LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಾಳೆಯಿಂದ ಲಕ್ಷದೀಪೋತ್ಸವ ಸಂಭ್ರಮ..!

ಮಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ ನಾಳೆಯಿಂದ ಮೊದಲುಗೊಂಡು ನವೆಂಬರ್ 30ರವರೆಗೆ ನಡೆಯಲಿದೆ.‌

ಲಕ್ಷದೀಪೋತ್ಸವದ ಅಂಗವಾಗಿ ನವೆಂಬರ್ 26ರಂದು, ಹೊಸಕಟ್ಟೆ ಉತ್ಸವ, 27ರಂದು ಕೆರೆಕಟ್ಟೆ ಉತ್ಸವ, 28ರಂದು ಲಲಿತೋದ್ಯಾನ ಉತ್ಸವ, 29ರಂದು ಕಂಚಿಮಾರು ಕಟ್ಟೆ ಉತ್ಸವ ಹಾಗೂ 30ರಂದು, ಗೌರಿ ಮಾರುಕಟ್ಟೆ ಉತ್ಸವ ದೀಪೋತ್ಸವ ನಡೆಯಲಿದೆ.

ಲಕ್ಷದೀಪೋತ್ಸವದ ಪ್ರಯುಕ್ತ, ನ.29ರಂದು 92ನೇ ಸರ್ವಧರ್ಮ ಸಮ್ಮೇಳನ‌ ನಡೆಯಲಿದೆ‌. ಅಂದು ಸಂಜೆ 5ಗಂಟೆಗೆ ಗೃಹಸಚಿವ ಜಿ.ಪರಮೇಶ್ವರ್ ಸರ್ವಧರ್ಮ ಸಮ್ಮೇಳನದ ಅಧಿವೇಶನವನ್ನು ಉದ್ಘಾಟಿಸಲಿದ್ದಾರೆ.

ಬೆಂಗಳೂರು ರಾಜರಾಜೇಶ್ವರಿ ನಗರದದ ಕೈಲಾಸ ಆಶ್ರಮ ಮಹಾಸಂಸ್ಥಾನದ ಶ್ರೀ ಜಯೇಂದ್ರ ಪುರಿ ಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ನ‌.30ರಂದು ಸಂಜೆ 5ಗಂಟೆಗೆ ಸಾಹಿತ್ಯ ಸಮ್ಮೇಳನವನ್ನು ಬಹುಶ್ರುತ ವಿದ್ವಾಂಸ ಶತಾವಧಾನಿ ಡಾ‌.ಆರ್.ಗಣೇಶ್ ಅವರು ಉದ್ಘಾಟಿಸಲಿದ್ದಾರೆ‌. ಲೇಖಕ, ಸಂಶೋಧಕ ಡಾ.ಪಾದೆಕಲ್ಲು ವಿಷ್ಣು ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮತಗಳ್ಳತನ: 'ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ'- ಸಿಎಂಧರ್ಮಸ್ಥಳ: ನೂರಾರು ಶವ ಹೂತಿಟ್ಟ ಪ್ರಕರಣ; ಪಾಯಿಂಟ್ ನಂ. 6 ರಲ್ಲಿ ಅಸ್ಥಿಪಂಜರ ಅವಶೇಷ ಪತ್ತೆ…!ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣ : ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್‌ ದೋಷಮುಕ್ತಿವರ್ಲ್ಡ್‌ ಚಾಂಪಿಯನ್​ಶಿಪ್ ಆಫ್ ಲೆಜೆಂಡ್ಸ್ (WCL 2025) | ಸೆಮಿಫೈನಲ್ಸ್ ಆಡದೆ ಫೈನಲ್ ಪ್ರವೇಶಿಸಿದ ಪಾಕ್ಕೇಂದ್ರ ಸೇವೆಗೆ ಪ್ರಣವ್‌ ಮೊಹಾಂತಿ: ಎಸ್‌ಐಟಿ ಮುಖ್ಯಸ್ಥರ ಬದಲಾವಣೆ?ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೀನುಗಾರರು ನೀರುಪಾಲುಬಿಗ್‌ಬಾಸ್ ಸೀಸನ್‌-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಇವರೇ ಸೆಲೆಬ್ರಿಟಿಗಳು?ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆಆ. 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿ