Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ನಟ ಉಮೇಶ್ ಹಾಗೂ ಜಾನಪದ ಕಲಾವಿದ ರಾಮಚಂದ್ರಯ್ಯನವರಿಗೆ ನುಡಿ ನಮನ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕು ಕನ್ನಡ ಸಾಹಿತ್ಯ
  ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ  ಚಲನಚಿತ್ರ  ಹಾಸ್ಯ ನಟ ಉಮೇಶ್ ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ ಅವರಿಗೆ ನುಡಿನಮನ  ಸಲ್ಲಿಸಲಾಯಿತು.

  ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಮುಖಂಡರುಕಲಾವಿದರ ಸಾವು ನೋವಿನ ಸಂಗತಿಯೇ, ಕಲಾವಿದರು  ತಮ್ಮ ಕಲೆ, ಅಭಿನಯದಿಂದ ಜನರ ಮನಸ್ಸನ್ನು ತಲುಪಿ, ಭಾವನೆಗಳನ್ನು ಕೆರಳಿಸಿ, ಸಮಾಜಕ್ಕೆ ಸ್ಪೂರ್ತಿ ತುಂಬಿರುತ್ತಾರೆ.  ಪ್ರತಿಭಾವಂತ ಕಲಾವಿದನ ನಿಧನ ಕಲೆ ಮತ್ತು ಸಾಂಸ್ಕೃತಿಕ ರಂಗದಲ್ಲಿ ದೊಡ್ಡ ಶೂನ್ಯವನ್ನು ಸೃಷ್ಟಿಸುತ್ತದೆ ಎಂದರು. 

ಎಂ.ಎಸ್‌ ಉಮೇಶ್‌ ಅವರು  ಬಾಲ್ಯದಿಂದಲೇ ಅಭಿನಯದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವರು. ಹಿರಣ್ಣಯ್ಯರ ನಾಟಕ ಕಂಪನಿಯಲ್ಲಿ  ಬಾಲನಟನಾಗಿ  ನಂತರ ಗುಬ್ಬಿ ವೀರಣ್ಣರ ಕಂಪನಿಯಲ್ಲಿ ವಿವಿಧ ಪಾತ್ರಗಳಲ್ಲಿ ನಟಿಸಿದರು. 1960ರಲ್ಲಿ  ʻಮಕ್ಕಳ ರಾಜ್ಯʼ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು 350ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ಅಭಿನಯಿಸಿ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದರು. 

ಜಾನಪದ ಕಲಾವಿದ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿ ಶ್ಯಾಕಲದೇವನಪುರ ಗ್ರಾಮದ ರಾಮಚಂದ್ರಯ್ಯ  ಹಲವಾರು ಕಲಾವಿದರನ್ನು ಬೆಳೆಸಿ ಪ್ರೋತ್ಸಾಹಿಸಿದರು.   ದೊಡ್ಡಬಳ್ಳಾಪುರ ತಾಲ್ಲೂಕಿನ ಹಲವಾರು ಹಿರಿಯ  ಕಲಾವಿದರಿಗೆ ಸರ್ಕಾರದಿಂದ ಮಾಸಾಶನ ದೊರೆಯುವಂತೆ ಮಾಡಿದರು. ದೊಡ್ಡಬಳ್ಳಾಪುರಕ್ಕೆ  ರಾಜ್ಯ ಮತ್ತು ರಾಷ್ಟ್ರಮಟ್ಟದ ಕಲಾವಿದರನ್ನು ಕರೆಸಿ ಕಾರ್ಯಕ್ರಮ ನಡೆಸಿಕೊಟ್ಟಿದ್ದರು.  ಸ್ಥಳೀಯ ಕಲಾವಿದರನ್ನು ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ‌ಭಾಗವಹಿಸುವಂತೆ ಮಾಡಿದ್ದರು ಎಂದರು. 

ಕಾರ್ಯಕ್ರಮದಲ್ಲಿ  ಕನ್ನಡಪರ ಹಿರಿಯ ಹೋರಾಟಗಾರ  ಸಂಜೀವ್ ನಾಯಕ್, ಗುರುರಾಜಪ್ಪಕನ್ನಡ ಪಕ್ಷದ‌‌ ಜಿಲ್ಲಾಧ್ಯಕ್ಷ ಮುನಿಪಾಪಣ್ಣ,   ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು,   ಕನ್ನಡ ಜಾಗೃತ ಪರಿಷತ್ತು  ಕಾರ್ಯದರ್ಶಿ ಡಿ.ಪಿ.ಆಂಜನೇಯ,    ನವೋದಯ ವಿದ್ಯಾಲಯ ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ, ಕನ್ನಡ ಸಾಹಿತ್ಯ ಪರಿಷತ್ತು  ಜಿಲ್ಲಾ ಗೌರವ ಕಾರ್ಯದರ್ಶಿ  ಪ್ರೊ.ಕೆ.ಆರ್.ರವಿಕಿರಣ್,

  ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಸಾಸಲು ಹೋಬಳಿ ಅಧ್ಯಕ್ಷ ಜಿ.ಎಂ.ನಾಗರಾಜು,   ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್,   ಪ್ರತಿನಿಧಿಗಳಾದ  ನಾಗರತ್ನಮ್ಮ,   ಕೋದಂಡರಾಮ್,   ಜಿ.ವಿ‌.ಗಣೇಶ್,   ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ದೈಹಿಕ ಶ್ರೀನಿವಾಸ್, ದರ್ಗಾಜೋಗಿಹಳ್ಳಿ ಮಲ್ಲೇಶ್, ಇಸ್ತೂರು ರಂಗಸ್ವಾಮಯ್ಯಮುಂತಾದವರು ಭಾಗವಹಿಸಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ