ಬೆಂಗಳೂರು :
ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆ.ವಿ.ಪ್ರಭಾಕರ್ ನೇಮಕವಾಗಿದ್ದಾರೆ. ಮುಖ್ಯಮಂತ್ರಿಯವರ ಸಚಿವಾಲಯಕ್ಕೆ ಅಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿದ್ದರಾಮಯ್ಯ ಅವರು ತಮ್ಮ ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಾಧ್ಯಮ ಸಮನ್ವಯಕರಾಗಿದ್ದ ಹಿರಿಯ ಪತ್ರಕರ್ತ ಕೆ. ವಿ. ಪ್ರಭಾಕರ್ ಅವರನ್ನು ಈ ಬಾರಿ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.
ಕೆ.ವಿ.ಪ್ರಭಾಕರ್ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನವನ್ನೂ ನೀಡಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.