Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬಸ್‌ನಲ್ಲೇ ಹೆರಿಗೆ ಮಾಡಿಸಿದ ನಿರ್ವಾಹಕಿಗೆ ಕೆಎಸ್‌ಆರ್‌ಟಿಸಿ ಸನ್ಮಾನ

ಸುದ್ದಿಮೂಲ ವಾರ್ತೆ

ಬೆಂಗಳೂರು, ಮೇ 17: ಗರ್ಭಿಣಿ ಮಹಿಳೆಗೆ ಬಸ್‌ನಲ್ಲಿಯೇ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಮಾನವೀಯತೆ ಮೆರೆದು ಬಸ್‌ನಲ್ಲಿಯೇ ಹೆರಿಗೆ ಮಾಡಿಸಿದ ನಿರ್ವಾಹಕಿ ಎಸ್.ವಸಂತಮ್ಮ ಮತ್ತು ಚಾಲಕ ಎಚ್.ಬಿ. ಕುಮಾರಸ್ವಾಮಿ ಅವರಿಗೆ ಕೆಎಸ್‌ಆರ್‌ಟಿಸಿ ಅಭಿನಂದಿಸಿತು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಫಾತಿಮಾ ಎಂಬ ಗರ್ಭಿಣಿಗೆ ಬಸ್‌ನಲ್ಲಿಯೇ ಅತೀವ ಹೆರಿಗೆ ನೋವು ಕಾಣಿಸಿಕೊಂಡಿತು. ಸಮೀಪದಲ್ಲಿ ಯಾವುದೇ ಆಸ್ಪತ್ರೆ ಇಲ್ಲದ ಕಾರಣ ಮಾರ್ಗ ಮಧ್ಯದಲ್ಲಿಯೇ ಬಸ್ಸನ್ನು ನಿಲ್ಲಿಸಿ, ಹೆರಿಗೆ ಮಾಡಿಸಿ ತಾಯಿ ಮತ್ತು ಮಗುವಿನ ಜೀವ ಕಾಪಾಡಿದ ಚಿಕ್ಕಮಗಳೂರು ವಿಭಾಗದ ನಿರ್ವಾಹಕಿ ವಸಂತಮ್ಮ, ಬಸ್ಸಿನ ಚಾಲಕ ಕುಮಾರಸ್ವಾಮಿ ಅವರಿಗೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ .ಸತ್ಯವತಿ ಅವರು ಕ್ರಮವಾಗಿ ತಲಾ ರೂ. 5,000/- ಹಾಗೂ ರೂ.2000/- ನಗದು ಪುರಸ್ಕಾರ ನೀಡಿ ಸನ್ಮಾನಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕರು, ನಿಗಮದ ಚಾಲನಾ ಸಿಬ್ಬಂದಿಗಳು ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರೊಂದಿಗೆ ಉತ್ತಮ ನಡೆವಳಿಕೆ ತೋರಿ ಅವರ ಅಗತ್ಯಗಳಿಗೆ ಸ್ಪಂದಿಸುವುದರಲ್ಲಿ ಮುಂಚೂಣಿಯಲ್ಲಿದ್ದು, ವಸಂತಮ್ಮ ನಿರ್ವಾಹಕಿಯವರು, ಯಾವುದೇ ರೀತಿಯಲ್ಲಿ ಹಿಂಜರಿಯದೆ ಧೈರ್ಯದಿಂದ ಸಕಾಲದಲ್ಲಿ ಮಹಿಳೆ ಮತ್ತು ಮಗುವನ್ನು ಕಾಪಾಡಲೇಬೇಕು ಎಂಬ ಸದುದ್ದೇಶದಿಂದ, ಹತ್ತಿರದಲ್ಲಿ ಆಸ್ಪತ್ರೆ ಇಲ್ಲದ ಕಾರಣ ಅವರಿಗೆ ಬಸ್ಸಿನಲ್ಲಿಯೇ ಹೆರಿಗೆ ಮಾಡಿಸಿ ಮಗು ಮತ್ತು ತಾಯಿಯ ಪ್ರಾಣವನ್ನು ಉಳಿಸಿ ಮಾನವೀಯತೆಯನ್ನು ಮೆರೆದಿರುವುದು ನಿಜಕ್ಕೂ ಅಭಿನಂದನಾರ್ಹ ಎಂದರು.

ಕಾರ್ಯಕ್ರಮದಲ್ಲಿ ನಿರ್ದೇಶಕ (ಸಿಬ್ಬಂದಿ ಮತ್ತು ಜಾಗೃತ) ಪ್ರಶಾಂತ್ ಕುಮಾರ್ ಮಿಶ್ರ, ಇಲಾಖಾ ಮುಖ್ಯಸ್ಥರು, ವಿಭಾಗೀಯ ನಿಯಂತ್ರಣಾಧಿಕಾರಿ ಹಾಗೂ ಕಾರ್ಮಿಕ ಕಲ್ಯಾಣಾಧಿಕಾರಿ ಚಿಕ್ಕಮಗಳೂರು ವಿಭಾಗ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ