LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಒಳ ಒಪ್ಪಂದ ಮಾಡಿ ರಾಜಕೀಯ ಮಾಡುತ್ತಿದ್ದಾರೆ'- ವಿಜಯೇಂದ್ರ ವಿರುದ್ಧ ಕುಮಾರ್ ಬಂಗಾರಪ್ಪ ವಾಗ್ದಾಳಿ

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಮುಂದುವರೆಯಬಾರದು ಎನ್ನುವ ನಿಲುವಿನಲ್ಲಿ ಈಗಲೂ ನಾವಿದ್ದೇವೆ.  ಒಳಒಪ್ಪಂದ ಮಾಡಿ ರಾಜಕೀಯ ಮಾಡುತ್ತಿದ್ದಾರೆ. ಈಗಿನ ಅಧ್ಯಕ್ಷರು ಇದನ್ನೆಲ್ಲ ಮಾಡ್ತಿದ್ದಾರೆ. ಈ ಕುರಿತು ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಬಿಜೆಪಿ ರೆಬಲ್ ನಾಯಕ ಕುಮಾರ್ ಬಂಗಾರಪ್ಪಎಂದು ಹೇಳಿದರು.

ಕೇಂದ್ರ ಸಚಿವ ಸೋಮಣ್ಣ ಜೊತೆ ಸಭೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸೋಮಣ್ಣ ಅವರು ನಮಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಹಕಾರ ಕೊಡಿ ಅಂತ ಕೇಳಿಲ್ಲ. ದಾವಣಗೆರೆ ವಿಚಾರಕ್ಕೆ ಸಿದ್ದೇಶ್ವರ್‌, ಹರೀಶ್ ಅವರನ್ನು ಸೋಮಣ್ಣ ಅವರು ಭೇಟಿಯಾಗಿದ್ದಾರೆ ಅಷ್ಟೇ ಎಂದು ತಿಳಿಸಿದರು.

ಬಿಜೆಪಿ ಸ್ವತಂತ್ರವಾಗಿ ಅಧಿಕಾರಕ್ಕೆ ಬರಬೇಕಾದರೆ ವಿಜಯೇಂದ್ರ ಬದಲಾವಣೆಯಾಗಬೇಕು. ನಮ್ಮ ಅಭಿಪ್ರಾಯ ಹೇಳಿದ್ದೇವೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆ ನೋಡೋಣ. ನಮ್ಮ ಅಭಿಪ್ರಾಯ, ನಮ್ಮ ನಿಲುವನ್ನು ನಾವು ಹೇಳಿದ್ದೇವೆ. ಕರ್ನಾಟಕದ ಕಾರ್ಯಕರ್ತರಿಗೂ ಈ ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕು ಎನ್ನುವ ಭಾವನೆಯಿದೆ. ನಮ್ಮ ಬೇಡಿಕೆಯಿಂದ ನಾವು ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸರ್ಕಾರದ ಅಕ್ರಮಗಳು ಜಾಸ್ತಿಯಾಗಿವೆ. ಇದರ ವಿರುದ್ಧ ಧ್ವನಿ ಎತ್ತುವ ಕೆಲಸ ವಿಜಯೇಂದ್ರ ಮಾಡಿಲ್ಲ. ವಾಲ್ಮೀಕಿ ಹಗರಣವನ್ನು ಹಾಗೆಯೇ ಕೈ ಬಿಟ್ಟರು. ಹನಿಟ್ರ‍್ಯಾಪ್ ವಿಷಯವನ್ನು ಬಿಟ್ಟರು. ಹೊಂದಾಣಿಕೆ ಮಾಡಿಕೊಂಡು ಕೈ ಚೆಲ್ಲಿ ಕೂತರೆ ಹೇಗೆ? ಇವರೆಲ್ಲ ನೇರ ನಡೆಯಿಂದ ರಾಜಕೀಯ ಮಾಡುತ್ತಿಲ್ಲ. ಒಳಒಪ್ಪಂದ ಮಾಡಿ ರಾಜಕೀಯ ಮಾಡುತ್ತಿದ್ದಾರೆ. ಈಗಿನ ಅಧ್ಯಕ್ಷರು ಇದನ್ನೆಲ್ಲ ಮಾಡ್ತಿದ್ದಾರೆ. ಈ ಕುರಿತು ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಂಡಿದ್ದೇವೆ ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026