LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೋಚಿಂಗ್ ಇಲ್ಲದೆ ಮೊದಲ ಪ್ರಯತ್ನದಲ್ಲಿ ಐಎಎಸ್ ಆದ ಲಘಿಮಾ ತಿವಾರಿ

ನವದೆಹಲಿ : ಯುಪಿಎಸ್‌ಸಿ 2022 ರ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಅಖಿಲ ಭಾರತ 19 ನೇ ರ್ಯಾಂಕ್ ಗಳಿಸಿರುವ ಲಘಿಮಾ ತಿವಾರಿಯ ಯಶೋಗಾಥೆ ಇದು. ದೆಹಲಿ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರುವ ಲಘಿಮಾ, ಯಾವುದೇ ಕೋಚಿಂಗ್ ಇಲ್ಲದೆ ತನ್ನ ಮೊದಲ ಪ್ರಯತ್ನದಲ್ಲಿ ಐಎಎಸ್‌ ಸ್ಥಾನವನ್ನು ಸಾಧಿಸಿದ್ದಾರೆ.

ರಾಜಸ್ಥಾನದ ಅಲ್ವಾರ್ ನಿವಾಸಿ ಲಘಿಮಾ ಅವರ ಯಶೋಗಾಥೆ ಯುವಜನತೆಗೆ ಸ್ಫೂರ್ತಿಯ ಸೆಲೆಯಾಗಿದೆ. ಯುಪಿಎಸ್‌ಸಿಗೆ ತಯಾರಿ ನಡೆಸುತ್ತಿದ್ದಾಗ, ಯೂಟ್ಯೂಬ್‌ನಲ್ಲಿ ಟಾಪರ್‌ಗಳ ಸಂದರ್ಶನಗಳನ್ನು ನೋಡಿ ಲಘಿಮಾ ಬಹಳಷ್ಟು ಕಲಿತರು. ಯಾವುದೇ ಕೋಚಿಂಗ್‌ಗೆ ಸೇರುವ ಬದಲು, ಅವರು ಟೆಸ್ಟ್ ಸರಣಿ ಮತ್ತು ಸ್ವಯಂ-ಅಧ್ಯಯನವನ್ನು ಹೆಚ್ಚು ಅವಲಂಬಿಸಿದ್ದರು. ಈ ವಿಧಾನವೇ ಅವರಿಗೆ ಯಶಸ್ಸನ್ನು ತಂದುಕೊಟ್ಟಿತು.

ಲಘಿಮಾ ಯುಪಿಎಸ್‌ಸಿ ಮುಖ್ಯ ಪರೀಕ್ಷೆಗೆ ತನ್ನ ಐಚ್ಛಿಕ ವಿಷಯವಾಗಿ ಮಾನವಶಾಸ್ತ್ರವನ್ನು ಆರಿಸಿಕೊಂಡರು. ನೀವು ಕಷ್ಟಪಟ್ಟು ಕೆಲಸ ಮಾಡಿದರೆ ಯಾವುದೇ ಆಯ್ಕೆಯು ನಿಮಗೆ ಯಶಸ್ಸಿನ ಬಾಗಿಲು ತೆರೆಯುತ್ತದೆ ಎಂಬುದನ್ನು ಈ ಮೂಲಕ ಅವರು ಸಾಬೀತುಪಡಿಸಿದರು.

ಲಘಿಮಾ ತನ್ನ ಯಶಸ್ಸಿನ ಮನ್ನಣೆಯನ್ನು ತನ್ನ ಹೆತ್ತವರಿಗೆ ನೀಡಿದ್ದಾರೆ. ಅವರ ಕುಟುಂಬ ಸದಾ ಜೊತೆಗಿದ್ದು, ಅವರ ಸ್ಫೂರ್ತಿಯಿಂದಲೇ ಯಶಸ್ಸು ಲಭಿಸಿದೆ ಎಂವುವುದು ಅವರ ಹೇಳಿಕೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ: -ಅಮುಗೆ ರಾಯಮ್ಮ .!ಧರ್ಮಸ್ಥಳ ಪ್ರಕರಣ: ಮಣ್ಣು ಅಗೆದಂತೆ ನೀರು ತುಂಬುತ್ತಿದ್ದು, ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆ