Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಿಎಂ ಡಿ.ಕೆ ಶಿವಕುಮಾರ್‌ರನ್ನು ಕುಟುಂಬ ಸಮೇತ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್?

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ, ಬೆಳಗಾವಿಯಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧಿಕೃತ ಕಚೇರಿಗೆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ಕುಟುಂಬ ಸಮೇತ ಭೇಟಿ ನೀಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿಗಳ ನಿವಾಸದಲ್ಲಿ ಸೌಹಾರ್ದಯುತ ವಾತಾವರಣದಲ್ಲಿ ನಡೆದ ಈ ದಿಢೀರ್ ಭೇಟಿ ಹಾಗೂ ಸುದೀರ್ಘ ಮಾತುಕತೆ ಪ್ರಸ್ತುತ ರಾಜಕೀಯ ವಲಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

ಮುಂಜಾನೆಯೇ ಸಿಎಂ ಕಚೇರಿಗೆ ಲಗ್ಗೆ ಇಟ್ಟ ಕುಟುಂಬ!:
ವಿಶೇಷವೆಂದರೆ, ಮುಖ್ಯಮಂತ್ರಿಗಳನ್ನು ಭೇಟಿಯಾಗಲು ಲಕ್ಷ್ಮೀ ಹೆಬ್ಬಾಳ್ಕರ್ ಇಡೀ ಕುಟುಂಬದೊಂದಿಗೆ ಆಗಮಿಸಿದ್ದರು. ಒಂದು ವಾಹನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ ಮೊದಲೇ ಆಗಮಿಸಿದ್ದರೆ, ಮತ್ತೊಂದು ವಾಹನದಲ್ಲಿ ಅವರ ತಾಯಿ ಗಿರಿಜಾ ಹಟ್ಟಿಹೊಳಿ ಹಾಗೂ ಇಬ್ಬರು ಸಹೋದರಿಯರು ಸಿಎಂಗೆ ಟಿಫನ್ (ಉಪಹಾರ) ತೆಗೆದುಕೊಂಡು ಆಗಮಿಸಿದ್ದರು ಎಂದು ಮೂಲಗಳು ತಿಳಿಸಿವೆ. ಭೇಟಿಯ ವೇಳೆ ಸಿಎಂ ಮತ್ತು ಹೆಬ್ಬಾಳ್ಕರ್ ಕುಟುಂಬಸ್ಥರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಮಂತ್ರಿಗಿರಿ ರಹಸ್ಯ ಚರ್ಚೆ?:
ಈ ಮಹತ್ವದ ಸಭೆಯಲ್ಲಿ ಯಾವ ವಿಷಯಗಳ ಕುರಿತು ಚರ್ಚೆ ನಡೆಯಿತು ಎಂಬ ಬಗ್ಗೆ ಇನ್ನು ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದಾಗ್ಯೂ, ಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಂಪುಟ ಸೇರ್ಪಡೆ ಹಾಗೂ ತಮಗೆ ಸಿಗಬೇಕಾದ ಪ್ರಾತಿನಿಧ್ಯದ ಕುರಿತಾಗಿಯೇ ಸಿಎಂ ಜೊತೆ ಗಂಭೀರ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ವಿವಿಧ ಕಾಂಗ್ರೆಸ್ ನಾಯಕರು ಹಾಗೂ ಶಾಸಕರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಹಂತದಲ್ಲೇ ಬೆಳಗಾವಿಯಲ್ಲಿ ಹೆಬ್ಬಾಳ್ಕರ್ ಕುಟುಂಬ ಸಮೇತ ಮುಖ್ಯಮಂತ್ರಿಗಳನ್ನು ಭೇಟಿಯಾಗಿರುವುದು ರಾಜಕೀಯ ಲೆಕ್ಕಾಚಾರಗಳನ್ನು ಮತ್ತಷ್ಟು ಬಿಗಿಗೊಳಿಸಿದೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ