LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ'- ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9,000 ರೂಪಾಯಿಯಿಂದ 10,000 ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15,000 ರೂಪಾಯಿಯಿಂದ 16,000 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ 7ನೇ ದಿನವಾದ ಬುಧವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮಾತನಾಡಿದ ಅವರು, ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ. ಪ್ರಸ್ತುತ 5,601 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, 450 ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ 172 ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಗೌರವಧನ ಆಧಾರದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ವಿಕಲಚೇತನ ಗ್ರಾಮೀಣ ಹಾಗೂ ನಗರ ಪುನವರ್ಸತಿ ಕಾರ್ಯಕರ್ತರು ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದರು.

ಕಾರ್ಯಕರ್ತರನ್ನು ಕಾರ್ಮಿಕ ಇಲಾಖೆಯ ಕನಿಷ್ಠ ವೇತನಕ್ಕೊಳಪಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆರ್ಥಿಕ ಇಲಾಖೆಯ ಅನುಮೋದನೆಯಂತೆ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9,000 ರೂಪಾಯಿಯಿಂದ 10,000 ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15,000 ರೂಪಾಯಿಯಿಂದ 12,000 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026