LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆ ಎಸ್ ಆರ್ ಟಿ ಸಿ ಗೆ ಮತ್ತೆ  6 ಪ್ರಶಸ್ತಿಗಳ ಗರಿಮೆ

ಬೆಂಗಳೂರು/ನವದೆಹಲಿ:  ಕೆ ಎಸ್ ಆರ್ ಟಿ ಸಿ ಗೆ ಮತ್ತೆ  6 ಪ್ರಶಸ್ತಿಗಳ ಗರಿಮೆ ಪಡೆಯುವ ಮೂಲಕ ಇದರೊಂದಿಗೆ ನಿಗಮವು ಕಳೆದ 8 ತಿಂಗಳುಗಳಲ್ಲಿ 51 ಪ್ರಶಸ್ತಿಗಳ ಮುಡಿಗೇರಿಸಿಕೊಂಡಿದೆ.

ಫೆ.17ರಂದು ಮುಂಬೈ ನ ಖಾಸಗಿ ಹೊಟೇಲ್ ನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ, World Manufacturing Congress ಹಾಗೂ World Marketing Congressನ 5 ಪ್ರಶಸ್ತಿಗಳು ಹಾಗೂ ನಿಗಮದ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಯವರಿಗೆ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿ ಲಭಿಸಿರುತ್ತದೆ.

ನಿಗಮಕ್ಕೆ ಈ ಕೆಳಕಂಡ ವರ್ಗಗಳಲ್ಲಿ ಪ್ರಶಸ್ತಿ ಗರಿಮೆ

• ವಿದ್ಯುತ್ ವಾಹನಗಳ ಕೈಗಾರಿಕಾ ನಾಯಕತ್ವ ಪ್ರಶಸ್ತಿ. ಇ.ವಿ.ಪವರ್ ಪ್ಲಸ್

• ಜಾಗತಿಕ ಬ್ರಾಂಡ್ ಉತ್ಕೃಷ್ಟತೆ ಪ್ರಶಸ್ತಿ- ಅತ್ಯುತ್ತಮ ಬ್ರಾಂಡಿಂಗ್ ಮತ್ತು ಮಾರ್ಕೆಟಿಂಗ್ ಉಪಕ್ರಮ

• ವರ್ಷದ ವ್ಯಾವಹಾರಿಕ ನಾಯಕತ್ವ ಪ್ರಶಸ್ತಿ- ಅತ್ಯುತ್ತಮ ವಿನೂತನ ಉಪಕ್ರಮಸಂಸ್ಥೆ

• ಜಾಗತಿಕ ಮಾನವ ಸಂಪನ್ಮೂಲ ಉತ್ಕೃಷ್ಟತೆ ಪ್ರಶಸ್ತಿ- ಕಾರ್ಮಿಕರೊಂದಿಗೆ ಉತ್ತಮ ಭಾಂದವ್ಯ ಹೊಂದಿರುವ ಸಂಸ್ಥೆ

• ಜಾಗತಿಕ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ.-ಜಾಗತಿಕ ಮಾನವ  ಸಂಪನ್ಮೂಲ ಉಪಕ್ರಮ

ಇದಲ್ಲದೆ, ನಿಗಮದ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಯವರಾದ ಡಾ. ಲತಾ ಟಿ.ಎಸ್ ರವರಿಗೆ ವಿಶ್ವ ಮಾರ್ಕೆಟಿಂಗ್ ಉತ್ಕೃಷ್ಟತೆಗಾಗಿ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಮುಂಬಯಿಯಲ್ಲಿ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ, ಮಿಸ್. ನಿನಾ ಇ ಉಡರ್ಡ, ಅಧ್ಯಕ್ಷರು ಹಾಗೂ ಮುಖ್ಯಸ್ಥರು, ನಿನಾ ಇ ಉಡರ್ಡ ಅಸೋಸಿಯೇಟ್ಸ್, ಯುನೈಟೆಡ್ ಸ್ಟೇಟ್ಸ್ ಹಾಗೂ ಡಾ. ಓವಿಲಿಯಾ ಫೆರ್ನಾಂಡಿಸ್, ಮಾಲೀಕರು ಮತ್ತು ಸಂಸ್ಥಾಪಕರು, ಓಝೋನ್ ಗ್ರೂಪ್, ದುಬೈ ರವರು ನಿಗಮಕ್ಕೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಡಾ.ಲತಾ ಟಿ.ಎಸ್. ಮಂಡಳಿ ಕಾರ್ಯದರ್ಶಿ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ,. ಹೆಚ್ ಎಸ್. ಸತೀಶ್, ವಿಭಾಗೀಯ ತಾಂತ್ರಿಕ ಅಭಿಯಂತರರು, ಸೌಮ್ಯ.ಸಿ. ವಿಭಾಗೀಯ ತಾಂತ್ರಿಕ ಶಿಲ್ಪಿ ಹಾಗೂ. ಶಿಬಾ.ಎಸ್. ಸಹಾಯಕ ಆಡಳಿತಾಧಿಕಾರಿ ರವರು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರುನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ರಮೇಶ್ಡಿಸಿಎಂ ಸೂಚನೆಯಂತೆ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಆದೇಶಮಡಿವಾಳ ಸಮಾಜ ಪರಿಶಿಷ್ಟ ಜಾತಿಗೆ ಸೇರಿಸಲು ಮಾ.16ಕ್ಕೆ ಧರಣಿBalc ನಿಂದ ಉಚಿತ ವೃತ್ತಿ ಮಾರ್ಗದರ್ಶನ,sat ಬಿಡುಗಡೆಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಡಿವಾಳ ಸಂಘದಿಂದ ಮಾ.16ಕ್ಕೆ ಫ್ರೀಡಂ ಪಾರ್ಕಿನಲ್ಲಿ ಧರಣಿಕೊಲ್ಲಿ ಯುದ್ಧ: ಕನ್ನಡಿಗರನ್ನು ರಕ್ಷಿಸಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ