ಕುವೆಂಪು ಅವರ ವಿಶ್ವಮಾನವ ದಿನಾಚರಣೆ.!
ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ವಿಶ್ವಮಾನವ ದಿನಾಚರಣೆಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಅವರ ನಿಧನದ ಶೋಕಾಚರಣೆ ಹಿನ್ನಲೆಯಲ್ಲಿ ಸರಳವಾಗಿ ಹಮ್ಮಿಕೊಳ್ಳಲಾಗಿತ್ತು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಡಾ.ನಾಗವೇಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಶಾಲಾ ಶಿಕ್ಷಣ ಇಲಾಖೆಯ ಕನ್ನಡ ವಿಷಯ ಪರಿವೀಕ್ಷಕ ಕೆ.ಶಿವಣ್ಣ ಸೇರಿದಂತೆ ಮತ್ತಿತರರು ಇದ್ದರು.
ಫೋಟೋ ವಿವರ: ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ರಾಷ್ಟ್ರಕವಿ ಕುವೆಂಪು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.