LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುರುಗೋಡು ಪುರಸಭೆ: ಬೀದಿ ನಾಯಿಗಳ ಉಪಟಳ ಕಡಿವಾಣಕ್ಕೆ ಕ್ರಮ





ಬಳ್ಳಾರಿ,ಡಿ.06

ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳ ಮುಖ್ಯಸ್ಥರು ಸರ್ವೋಚ್ಚ ನ್ಯಾಯಾಲಯ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳು ವಾಸವಿದ್ದಲ್ಲಿ, ಪರಿಶೀಲಿಸಿ ಬೀದಿ ನಾಯಿಗಳ ಸಂಖ್ಯೆಯ ಮಾಹಿತಿಯನ್ನು ಕುರುಗೋಡು ಪುರಸಭೆ ಕಚೇರಿಗೆ ಸಲ್ಲಿಸಬೇಕು ಎಂದು ಮುಖ್ಯಾಧಿಕಾರಿ ತಿಳಿಸಿದ್ದಾರೆ.

ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರವೇಶ ನಿಯಂತ್ರಿಸಲು ಕ್ರಮವಹಿಸಬೇಕು. ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವುದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವ ಮೂಲಕ ಕುರುಗೋಡು ಪುರಸಭೆ ಕಚೇರಿಗೆ ಸಹಕರಿಸಬೇಕು.

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ತಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿ ನಾಯಿಗಳು ವಾಸಮಾಡಲು ಅವಕಾಶ ಮಾಡಿಕೊಟ್ಟಲ್ಲಿ ಅವುಗಳನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿಂದಲೇ ವಸೂಲು ಮಾಡಲಾಗುವುದು. ಆದೇಶ ಉಲ್ಲಂಘಿಸಿದಲ್ಲಿ ನ್ಯಾಯಾಲಯದ ಸೂಚನೆಯಂತೆ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮವಹಿಸಲಾಗುವುದು.

ಬೀದಿ ನಾಯಿಗಳನ್ನು ದತ್ತು ನೀಡುವ, ಪಡೆಯುವ ಪ್ರಕ್ರಿಯೆ ಜಾರಿಯಲ್ಲಿದೆ. ದತ್ತು ಪಡೆಯಲು ಇಚ್ಛಿಸುವ ವ್ಯಕ್ತಿ, ಸಂಸ್ಥೆಗಳಿಗೆ ನಿಯಮಾನುಸಾರ ದತ್ತು ನೀಡಲು ಕ್ರಮ ವಹಿಸಲಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಕುರುಗೋಡು ಪುರಸಭೆ ಕಚೇರಿಗೆ ಸಂಪರ್ಕಿಸಬಹುದು.

ಬೀದಿ ನಾಯಿಗಳ ನಿಯಂತ್ರಣ ಮತ್ತು ಆಶ್ರಯ ತಾಣಕ್ಕೆ ಸಾಗಿಸುವ ಕುರಿತು ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 9731076778 ಗೆ ಕರೆ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು