Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಕುಲಕರ್ಣಿ ಸ್ಥಾನ ರದ್ದು

ಬೆಂಗಳೂರು/ಧಾರವಾಡ, ಮೇ 3: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಿ ರಾಜ್ಯ ವಿಧಾನಸಭೆ ಕಾರ್ಯದರ್ಶಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ಈ ಮೂಲಕ ಧಾರವಾಡ ವಿಧಾನಸಭಾ ಕ್ಷೇತ್ರ ತೆರವಾಗಿದೆ ಎಂದು ತಿಳಿಸಲಾಗಿದ್ದು, ಏಪ್ರಿಲ್ 15ರಿಂದಲೇ ಅವರ ಸದಸ್ಯತ್ವ ರದ್ದಾಗಿದೆ ಎಂದು ಪ್ರಕಟನೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್ 13ರಂದು ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಯನ್ನು ದೋಷಿ ಎಂದು ತೀರ್ಪು ನೀಡಿದ್ದು, ಏಪ್ರಿಲ್ 15ರಂದು ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಹಿನ್ನೆಲೆ ಮೇ 2ರಂದು ಶಾಸಕ ಸ್ಥಾನ ರದ್ದುಗೊಂಡಿರುವ ಬಗ್ಗೆ ಅಧಿಕೃತ ಪ್ರಕಟಣೆ ಹೊರಬಂದಿದೆ.

ನಿಯಮ ಏನು ಹೇಳುತ್ತದೆ?
ಸಂವಿಧಾನದ ವಿಧಿ 191(1)(ಇ) ಹಾಗೂ ಜನಪ್ರತಿನಿಧಿಗಳ ಕಾಯ್ದೆ, 1951ರ ಸೆಕ್ಷನ್ 8 ಪ್ರಕಾರ, ಕ್ರಿಮಿನಲ್ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿ ಕನಿಷ್ಠ 2 ವರ್ಷ ಅಥವಾ ಹೆಚ್ಚಿನ ಅವಧಿಯ ಶಿಕ್ಷೆ ವಿಧಿಸಲ್ಪಟ್ಟ ತಕ್ಷಣವೇ ಜನಪ್ರತಿನಿಧಿಗಳು ಅನರ್ಹರಾಗುತ್ತಾರೆ. ಕೊಲೆ ಪ್ರಕರಣಗಳಲ್ಲಿ (ಐಪಿಸಿ ಸೆಕ್ಷನ್ 302) ಶಿಕ್ಷೆ ಜೀವಾವಧಿ ಅಥವಾ ಮರಣದಂಡನೆ ಆಗಿರುವುದರಿಂದ, ತೀರ್ಪು ಹೊರಬಂದ ತಕ್ಷಣವೇ ಶಾಸಕ ಸ್ಥಾನ ರದ್ದಾಗುತ್ತದೆ.

ಅನರ್ಹತೆಯ ಅವಧಿ
ಶಿಕ್ಷೆ ಅನುಭವಿಸಿ ಬಿಡುಗಡೆಗೊಂಡ ನಂತರವೂ ಮುಂದಿನ 6 ವರ್ಷಗಳ ಕಾಲ ಯಾವುದೇ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇರುವುದಿಲ್ಲ.

ಸೂಪ್ರೀಂ ಕೋರ್ಟ್ ತೀರ್ಪು
2013ರ ಲಿಲಿ ಥಾಮಸ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಂತೆ, ಶಿಕ್ಷೆ ವಿಧಿಸಿದ ತಕ್ಷಣವೇ ಅನರ್ಹತೆ ಜಾರಿಗೆ ಬರುತ್ತದೆ. ಮೇಲ್ಮನವಿ ಸಲ್ಲಿಸಲು ಹಿಂದಿನಂತೆ 3 ತಿಂಗಳ ಕಾಲಾವಕಾಶ ಇರುವುದಿಲ್ಲ.

ಮೇಲ್ಮನವಿ ಅರ್ಜಿ
ಇದೇ ವೇಳೆ, ಜೀವಾವಧಿ ಶಿಕ್ಷೆಗೆ ತಡೆಯಾಜ್ಞೆ ಕೋರಿ ವಿನಯ್ ಕುಲಕರ್ಣಿ ಹಾಗೂ ಇನ್ನೊಬ್ಬ ಆರೋಪಿ ಚಂದ್ರಶೇಖರ್ ಇಂಡಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಶಿಕ್ಷೆಯನ್ನು ಅಮಾನತಿನಲ್ಲಿ ಇರಿಸುವಂತೆ ಮನವಿ ಮಾಡಿದ್ದಾರೆ.

ಪ್ರಕರಣದ ಹಿನ್ನಲೆ
2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಅವರನ್ನು ಹತ್ಯೆಗೈದ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ 21 ಮಂದಿ ವಿರುದ್ಧ ಆರೋಪ ಕೇಳಿಬಂದಿತ್ತು. ಬಳಿಕ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಗಿದ್ದು, ದೀರ್ಘ ತನಿಖೆ ಮತ್ತು ವಿಚಾರಣೆ ನಂತರ ಕೊಲೆ, ಸಂಚು, ಸಾಕ್ಷ್ಯ ನಾಶ ಸೇರಿದಂತೆ ಹಲವು ಆರೋಪಗಳಲ್ಲಿ 16 ಮಂದಿಯನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ. ಇಬ್ಬರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ತೀರ್ಪಿನ ನಂತರ ದೋಷಿಗಳನ್ನು ಸಿಬಿಐ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಗನ ಕೊಲೆಯ ಸೇಡು: ರಣಚಂಡಿಯಾದ ಹೆತ್ತವಳು! ರಕ್ತಕ್ಕೆ ರಕ್ತವೆಂದು 12 ವರ್ಷಗಳ ಬಳಿಕ ಮುಹೂರ್ತ ಇಟ್ಟ ತಾಯಿ!₹281.48 ಕೋಟಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ; ಸರ್ಕಾರದ ತನಿಖೆಗೆ ಆಗ್ರಹಫ್ರೀಡಂ ಹಬ್ಬದಲ್ಲಿ ‘ಮೋದಿ ಮೋದಿ’ ಘೋಷಣೆ; ಡಿಕೆಶಿ ಮಾತಿನಲ್ಲೇ ಜನರಿಗೆ ಟಾಂಗ್ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ದಂಡಿನ ಆಯ್ಕೆ ಮಾಡುವಂತೆ ಸಿದ್ದು ತುಮಕೂರು ಆಗ್ರಹನಕಲಿ ಎನ್‌ಕೌಂಟರ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿಹಳಿಸಗರ ಸರ್ಕಾರಿ ಶಾಲೆಯ ದುಸ್ಥಿತಿ: ಪುಟಾಣಿಗಳ ಜೀವದೊಂದಿಗೆ ಚೆಲ್ಲಾಟ; ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪದುಗೃಹ ಸಚಿವರ ಘೋಷಣೆಗೆ ಸವಾಲೇ? ಶಹಾಪುರದಲ್ಲಿ ಮತ್ತೆ ಜೋರಾದ ಅಕ್ರಮ ಮರಳು ಸಾಗಾಟಒಂದು ವಾರದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿ: ಇಲ್ಲದಿದ್ದರೆ ಬೃಹತ್ ಪ್ರತಿಭಟನೆ – ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಕೆಕೆನಾಲ್ ಒಡೆದು ಸಾವಿರಾರು ಲೀಟರ್ ನೀರು ಪೋಲು: ರೈತರ ಜಮೀನು ಜಲಾವೃತ, ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪದ ಆರೋಪನಾರಾಯಣಪುರ ಬಲದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ: ತಕ್ಷಣ ನಿರ್ವಹಣೆಗೆ ರೈತ ಸಂಘ ಆಗ್ರಹ