ಬೆಂಗಳೂರು :
ಬಿಜೆಪಿಯ ಮಾಜಿ ಶಾಸಕರಾದ ಮೂಡಗೆರೆಯ ಎಂ.ಪಿ. ಕುಮಾರಸ್ವಾಮಿ ಮತ್ತು ಶಿರಹಟ್ಟಿಯ ರಾಮಪ್ಪ ಲಮಾಣಿ ಬುಧವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆ ಕುರಿತು ಚರ್ಚಿಸಿದ್ದಾರೆ.
ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಅವರು ಪಕ್ಷ ಸೇರ್ಪಡೆಯಾಗಲಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಇವರಿಬ್ಬರ ಕಾಂಗ್ರೆಸ್ ಸೇರ್ಪಡೆಗೆ ಮಧ್ಯಸ್ಥಿಕೆ ವಹಿಸಿದ್ದಾರೆ. 2018 ರಲ್ಲಿ ಬಿಜೆಪಿ ಶಾಸಕರಾಗಿ ಗೆದ್ದಿದ್ದ ಕುಮಾರಸ್ವಾಮಿ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲಾಗಿತ್ತು. ಜೆಡಿಎಸ್ ನಿಂದ ಸ್ಪರ್ಧಿಸಿ ಸೋಲುಂಡಿದ್ದರು. ರಾಮಪ್ಪ ಲಮಾಣಿ ಅವರಿಗೂ ಸಹ ಶಿರಹಟ್ಟಿಯಲ್ಲಿ ಟಿಕೆಟ್ ನಿರಾಕರಿಸಲಾಗಿತ್ತು. ಈ ಹಿನ್ನಲೆಯಲ್ಲಿ ಅವರು ಪಕ್ಷ ತ್ಯಜಿಸಲು ಮುಂದಾಗಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.