಟೆಗೆ ಬಿಡುಗಡೆ ಮಾಡುವ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. 2022ರ ಸೆಪ್ಟೆಂಬರ್ ತಿಂಗಳಲ್ಲಿ 775 ಟನ್ ಮಾರ್ಜಕಗಳನ್ನು ಉತ್ಪಾದಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಅದನ್ನೀಗ ಮುರಿದು, ವಹಿವಾಟಿನಲ್ಲೂ ವಿಕ್ರಮ ಸಾಧಿಸಲಾಗಿದೆ' ಎಂದಿದ್ದಾರೆ.

ಕೆಎಸ್ಡಿಎಲ್ ನಲ್ಲಿ ಇದುವರೆಗೆ ಮಾರ್ಜಕಗಳ ಉತ್ಪಾದನಾ ವಿಭಾಗದಲ್ಲಿ ಒಂದು ಪಾಳಿಯ ಕೆಲಸದ ವ್ಯವಸ್ಥೆ ಇತ್ತು. ಅದನ್ನೀಗ ಮೂರು ಪಾಳಿಗಳಿಗೆ ವಿಸ್ತರಿಸಲಾಗಿದೆ. ಜೊತೆಗೆ, ಈವರೆಗೆ ಸಂಸ್ಥೆಯಲ್ಲಿ ಮಾರ್ಜಕಗಳ ತಯಾರಿಕೆಗೆ ಕೇವಲ ಒಂದು ಯಂತ್ರ ಮಾತ್ರವಿತ್ತು. ಸರಕಾರಿ ಉದ್ದಿಮೆಗಳು ಖಾಸಗಿ ವಲಯದಂತೆಯೇ ಲಾಭ ಗಳಿಸಬೇಕೆಂಬ ಉದ್ದೇಶದಿಂದ ಈಗ ಈ ವಿಭಾಗದಲ್ಲಿ ಮೂರು ಯಂತ್ರಗಳನ್ನು ಅಳವಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಂಸ್ಥೆಯು ಮೊದಲಿನಿಂದಲೂ ಸಾಬೂನು ತಯಾರಿಕೆಗೆ ಹೆಸರುವಾಸಿಯಾಗಿದ್ದು, ಮಾರುಕಟ್ಟೆ ಕೂಡ ಅದರ ಸುತ್ತಲೇ ಕೇಂದ್ರೀಕೃತವಾಗಿತ್ತು. ಇತ್ತೀಚೆಗೆ ಮಾರ್ಜಕಗಳ ಮಾರಾಟಕ್ಕೂ ಹೆಚ್ಚಿನ ಗಮನ ಹರಿಸುವ ತೀರ್ಮಾನ ಕೈಗೊಳ್ಳಲಾಗಿತ್ತು. ಅದು ಈಗ ಫಲ ನೀಡಿದೆ. ಮುಂದಿನ ದಿನಗಳಲ್ಲಿ ಖಾಸಗಿ ಕಂಪನಿಗಳ ಮಾರ್ಜಕಗಳಿಗೆ ಸಡ್ಡು ಹೊಡೆಯುವ ರೀತಿಯಲ್ಲಿ ಮಾರುಕಟ್ಟೆ ಜಾಲವನ್ನು ಅಖಿಲ ಭಾರತ ಮಟ್ಟದಲ್ಲಿ ವಿಸ್ತರಿಸಲಾಗುವುದು ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ಹೋದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ 2023-24ನೇ ಹಣಕಾಸು ವರ್ಷದಲ್ಲಿ ಡಿಸೆಂಬರ್ ಅಂತ್ಯದವರೆಗೆ ಸಾಬೂನು, ಮಾರ್ಜಕ ಮತ್ತು ಕಾಸ್ಮೆಟಿಕ್ಸ್ ಉತ್ಪಾದನೆ ನಿಗದಿತ ಗುರಿಗಿಂತ ಹೆಚ್ಚಾಗಿದೆ. ಸಂಸ್ಥೆಯು ಹೋದ ಸಾಲಿನಲ್ಲಿ 118 ಕೋಟಿ ರೂ. ಲಾಭ ಗಳಿಸಿತ್ತು. ಈ ಹಣಕಾಸು ಸಾಲಿನ ಮೊದಲ ಒಂಬತ್ತು ತಿಂಗಳಲ್ಲಿ ಸಂಸ್ಥೆಯು 1,171 ಕೋಟಿ ರೂ. ಮೊತ್ದಷ್ಟು ವಹಿವಾಟು ನಡೆಸಿದೆ. ಈ ವರ್ಷಕ್ಕೆ ಒಟ್ಟು 1,404 ಕೋಟಿ ರೂ. ವಹಿವಾಟು ನಿಗದಿ ಪಡಿಸಲಾಗಿದ್ದು, ಇದನ್ನು ಮೀರುವುದರಲ್ಲಿ ಅನುಮಾನವಿಲ್ಲ ಎಂದು ಎಂ ಬಿ ಪಾಟೀಲ ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ