Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

₹7 ಕೋಟಿ ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿಪೂಜೆ

ಬಿಜಗರಣಿ-ಬಡಸ್-ಬಾಕನೂರು ಸಂಪರ್ಕ ಸೇತುವೆ ಸೇರಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಚುನಾವಣೆ ವೇಳೆ ಬಂದು ಭಾಷಣ ಮಾಡುವವರನ್ನು ನಂಬಬೇಡಿ; 365 ದಿನವೂ ಜನರೊಂದಿಗೆ ನಿಲ್ಲುವ ನನ್ನ ಜೊತೆ ನೀವೂ ನಿಲ್ಲಿ: ಮಾಜಿ ಸಚಿವೆ
ಬೆಳಗಾವಿ, ಅ.24: ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ಗ್ರಾಮಗಳ ನಡುವಿನ ಸಂಪರ್ಕ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಸುಮಾರು 7 ಕೋಟಿ ರೂ. ವೆಚ್ಚದ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶನಿವಾರ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಬಿಜಗರಣಿ-ಬಡಸ್-ಬಾಕನೂರು ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ, ಬಾಕನೂರು-ಗೋಲ್ಯಾಳಿ ಸಂಪರ್ಕ ರಸ್ತೆ ಹಾಗೂ ಬಿಜಗರಣಿ-ಜಾನೇವಾಡಿ, ಜಾನೇವಾಡಿ-ಕರ್ಲೆ ಸಂಪರ್ಕ ರಸ್ತೆ ಕಾಮಗಾರಿಗಳು ಇದರಲ್ಲಿ ಸೇರಿವೆ.
2 ಕೋಟಿ ರೂ. ವೆಚ್ಚದಲ್ಲಿ ಸಂಪರ್ಕ ಸೇತುವೆ
ಬಿಜಗರಣಿ-ಬಡಸ್-ಬಾಕನೂರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ಸೇತುವೆ ನಿರ್ಮಾಣಕ್ಕೆ ಸುಮಾರು 2 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಲಕ್ಷ್ಮೀ ಹೆಬ್ಬಾಳಕರ್ ಭೂಮಿಪೂಜೆ ನೆರವೇರಿಸಿದರು.
ಗ್ರಾಮಸ್ಥರಿಗೆ ನೀಡಿದ್ದ ಭರವಸೆಯಂತೆ ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕಾಮಗಾರಿಯನ್ನು ಗುಣಮಟ್ಟದಿಂದ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ವಿವಿಧ ಗ್ರಾಮಗಳ ಹಿರಿಯರು, ಗ್ರಾಮಸ್ಥರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಬಾಕನೂರು-ಗೋಲ್ಯಾಳಿ ರಸ್ತೆಗೆ 1 ಕೋಟಿ ರೂ.
ಬಳಿಕ ಬಾಕನೂರು-ಗೋಲ್ಯಾಳಿ ಗ್ರಾಮಗಳನ್ನು ಸಂಪರ್ಕಿಸುವ ಮುಖ್ಯ ರಸ್ತೆ ನಿರ್ಮಾಣ ಕಾಮಗಾರಿಗೆ ಸ್ಥಳೀಯರ ಸಮ್ಮುಖದಲ್ಲಿ ಭೂಮಿಪೂಜೆ ನೆರವೇರಿಸಿದರು. ಸುಮಾರು 1 ಕೋಟಿ ರೂ. ಅನುದಾನದಲ್ಲಿ ರಸ್ತೆ ನಿರ್ಮಾಣಗೊಳ್ಳಲಿದ್ದು, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವಂತೆ ಸೂಚಿಸಿದರು.
ಈ ವೇಳೆ ಯುವರಾಜ ಕದಂ, ಬಾಳು ದೇಸೂರಕರ್, ಮನೋಹರ್ ಬೆಳಗಾಂವ್ಕರ್, ಎಸ್.ಎಲ್. ಚೌಗುಲೆ, ನಾರಾಯಣ ಗೋಡ್ಸೆ, ಸುರೇಶ್ ನಾಯಿಕ್, ಪರಸು ಮಜುಕರ್, ರಾಮನಿಂಗ್ ಸಾವಂತ, ಪಿರಾಜಿ ಮೆನಸೆ, ವಿಠ್ಠಲ ಮಜುಕರ್, ಪಾಂಡುರಂಗ ನಾಯಿಕ್, ಬಾರ್ಕು ನಾಯಿಕ್, ನಿಂಗು ಪುಲಮ್, ಅಶೋಕ್ ಮಜುಕರ್ ಹಾಗೂ ಗ್ರಾಮದ ಪಂಚ ಕಮಿಟಿ ಸದಸ್ಯರು ಉಪಸ್ಥಿತರಿದ್ದರು.
4 ಕೋಟಿ ರೂ. ವೆಚ್ಚದಲ್ಲಿ ಎರಡು ರಸ್ತೆ ಅಭಿವೃದ್ಧಿ
ಬಿಜಗರಣಿ-ಜಾನೇವಾಡಿ ಹಾಗೂ ಜಾನೇವಾಡಿ-ಕರ್ಲೆ ಗ್ರಾಮಗಳ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಗಳಿಗೂ ಆಯಾ ಗ್ರಾಮಸ್ಥರ ಸಮ್ಮುಖದಲ್ಲಿ ಭೂಮಿಪೂಜೆ ನೆರವೇರಿಸಲಾಯಿತು. ಈ ಎರಡು ರಸ್ತೆ ಕಾಮಗಾರಿಗಳಿಗೆ ಒಟ್ಟು ಸುಮಾರು 4 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಲಾಗಿದೆ.
ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ವಿಶೇಷ ಕಾಳಜಿ ವಹಿಸಿ ಅನುದಾನ ಒದಗಿಸಲಾಗಿದ್ದು, ಕಾಮಗಾರಿಗಳಿಂದ ಗ್ರಾಮೀಣ ಭಾಗದ ಸಂಪರ್ಕ ವ್ಯವಸ್ಥೆ ಸುಧಾರಿಸಲಿದೆ.
ಈ ಸಂದರ್ಭದಲ್ಲಿ ಯುವರಾಜ ಕದಂ, ಬಾಳು ದೇಸೂರಕರ್, ಮನೋಹರ್ ಬೆಳಗಾಂವ್ಕರ್, ರಾಮಚಂದ್ರ ಗುರವ್, ಬಾಳು ಹೊಸೂರಕರ್, ಭರಮಾ ಕೆಬುಡೆ, ಮಲ್ಲಪ್ಪ ಮಾಸಿಕರ್, ಪರಶುರಾಮ ಗುರವ್, ನಾರಾಯಣ ಹೊನಗೇಕರ್, ಕಾಳು ಪಾವಸೆ, ಭರಮಾ ಪಾವಸೆ, ರಾಮಚಂದ್ರ ಚಾಜೆಕರ್ ಮುಂತಾದವರು ಉಪಸ್ಥಿತರಿದ್ದರು.
ಅಭಿವೃದ್ಧಿ ಕೆಲಸಗಳ ಮೂಲಕ ಜನರ ಋಣ ತೀರಿಸುತ್ತಿದ್ದೇನೆ
ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, “ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರ ಆಶೀರ್ವಾದದಿಂದ ಇಂದು ರಾಜ್ಯದ ಮೂಲೆ ಮೂಲೆಗಳಲ್ಲಿ ಪರಿಚಿತಳಾಗಿದ್ದೇನೆ. ಅಭಿವೃದ್ಧಿ ಕೆಲಸಗಳ ಮೂಲಕ ನಿಮ್ಮ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ. ಪಕ್ಷ, ಜಾತಿ, ಧರ್ಮ ಯಾವುದನ್ನೂ ನೋಡದೆ ಕೆಲಸ ಮಾಡುತ್ತಿದ್ದೇನೆ” ಎಂದರು.
“ನನ್ನ ಅಭಿವೃದ್ಧಿಯ ವೇಗಕ್ಕೆ ತಡೆಯಾಗದಂತೆ ಮುಂದಿನ ದಿನಗಳಲ್ಲಿಯೂ ನಿಮ್ಮ ಆಶೀರ್ವಾದ ಬೇಕು. ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ, ಬೆಂಬಲ ಕೇಳುತ್ತಿದ್ದೇನೆ. ಚುನಾವಣೆಯ ಸಂದರ್ಭದಲ್ಲಿ ಬಂದು ಭಾಷಣ ಮಾಡುವವರನ್ನು ನಂಬಬೇಡಿ. ವರ್ಷದ 365 ದಿನವೂ ನಿಮ್ಮ ಜೊತೆ ನಿಲ್ಲುವ ನನ್ನ ಜೊತೆ ನೀವೂ ನಿಲ್ಲಬೇಕು. ಇಡೀ ಕ್ಷೇತ್ರದ ಜನ ಒಂದಾಗಿ ನಿಂತು ಅಭಿವೃದ್ಧಿಗೆ ಜೈ ಎನ್ನಬೇಕು” ಎಂದು ಮನವಿ ಮಾಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ